ಬೆಂಗಳೂರು: ಕಾಂಗ್ರೆಸ್ ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಜೀವ ಬೆದರಿಕೆಯ ಕರೆ ಬಂದಿದೆ ಎಂದು ಅವರ ಮಗ ಹಾಗೂ ಶಾಸಕ ಪ್ರಿಯಾಂಕ್ ಖರ್ಗೆ, ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಅವರು ಸದ್ಯ ಕಾಂಗ್ರೆಸ್ ನಿಂದ ರಾಜ್ಯಸಭಾ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದಾರೆ. ಈ ಕಾರಣದಿಂದಾಗಿ ಅವರಿಗೆ ಬೆದರಿಕೆ ಹಾಕಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.
ಜೂ. 7ರ ಮಧ್ಯರಾತ್ರಿ ಹಿಂದಿ, ಇಂಗ್ಲಿಷ್ ಭಾಷೆಯಲ್ಲಿ ಅಪರಿಚಿತ ವ್ಯಕ್ತಿ ಕರೆ ಮಾಡಿ ಬೆದರಿಕೆ ಹಾಕಿದ್ದಾನೆ. ಅಲ್ಲದೇ, ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ್ದಾನೆ ಎಂದು ಡಿಜಿ ಪ್ರವೀಣ್‌ಸೂದ್ ಗೆ ಪ್ರಿಯಾಂಕ ಖರ್ಗೆ ದೂರು ನೀಡಿದ್ದಾರೆ. ಅಲ್ಲದೇ, ಈ ಕುರಿತು ಸೂಕ್ತ ತನಿಖೆ ನಡೆಸಬೇಕೆಂದು ಶಾಸಕ ಪ್ರಿಯಾಂಕ ಖರ್ಗೆ ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಪಕ್ಷಕ್ಕೆ ಕೆಲವರಿಂದ ಮುಜುಗರ ಉಂಟಾಗುತ್ತಿದೆ: ಶಾಸಕ ರಾಮದಾಸ್

ಮೈಸೂರು ಪಾಲಿಕೆಯಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಮೈತ್ರಿ ಬಗ್ಗೆ ಇನ್ನೂ ಮಾತುಕತೆ ನಡೆದಿಲ್ಲ ಎಂದು ಶಾಸಕ ಎಸ್.ಎ.ರಾಮದಾಸ್ ಹೇಳಿದ್ದಾರೆ.

ಗದಗ ಎಸ್ಪಿ ಯತೀಶ ಎನ್ ವರ್ಗಾವಣೆ

ಉತ್ತರಪ್ರಭ ಸುದ್ದಿ ಗದಗ: ಗದಗ ಜಿಲ್ಲೆಗೆ ನೂತನ ಎಸ್ಪಿ ಯಾಗಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶಿವಪ್ರಕಾಶ್ ದೇವರಾಜು ಅವರನ್ನು ನೂತನ ಪೋಲಿಸ್ ವರಿಷ್ಠಾಧಿಕಾರಿಗಳಾಗಿ ಆಗಮಿಸಲಿದ್ದು .ಎನ್ ಯತೀಶರವರನ್ನು ಮಂಡ್ಯ ಜಿಲ್ಲೆಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ .ಎನ್ ಯತೀಶರವರು ಕೊವಿಡ್ ಸಮಯದಲ್ಲಿ ಮಾಡಿದ ಕಾರ್ಯ ಗದುಗಿನ ಜನತೆ ಮರೆಯಲಾರರು.

ಕೊರೋನಾ ಸೋಂಕು ತಪಾಸಣೆಗೆ ಒಳಪಡುವವರು ಬೇರೆಯವರ ಮೊಬೈಲ್ ನಮೂದಿಸಬೇಡಿ: ಸುಧಾಕರ್

ಕೊರೋನಾ ಸೋಂಕು ತಪಾಸಣೆಗೆ ಒಳಪಡುವ ಸಾರ್ವಜನಿಕರು ತಾವು ಬಳಸುವ ತಮ್ಮದೇ ಮೊಬೈಲ್ ಸಂಖ್ಯೆಯನ್ನು ಅಧಿಕೃತ ನಮೂನೆಯಲ್ಲಿ ದಾಖಲಿಸುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾಕ್ಟರ್ ಕೆ.ಸುಧಾಕರ್ ಮನವಿ ಮಾಡಿದ್ದಾರೆ .