ಬೆಂಗಳೂರು: ಇದೇ 30-06-2020ಕ್ಕೆ ಪದವಿಧರ ಹಾಗೂ ಶಿಕ್ಷಕರ ಕ್ಷೇತ್ರದ ನಾಲ್ಕು ಸ್ಥಾನಗಳಿಗೆ ಅವಧಿ ಪೂರ್ಣಗೊಳ್ಳಲಿದೆ. ಆದರೆ ಸದ್ಯ ಕೋವಿಡ್ 19 ಸೋಂಕು ನಿಯಂತ್ರಣದ ಉದ್ದೇಶದಿಂದ 2 ಪದವಿಧರ ಹಾಗೂ 2-ಶಿಕ್ಷಕರ ಮತಕ್ಷೇತ್ರಗಳಿಗೆ ನಡೆಯಬೇಕಿದ್ದ ಚುನಾವಣೆ ಕುರಿತು ಚುನಾವಣಾ ಆಯೋಗ ಮಹತ್ವದ ಆದೇಶ ನೀಡಿದೆ.

ರಾಜ್ಯದ ಮುಖ್ಯ ಚುನಾವಣಾಧಿಕಾರಿಗಳಿಂದ ದಿನಾಂಕ 30-05-2020 ರಂದು ಈ ಬಗ್ಗೆ ಕೇಂದ್ರ ಚುನಾವಣಾ ಆಯೋಗ ವರದಿಯನ್ನು ಪಡೆದುಕೊಂಡಿದೆ. ವರದಿ ಪರಿಶೀಲಿಸಿ ಭಾರತ ಸಂವಿಧಾನದ 324ನೇ ಪರಿಚ್ಛೇದದ 1951ರ ಜನಪ್ರತಿನಿಧಿ ಕಾಯ್ದೆ ಸೆಕ್ಷನ್ 16ರ ಅಡಿಯಲ್ಲಿ ಅವಧಿ ಪೂರ್ಣಗೊಳ್ಳುವ ವಿಧಾನ ಪರಿಷತ್ ಸ್ಥಾನಗಳಿಗೆ ನಡೆಸಬೇಕಿದ್ದ ಚುನಾವಣೆಯನ್ನು ಸದ್ಯಕ್ಕೆ ನಡೆಸದಿರುವ ಬಗ್ಗೆ ಚುನಾವಣಾ ಆಯೋಗ ಆದೇಶಿಸಿದೆ.

ಕೊರೊನಾ ಸೋಂಕು ನಿಯಂತ್ರಣದ ಪರಿಸ್ಥಿತಿಯನ್ನು ಅವಲೋಕಿಸಿ ಮುಂದೆ ಚುನಾವಣೆ ನಡೆಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಚುನಾವಣಾ ಆಯೋಗ ಕಾರ್ಯದರ್ಶಿ ಸುಮನ್ ಕುಮಾರ್ ದಾಸ್ ಆದೇಶ ಹೊರಡಿಸಿದ್ದಾರೆ.  

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿಂದು 213 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 213 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 7213…

ಜನರು ಎಚ್ಚರ ತಪ್ಪಿದರೆ, ದೊಡ್ಡ ಅಪಾಯ ಸಂಭವಿಸಬಹುದು!!

ಜನರು ಎಚ್ಚರ ತಪ್ಪಿದರೆ, ದೊಡ್ಡ ಅಪಾಯ ಸಂಭವಿಸಬಹುದು!! ಬೆಂಗಳೂರು : ಕೊರೊನಾ ಲಾಕ್ ಡೌನ್ ನ್ನು…

ಕೊರೊನಾ ಸಂಕಷ್ಟ ಪರಿಹಾರಕ್ಕೆ ಸಿರಿವಂತರ ಮೇಲೆ ತೆರಿಗೆ ವಿಧಿಸಿ

ಬೆಂಗಳೂರು: ಸಾಹಿತಿ, ಕಲಾವಿದರು, ಜನಪರ ಹೋರಾಟಗಾರರು ಕೊರೊನಾ ಸಂಕಷ್ಟ ಪರಿಹಾರಕ್ಕಾಗಿ ಸಿರಿವಂತರ ಮೇಲೆ ಹೆಚ್ಚಿನ ತೆರಿಗೆ…

ಅಟೋ, ಟ್ಯಾಕ್ಸಿ ಚಾಲಕರಿಗೆ ಸರ್ಕಾರದ 5000 ಸಿಗುವುದು ಯಾವಾಗ..?

ರಾಜ್ಯ ಸರ್ಕಾರ ಅಟೋ,ಟ್ಯಾಕ್ಸಿ ಚಾಲಕರಿಗೆ 5000 ಸಹಾಯ ಧನ ಘೋಷಣೆ ಆಗಿ 15 ದಿನಗಳು ಆಗುತ್ತಾ ಬಂದರೂ ಸರ್ಕಾರ ಮಾತ್ರ ಸೇವಾಸಿಂಧುವಿನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಿರಲಿಲ್ಲ. ಇದೀಗ ಸೇವಾ ಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ, ಆದರೆ….