ಬೆಂಗಳೂರು: ಕಾಂಗ್ರೆಸ್ ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಜೀವ ಬೆದರಿಕೆಯ ಕರೆ ಬಂದಿದೆ ಎಂದು ಅವರ ಮಗ ಹಾಗೂ ಶಾಸಕ ಪ್ರಿಯಾಂಕ್ ಖರ್ಗೆ, ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಅವರು ಸದ್ಯ ಕಾಂಗ್ರೆಸ್ ನಿಂದ ರಾಜ್ಯಸಭಾ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದಾರೆ. ಈ ಕಾರಣದಿಂದಾಗಿ ಅವರಿಗೆ ಬೆದರಿಕೆ ಹಾಕಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.
ಜೂ. 7ರ ಮಧ್ಯರಾತ್ರಿ ಹಿಂದಿ, ಇಂಗ್ಲಿಷ್ ಭಾಷೆಯಲ್ಲಿ ಅಪರಿಚಿತ ವ್ಯಕ್ತಿ ಕರೆ ಮಾಡಿ ಬೆದರಿಕೆ ಹಾಕಿದ್ದಾನೆ. ಅಲ್ಲದೇ, ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ್ದಾನೆ ಎಂದು ಡಿಜಿ ಪ್ರವೀಣ್‌ಸೂದ್ ಗೆ ಪ್ರಿಯಾಂಕ ಖರ್ಗೆ ದೂರು ನೀಡಿದ್ದಾರೆ. ಅಲ್ಲದೇ, ಈ ಕುರಿತು ಸೂಕ್ತ ತನಿಖೆ ನಡೆಸಬೇಕೆಂದು ಶಾಸಕ ಪ್ರಿಯಾಂಕ ಖರ್ಗೆ ಆಗ್ರಹಿಸಿದ್ದಾರೆ.