ಬೆಂಗಳೂರು: ಕೋವಿಡ್-19 ನಿಯಂತ್ರಣದ ವಿಷಯದಲ್ಲಿ ಕರ್ನಾಟಕದ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಕೈಗೊಳ್ಳುತ್ತಿರುವ ದಿನಕ್ಕೊಂದು ನಿರ್ಧಾರ ಅಪಾಯಕಾರಿಯಾದುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟರ್ ಮೂಲಕ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವಾಗ ನಿಯಂತ್ರಣ ಕ್ರಮಗಳನ್ನು ಇನ್ನಷ್ಟು ಬಿಗಿಗೊಳಿಸಬೇಕಾಗಿರುವ ರಾಜ್ಯ ಸರ್ಕಾರ ಪ್ರತಿದಿನ ಸಡಿಲಿಸಿ ಜವಾಬ್ದಾರಿಯಿಂದ ಜಾರಿಕೊಳ್ಳುತ್ತಿದೆ ಎಂದು ಅವರು ಹೇಳಿದ್ದಾರೆ.
ಹೊರರಾಜ್ಯಗಳಿಂದ ಬಂದವರಿಗೆ 14 ದಿನದ ಸಾಂಸ್ಥಿಕ ಕ್ವಾರಂಟೈನ್ ಬದಲಿಗೆ ಹೋಮ್ ಕ್ವಾರಂಟೈನ್ ಮಾತ್ರ ಕಡ್ಡಾಯಗೊಳಿಸಿರುವುದು ಅತ್ಯಂತ ಬೇಜವಾಬ್ದಾರಿ ಕ್ರಮ. ಹೋಮ್ ಕ್ವಾರಂಟೈನ್ ಅವಧಿಯಲ್ಲಿ ಮೇಲ್ವಿಚಾರಣೆ ಮಾಡುವ ವ್ಯವಸ್ಥೆಯೇ ಇಲ್ಲದಿರುವಾಗ ಸೋಂಕು ತಗಲಿಸಿಕೊಂಡವರು ಇನ್ನಷ್ಟು ಜನರಿಗೆ ಸೋಂಕುಹರಡುವ ಸಾಧ್ಯತೆ ಇಲ್ಲವೇ? ಎಂದು ಅವರು ಪ್ರಶ್ನಿಸಿದ್ದಾರೆ.
ಸಾಂಸ್ಥಿಕ ಕ್ವಾರಂಟೈನ್ನ ಪ್ರಾರಂಭದಲ್ಲಿ ಮತ್ತು ಕೊನೆಯಲ್ಲಿ ಎರಡು ಬಾರಿ ಕೋವಿಡ್ ಪರೀಕ್ಷೆಗೊಳಪಡಿಸುತ್ತಿದ್ದ ನಿಯಮವನ್ನು ಬದಲಾಯಿಸಿ ಕ್ವಾರಂಟೈನ್ ಅವಧಿಯಲ್ಲಿ ರೋಗ ಲಕ್ಷಣಗಳು ಕಂಡುಬಂದರೆ ಮಾತ್ರ ಪರೀಕ್ಷೆಗೊಳಪಡಿಸಲು ನಿರ್ಧರಿಸಿರುವುದು ಅತ್ಯಂತ ಅಪಾಯಕಾರಿ ಕ್ರಮ ಎಂದು ಅವರು ಹೇಳಿದ್ದಾರೆ.
ಕೊರೊನಾ ಸೋಂಕಿತರಲ್ಲಿ 90% ಮಂದಿಯಲ್ಲಿ ರೋಗಲಕ್ಷಣಗಳೇ ಕಂಡು ಬಂದಿಲ್ಲ ಎಂದು ಆರೋಗ್ಯ ಇಲಾಖೆಯೇ ಒಪ್ಪಿಕೊಂಡಿರುವಾಗ, ಕ್ವಾರಂಟೈನ್ ಅವಧಿಯಲ್ಲಿ ರೋಗಲಕ್ಷಣ ಕಂಡುಬಂದರೆ ಮಾತ್ರ ಪರೀಕ್ಷೆಗೊಳಪಡಿಸುವ ಸಿಎಂ ನಿರ್ಧಾರ ಅಪಾಯಕಾರಿ ಆಗಬಹುದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

Leave a Reply

Your email address will not be published. Required fields are marked *

You May Also Like

ಚೀನಾ ಹಿಂದಿಕ್ಕಿ ಸಾಗುತ್ತಿದೆ ಭಾರತ!

ನವದೆಹಲಿ: ಮಹಾಮಾರಿ ಕೊರೊನಾ ಭಾರತದಲ್ಲಿ ತನ್ನ ಉಗ್ರ ಪ್ರತಾಪ ಮುಂದುವರೆಸಿದ್ದು, ದೇಶದಲ್ಲಿ 24 ಗಂಟೆಗಳಲ್ಲಿ 3,904…

ರಾಜ್ಯದಲ್ಲಿ ಕೆಡಿಇಎಮ್ ನಿಂದ 10 ಲಕ್ಷ ಉದ್ಯೋಗ ಸೃಷ್ಟಿ!

ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಕೆಡಿಇಎಮ್) 2025ರ ವೇಳೆಗೆ ರಾಜ್ಯದಲ್ಲಿ 10 ಲಕ್ಷ ಉದ್ಯೋಗ ಸೃಷ್ಟಿ ಮಾಡಲಿದೆ ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವಥ್ ನಾರಾಯಣ್ ಹೇಳಿದರು.

ಸಿಎಂ ಯಡಿಯೂರಪ್ಪ ರಾಜಾಹುಲಿ ಅಂದ್ರು ಆರ್.ಅಶೋಕ

ಚಾಮರಾಜನಗರ:ಹುಲಿಗೆ ಹಿಂದಿನಿಂದ ಆಡಳಿತ ಮಾಡಿ ಗೊತ್ತಿಲ್ಲ. ನೇರ ಆಡಳಿತವೇ ಸಿಎಂ ಯಡಿಯೂರಪ್ಪ ಅವರ ಸ್ವಭಾವ ಹೀಗಾಗಿ ಯಡಿಯೂರಪ್ಪ ರಾಜಾಹುಲಿ ಇದ್ದಂತೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.

ಕೊರ್ಲಹಳ್ಳಿ ಬಳಿ ಧರೆಗುರುಳಿದ ಮರ, ಮನೆಗಳು

ಗದಗ: ಜಿಲ್ಲೆಯ ಮುಂಡರಗಿ ತಾಲೂಕಿನ ಹಲವೆಡೆ ಭಾರಿ ಪ್ರಮಾಣದ ಮಳೆ ಮಿಶ್ರಿತ ಗಾಳಿ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ.