ಜೈಪುರ: ಮಹಾಮಾರಿಯ ಅಟ್ಟಹಾಸ ದೇಶದ ಹಲವು ರಾಜ್ಯಗಳಲ್ಲಿ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ರಾಜಸ್ಥಾನದ ಗಡಿ ಬಂದ್ ಮಾಡಲಾಗಿದೆ.

ಒಂದು ವಾರದ ಮಟ್ಟಿಗೆ ರಾಜಸ್ತಾನ ಸರ್ಕಾರ ರಾಜ್ಯ ಎಲ್ಲಾ ಗಡಿಗಳನ್ನು ಬಂದ್ ಮಾಡಿದೆ. ಎನ್ಒಸಿ ಪ್ರಮಾಣ ಪತ್ರವಿಲ್ಲದೆ ಯಾರೊಬ್ಬರೂ ರಾಜ್ಯ ಪ್ರವೇಶಿಸುವಂತಿಲ್ಲ. ಅಲ್ಲದೆ, ಪಾಸ್ ಗಳಿಲ್ಲದೆ, ರಾಜ್ಯದಿಂದ ಯಾರೊಬ್ಬರು ಹೊರಗೆ ಹೋಗುವಂತಿಲ್ಲ ಎಂದು ಸರ್ಕಾರ ತಿಳಿಸಿದೆ.

ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ಆಯುಕ್ತರಿಗೆ ಪಾಸ್ ವಿತರಿಸುವ ಹೊಣೆಯನ್ನು ನೀಡಲಾಗಿದ್ದು, ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಹಾಗೂ ಸಾವಿಗೀಡಾದ ಕುಟುಂಬಸ್ಥರಿಗೆ ಆದೇಶದಲ್ಲಿ ವಿನಾಯಿತಿ ನೀಡಲಾಗಿದೆ. ರಾಜ್ಯದಲ್ಲಿ ಇಲ್ಲಿಯವರೆಗೂ 11,368 ಜನರಿಗೆ ಸೋಂಕು ತಗುಲಿದೆ.

Leave a Reply

Your email address will not be published. Required fields are marked *

You May Also Like

ಅಮೆರಿಕದಲ್ಲಿ ವೇದ ಮಂತ್ರ ಪಠಣ!

ಅಮೆರಿಕದಲ್ಲಿ ರಾಷ್ಟ್ರೀಯ ಪ್ರಾರ್ಥನಾ ದಿನಾಚರಣೆ ಅಂಗವಾಗಿ ಶ್ವೇತ ಭವನದಲ್ಲಿ ವೇದ ಮಂತ್ರ ಪಠಣ ಮಾಡಲಾಗಿದೆ.

ರಾಜ್ಯದಲ್ಲಿಂದು 2000 ಗಡಿ ದಾಟಿದ ಸೋಂಕಿತರ ಸಂಖ್ಯೆ: ಯಾವ ಜಿಲ್ಲೆಯಲ್ಲಿ ಎಷ್ಟು?

ಬೆಂಗಳೂರು: ರಾಜ್ಯದಲ್ಲಿಂದು 2062 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಒಟ್ಟು‌ ಸೋಂಕಿತರ ಸಂಖ್ಯೆ 28877…

ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೂ ಸರ್ಕಾರಿ ನೌಕರರು ಆರೋಗ್ಯ ವಿಮಾ ಸೌಲಭ್ಯವನ್ನು ಪಡೆಯಬಹುದು- ಸುಪ್ರೀಂ

ಕೇಂದ್ರ ಸರ್ಕಾರದ ನೌಕರರು ತುರ್ತು ಸಮಯದಲ್ಲಿ ಸಿಜಿಹೆಚ್‌ಎಸ್‌ ಅಂದರೆ ಕೇಂದ್ರ ಸರ್ಕಾರ ಸೂಚಿಸಿರುವ ಆಸ್ಪತ್ರೆಗಳ ಹೊರತಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೆ ನೌಕರರ ಹಕ್ಕಿನ ಅನ್ವಯ ಸರ್ಕಾರದಿಂದ ಮೆಡಿಕ್ಲೇಮ್‌ ಪಡೆಯಬುದು ಎಂದು ಹೇಳುವ ಮೂಲಕ ಸರ್ಕಾರಿ ನೌಕರರಿಗೆ ಸುಪ್ರೀಂ ಸಿಹಿ ಸುದ್ದಿ ನೀಡಿದೆ.