ಜೈಪುರ: ಮಹಾಮಾರಿಯ ಅಟ್ಟಹಾಸ ದೇಶದ ಹಲವು ರಾಜ್ಯಗಳಲ್ಲಿ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ರಾಜಸ್ಥಾನದ ಗಡಿ ಬಂದ್ ಮಾಡಲಾಗಿದೆ.

ಒಂದು ವಾರದ ಮಟ್ಟಿಗೆ ರಾಜಸ್ತಾನ ಸರ್ಕಾರ ರಾಜ್ಯದ ಎಲ್ಲಾ ಗಡಿಗಳನ್ನು ಬಂದ್ ಮಾಡಿದೆ. ಎನ್ಒಸಿ ಪ್ರಮಾಣ ಪತ್ರವಿಲ್ಲದೆ ಯಾರೊಬ್ಬರೂ ರಾಜ್ಯ ಪ್ರವೇಶಿಸುವಂತಿಲ್ಲ. ಅಲ್ಲದೆ, ಪಾಸ್ ಗಳಿಲ್ಲದೆ, ರಾಜ್ಯದಿಂದ ಯಾರೊಬ್ಬರು ಹೊರಗೆ ಹೋಗುವಂತಿಲ್ಲ ಎಂದು ಸರ್ಕಾರ ತಿಳಿಸಿದೆ.

ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ಆಯುಕ್ತರಿಗೆ ಪಾಸ್ ವಿತರಿಸುವ ಹೊಣೆಯನ್ನು ನೀಡಲಾಗಿದ್ದು, ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಹಾಗೂ ಸಾವಿಗೀಡಾದ ಕುಟುಂಬಸ್ಥರಿಗೆ ಆದೇಶದಲ್ಲಿ ವಿನಾಯಿತಿ ನೀಡಲಾಗಿದೆ. ರಾಜ್ಯದಲ್ಲಿ ಇಲ್ಲಿಯವರೆಗೂ 11,368 ಜನರಿಗೆ ಸೋಂಕು ತಗುಲಿದೆ.

Leave a Reply

Your email address will not be published. Required fields are marked *

You May Also Like

ದೀಪಾವಳಿಗೆ ಸಾರಿಗೆ ಸಂಸ್ಥೆಯಿಂದ ಹೆಚ್ಚುವರಿ ಬಸ್!

ಬೆಂಗಳೂರ : ದೀಪಾವಳಿಯ ಅಂಗವಾಗಿ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಸಾರಿಗೆ ಸಂಸ್ಥೆ 1 ಸಾವಿರ ಹೆಚ್ಚುವರಿ ಬಸ್ ಗಳನ್ನು ಓಡಿಸಲು ಮುಂದಾಗಿದೆ.

ರಾಜ್ಯದಲ್ಲಿಂದು 161 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ರಾಜ್ಯದಲ್ಲಿಂದು 161 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 5921 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 164. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 2605 ಕೇಸ್ ಗಳು. ಈ ಮೂಲಕ ರಾಜ್ಯದಲ್ಲಿ ಈವರೆಗೆ 3248 ಸಕ್ರೀಯ ಪ್ರಕರಣಗಳಿವೆ.

ಅಂದು ವಿಶ್ವ ಕಪ್ ತಂದು ಕೊಟ್ಟ ತಂಡದಲ್ಲಿ ಕ್ರಿಕೆಟಿಗ ಯಶ್ ಪಾಲ್ ಇನ್ನಿಲ್ಲ!

ನವದೆಹಲಿ: 1983 ರಲ್ಲಿ ಭಾರತ ತಂಡ ವಿಶ್ವ ಕಪ್ ತನ್ನ ಮುಡಿಗೇರಿಸಿಕೊಂಡಿತ್ತು. ಇದು ಭಾರತದ ಕ್ರೀಕೆಟ್ ಇತಿಹಾಸದಲ್ಲಿ ಮಹತ್ವದ ವರ್ಷವಾಗಿತ್ತು. ಕ್ರೀಕೆಟ್ ಇತಿಹಾಸದಲ್ಲಿ ಭಾರತಕ್ಕೊಂದು ಮೈಲುಗಲ್ಲಾದ 1983 ರ ವಿಶ್ವಕಪ್ ಪಡೆದ ತಂಡದ ಸದಸ್ಯರೊಬ್ಬರು ನಿಧನ ಹೊಂದಿದ್ದಾರೆ. ಹೌದು, ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರ ಯಶ್ ಪಾಲ್ ಶರ್ಮಾ ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ.

263 ಕೋಟಿ ರೂ. ಸೇತುವೆ: 29 ದಿನಕ್ಕೇ ಕುಸಿದು ನದಿಗೆ ಬಿತ್ತು!

263 ಕೋಟಿ ರೂ. ವೆಚ್ಚದಲ್ಲಿ ನದಿ ಮೇಲೆ ನಿರ್ಮಿಸಿದ್ದ ಈ ಸೇತುವೆ ಜೂನ್ 16ರಂದು ಉದ್ಘಾಟನೆಯಾಗಿತ್ತು. ಬುಧವಾರ ಧಡಾರನೆ ಕುಸಿದು ನದಿಯೊಳಕ್ಕೆ ಬಿದ್ದಿದೆ!