ಕೋವಿಡ್ ಸಂಬಂಧ ದಿನಕ್ಕೊಂದು ನಿರ್ಧಾರ ಅಪಾಯಕಾರಿ: ಸಿದ್ದರಾಮಯ್ಯ

siddaramayya

ಕೆ.ಎಸ್.ಆರ.ಟಿ.ಸಿ ನೌಕರರಿಗೆ 1 ವರ್ಷ ಸಂಬಳರಹಿತ ರಜೆ ನೀಡಲು ಹೊರಟಿರುವುದು ಕಾರ್ಮಿಕ ವಿರೋಧಿ ನಡೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.ಸರ್ಕಾರದ ಯೋಚನೆ ಕಾರ್ಮಿಕ ವಿರೋಧಿ ಮತ್ತು ಅಮಾನವೀಯ

ಬೆಂಗಳೂರು: ಕೋವಿಡ್-19 ನಿಯಂತ್ರಣದ ವಿಷಯದಲ್ಲಿ ಕರ್ನಾಟಕದ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಕೈಗೊಳ್ಳುತ್ತಿರುವ ದಿನಕ್ಕೊಂದು ನಿರ್ಧಾರ ಅಪಾಯಕಾರಿಯಾದುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟರ್ ಮೂಲಕ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವಾಗ ನಿಯಂತ್ರಣ ಕ್ರಮಗಳನ್ನು ಇನ್ನಷ್ಟು ಬಿಗಿಗೊಳಿಸಬೇಕಾಗಿರುವ ರಾಜ್ಯ ಸರ್ಕಾರ ಪ್ರತಿದಿನ ಸಡಿಲಿಸಿ ಜವಾಬ್ದಾರಿಯಿಂದ ಜಾರಿಕೊಳ್ಳುತ್ತಿದೆ ಎಂದು ಅವರು ಹೇಳಿದ್ದಾರೆ.
ಹೊರರಾಜ್ಯಗಳಿಂದ ಬಂದವರಿಗೆ 14 ದಿನದ ಸಾಂಸ್ಥಿಕ ಕ್ವಾರಂಟೈನ್ ಬದಲಿಗೆ ಹೋಮ್ ಕ್ವಾರಂಟೈನ್ ಮಾತ್ರ ಕಡ್ಡಾಯಗೊಳಿಸಿರುವುದು ಅತ್ಯಂತ ಬೇಜವಾಬ್ದಾರಿ ಕ್ರಮ. ಹೋಮ್ ಕ್ವಾರಂಟೈನ್ ಅವಧಿಯಲ್ಲಿ ಮೇಲ್ವಿಚಾರಣೆ ಮಾಡುವ ವ್ಯವಸ್ಥೆಯೇ ಇಲ್ಲದಿರುವಾಗ ಸೋಂಕು ತಗಲಿಸಿಕೊಂಡವರು ಇನ್ನಷ್ಟು ಜನರಿಗೆ ಸೋಂಕುಹರಡುವ ಸಾಧ್ಯತೆ ಇಲ್ಲವೇ? ಎಂದು ಅವರು ಪ್ರಶ್ನಿಸಿದ್ದಾರೆ.
ಸಾಂಸ್ಥಿಕ ಕ್ವಾರಂಟೈನ್ನ ಪ್ರಾರಂಭದಲ್ಲಿ ಮತ್ತು ಕೊನೆಯಲ್ಲಿ ಎರಡು ಬಾರಿ ಕೋವಿಡ್ ಪರೀಕ್ಷೆಗೊಳಪಡಿಸುತ್ತಿದ್ದ ನಿಯಮವನ್ನು ಬದಲಾಯಿಸಿ ಕ್ವಾರಂಟೈನ್ ಅವಧಿಯಲ್ಲಿ ರೋಗ ಲಕ್ಷಣಗಳು ಕಂಡುಬಂದರೆ ಮಾತ್ರ ಪರೀಕ್ಷೆಗೊಳಪಡಿಸಲು ನಿರ್ಧರಿಸಿರುವುದು ಅತ್ಯಂತ ಅಪಾಯಕಾರಿ ಕ್ರಮ ಎಂದು ಅವರು ಹೇಳಿದ್ದಾರೆ.
ಕೊರೊನಾ ಸೋಂಕಿತರಲ್ಲಿ 90% ಮಂದಿಯಲ್ಲಿ ರೋಗಲಕ್ಷಣಗಳೇ ಕಂಡು ಬಂದಿಲ್ಲ ಎಂದು ಆರೋಗ್ಯ ಇಲಾಖೆಯೇ ಒಪ್ಪಿಕೊಂಡಿರುವಾಗ, ಕ್ವಾರಂಟೈನ್ ಅವಧಿಯಲ್ಲಿ ರೋಗಲಕ್ಷಣ ಕಂಡುಬಂದರೆ ಮಾತ್ರ ಪರೀಕ್ಷೆಗೊಳಪಡಿಸುವ ಸಿಎಂ ನಿರ್ಧಾರ ಅಪಾಯಕಾರಿ ಆಗಬಹುದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

Exit mobile version