ಬೆಂಗಳೂರು: ಕೋವಿಡ್-19 ನಿಯಂತ್ರಣದ ವಿಷಯದಲ್ಲಿ ಕರ್ನಾಟಕದ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಕೈಗೊಳ್ಳುತ್ತಿರುವ ದಿನಕ್ಕೊಂದು ನಿರ್ಧಾರ ಅಪಾಯಕಾರಿಯಾದುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟರ್ ಮೂಲಕ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವಾಗ ನಿಯಂತ್ರಣ ಕ್ರಮಗಳನ್ನು ಇನ್ನಷ್ಟು ಬಿಗಿಗೊಳಿಸಬೇಕಾಗಿರುವ ರಾಜ್ಯ ಸರ್ಕಾರ ಪ್ರತಿದಿನ ಸಡಿಲಿಸಿ ಜವಾಬ್ದಾರಿಯಿಂದ ಜಾರಿಕೊಳ್ಳುತ್ತಿದೆ ಎಂದು ಅವರು ಹೇಳಿದ್ದಾರೆ.
ಹೊರರಾಜ್ಯಗಳಿಂದ ಬಂದವರಿಗೆ 14 ದಿನದ ಸಾಂಸ್ಥಿಕ ಕ್ವಾರಂಟೈನ್ ಬದಲಿಗೆ ಹೋಮ್ ಕ್ವಾರಂಟೈನ್ ಮಾತ್ರ ಕಡ್ಡಾಯಗೊಳಿಸಿರುವುದು ಅತ್ಯಂತ ಬೇಜವಾಬ್ದಾರಿ ಕ್ರಮ. ಹೋಮ್ ಕ್ವಾರಂಟೈನ್ ಅವಧಿಯಲ್ಲಿ ಮೇಲ್ವಿಚಾರಣೆ ಮಾಡುವ ವ್ಯವಸ್ಥೆಯೇ ಇಲ್ಲದಿರುವಾಗ ಸೋಂಕು ತಗಲಿಸಿಕೊಂಡವರು ಇನ್ನಷ್ಟು ಜನರಿಗೆ ಸೋಂಕುಹರಡುವ ಸಾಧ್ಯತೆ ಇಲ್ಲವೇ? ಎಂದು ಅವರು ಪ್ರಶ್ನಿಸಿದ್ದಾರೆ.
ಸಾಂಸ್ಥಿಕ ಕ್ವಾರಂಟೈನ್ನ ಪ್ರಾರಂಭದಲ್ಲಿ ಮತ್ತು ಕೊನೆಯಲ್ಲಿ ಎರಡು ಬಾರಿ ಕೋವಿಡ್ ಪರೀಕ್ಷೆಗೊಳಪಡಿಸುತ್ತಿದ್ದ ನಿಯಮವನ್ನು ಬದಲಾಯಿಸಿ ಕ್ವಾರಂಟೈನ್ ಅವಧಿಯಲ್ಲಿ ರೋಗ ಲಕ್ಷಣಗಳು ಕಂಡುಬಂದರೆ ಮಾತ್ರ ಪರೀಕ್ಷೆಗೊಳಪಡಿಸಲು ನಿರ್ಧರಿಸಿರುವುದು ಅತ್ಯಂತ ಅಪಾಯಕಾರಿ ಕ್ರಮ ಎಂದು ಅವರು ಹೇಳಿದ್ದಾರೆ.
ಕೊರೊನಾ ಸೋಂಕಿತರಲ್ಲಿ 90% ಮಂದಿಯಲ್ಲಿ ರೋಗಲಕ್ಷಣಗಳೇ ಕಂಡು ಬಂದಿಲ್ಲ ಎಂದು ಆರೋಗ್ಯ ಇಲಾಖೆಯೇ ಒಪ್ಪಿಕೊಂಡಿರುವಾಗ, ಕ್ವಾರಂಟೈನ್ ಅವಧಿಯಲ್ಲಿ ರೋಗಲಕ್ಷಣ ಕಂಡುಬಂದರೆ ಮಾತ್ರ ಪರೀಕ್ಷೆಗೊಳಪಡಿಸುವ ಸಿಎಂ ನಿರ್ಧಾರ ಅಪಾಯಕಾರಿ ಆಗಬಹುದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

Leave a Reply

Your email address will not be published. Required fields are marked *

You May Also Like

11 ಎಕರೆ ಹೊಲದಾನ್ ಗೋವಿನ ಜೋಳ ಬೆಂಕಿಗೆ ಆಹುತಿ!

ಆಕಸ್ಮಿಕ ಬೆಂಕಿಗೆ ಮೆಕ್ಕೆಜೋಳ ಸುಟ್ಟು ಭಸ್ಮಗೊಂಡ ಘಟನೆ ಗದಗ ಜಿಲ್ಲೆಯ ನಾಗಾವಿ ತಾಂಡಾದಲ್ಲಿ ನಡೆದಿದೆ. ಇದರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಮೆಕ್ಕೆಜೋಳ ನಾಶವಾಗಿದೆ. ಲಕ್ಷ್ಮಣ್ ಪವಾರ್ ಎಂಬುವರಿಗೆ ಸೇರಿದ 11 ಎಕರೆ ಜಮೀನಿನಲ್ಲಿ ಬೆಳೆದಿದ್ದ ಅಂದಾಜು 2.5 ಲಕ್ಷ ರೂ. ಮೌಲ್ಯದ ಬೆಳೆ ನಾಶವಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಶಾಮಕ ದಳದ ಸಿಬ್ಬಂದಿ, ಬೆಂಕಿ ನಂದಿಸಿದಿಸಲು ಪ್ರಯತ್ನಿಸಿದರು.

ದಿನದಿಂದ ದಿನಕ್ಕೆ ದೇಶದಲ್ಲಿ ಹೆಚ್ಚಾಗುತ್ತಿದೆ ಕೊರೊನಾ ಆತಂಕ!

ಬೆಂಗಳೂರು: ದೇಶದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಹಲವು ದೇಶಗಳಲ್ಲಂತೂ ಇದರ ನಾಗಾಲೋಟ…

ಒಳ್ಳೆಯ ಅವಕಾಶಗಳು ಸಿಕ್ಕರೆ ಕನ್ನಡದಲ್ಲಿಯೂ ನಟಿಸುವೆ – ಸಂಯುಕ್ತಾ!

ಬೆಂಗಳೂರು : ಲಾಕ್ ಡೌನ್ ಇದ್ದರೂ ಅಭಿಮಾನಿಗಳೊಂದಿಗೆ ತಮ್ಮ ಒಡನಾಟ ಇಟ್ಟುಕೊಂಡಿರುವ ನಟಿ ಸಂಯುಕ್ತಾ ಹೆಗ್ಡೆ…

ರಾಜ್ಯ ವಿಧಾನಪರಿಷತ್ ಚುನಾವಣೆಗೆ ಮುಹೂರ್ತ ನಿಗದಿ

ದೆಹಲಿ/ಬೆಂಗಳೂರು: ಇದೇ ಜೂನ್ 30ರಂದು ಅವಧಿ ಮುಕ್ತಾಯವಾಗಲಿರುವ 7 ವಿಧಾನಪರಿಷತ್ ಸ್ಥಾನಗಳಿಗೆ ಜೂನ್ 29ರಂದು ಚುನಾವಣೆ ನಡೆಯಲಿದೆ. ಈ ವಿಷಯವನ್ನು ಚುನಾವಣಾ ಆಯೋಗ ಘೋಷಿಸಿದೆ.