ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಕೊರೊನಾ ತನ್ನ ಅಟ್ಟಹಾಸ ಮುಂದುವರೆಸಿದ್ದು, ಸಮುದಾಯ ಹಂತ ತಲುಪಿದೆ. ಆದರೆ, ಕೇಂದ್ರ ಸರ್ಕಾರದ ಘೋಷಣೆಗಾಗಿ ಕಾಯುತ್ತಿದ್ದೇವೆ ಎಂದು ಆರೋಗ್ಯ ಸಚಿವ ಸತ್ಯೇಂದರ್ ಜೈನ್ ತಿಳಿಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮುದಾಯದ ಹಂತ ತಲುಪಿರುವುದಕ್ಕೆ ಏಮ್ಸ್ ನಿರ್ದೇಶಕ ಡಾ. ರಂದೀಪ್ ಗುಲೇರಿಯಾ ಒಪ್ಪಿಕೊಂಡಿದ್ದಾರೆ. ಆದರೆ, ಈ ಕುರಿತು ಘೋಷಣೆ ಮಾಡುವ ವಿಚಾರ ಕೇಂದ್ರ ಸರ್ಕಾರಕ್ಕೆ ಬಿಟ್ಟಿದ್ದು ಎಂದು ಅವರು ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಏಮ್ಸ್ ನಿರ್ದೇಶಕ ರಂದೀಪ್ ಗುಲೇರಿಯಾ, ದೆಹಲಿಯಲ್ಲಿ ಕೊರೊನಾ ಸಮುದಾಯದ ಹಂತ ತಲುಪಿದೆ. ಆದರೆ, ಕೇಂದ್ರ ಸರ್ಕಾರ ಇದನ್ನು ಒಪ್ಪಿಕೊಳ್ಳುತ್ತಿಲ್ಲ. ಸಮುದಾಯ ತಲುಪಿರುವ ಕುರಿತು ನಾವು ಘೋಷಣೆ ಮಾಡಲು ಸಾಧ್ಯವಿಲ್ಲ. ಕೇಂದ್ರ ಸರ್ಕಾರವೇ ಇದನ್ನು ಘೋಷಣೆ ಮಾಡಬೇಕು ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ತಾಯಿಯನ್ನು ಜೀವಂತವಾಗಿಯೇ ಹೂತಿದ್ದ ಪಾಪಿ ಮಗ!

ಪಾಪಿ ಮಗನೊಬ್ಬ ತನ್ನ 79 ವರ್ಷದ ತನ್ನ ತಾಯಿಯನ್ನು ಜೀವಂತವಾಗಿಯೇ ಸಮಾಧಿ ಮಾಡಿರುವ ಘಟನೆ ನಡೆದಿದೆ.

ರಾಜ್ಯದಲ್ಲಿಂದು 271 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ರಾಜ್ಯದಲ್ಲಿಂದು 271 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 6516 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 464. ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 3440 ಕೇಸ್ಗಳು. ಈ ಮೂಲಕ ರಾಜ್ಯದಲ್ಲಿ ಈವರೆಗೆ 2995 ಸಕ್ರೀಯ ಪ್ರಕರಣಗಳಿವೆ.

ಶುಭ ಸುದ್ದಿ: ನಿಮ್ಮ ಮಗುವಿಗೆ ‘ಆಧಾರ್’ ಕಾರ್ಡ್ ಪಡೆಯಲು ಇಲ್ಲಿದೆ ಮಾಹಿತಿ

ದೇಶದಲ್ಲಿ ಜನಿಸಿದ ನವಜಾತ ಶಿಶುಗಳಿಗೆ ಆಧಾರ್ ಸೌಲಭ್ಯವನ್ನು ಒದಗಿಸಲಾಗಿದೆ.