ಯಾದಗಿರಿ: ಕೊರೊನಾ ವೈರಸ್, ಈಗ ಜಿಲ್ಲೆಯ ಮದುವೆ ಮನೆಯೊಂದರ ಬಾಗಿಲಿಗೆ ತೆರಳಿದೆ. ನಾಳೆ ಮದುವೆಯಾಗಬೇಕಿದ್ದ ವಧುವಿನ ತಂದೆ ಹಾಗೂ ತಂಗಿಗೆ ಕೊರೊನಾ ಅಂಟಿಕೊಂಡಿದೆ.
ಯಾದಗಿರಿ ತಾಲೂಕಿನ ಅಲ್ಲಿಪೂರತಾಂಡಾದ ಯುವತಿ ಜೊತೆ ನಾಲ್ವಾರತಾಂಡಾದ ಯುವಕನ ನಾಳೆ(ಗುರುವಾರ) ಮದುವೆ ನಿಗದಿಯಾಗಿತ್ತು. ಮದುವೆ ಮನೆಯಲ್ಲಿ ಈಗ ಆತಂಕದ ವಾತಾವರಣ ಸೃಷ್ಟಿಸಿದೆ. ಹೀಗಾಗಿ ಮದುವೆಯನ್ನು ಮುಂದಕ್ಕೆ ಹಾಕಲಾಗಿದೆ.
ವಧು ಮತ್ತು ಕುಟುಂಬಸ್ಥರು, ಸದ್ಯ ಆಂಧ್ರಪ್ರದೇಶದ ನೆಲ್ಲೂರನಲ್ಲಿ ವಾಸವಿದ್ದಾರೆ. ಮಗಳ ಮದುವೆ ಮಾಡುವ ಹಿನ್ನೆಲೆಯಲ್ಲಿ ಈ ಕುಟುಂಬ ಕಳೆದ 10 ದಿನಗಳ ಹಿಂದೆ ಜಿಲ್ಲೆಗೆ ಆಗಮಿಸಿತ್ತು. ಅಂತರ್ ರಾಜ್ಯ ಪ್ರಯಾಣದ ಹಿನ್ನೆಲೆ ಈ ಕುಟುಂಬದ ಎಲ್ಲರಿಗೂ ಪರೀಕ್ಷೆ ಮಾಡಿ ಸ್ಯಾಂಪನ್ ಗಳನ್ನು ಲ್ಯಾಬ್ ಗೆ ಕಳುಹಿಸಲಾಗಿತ್ತು. ಇವರೆಲ್ಲರನ್ನು ಏಳು ದಿನ ಕ್ವಾರೆಂಟೈನ್ ನಲ್ಲಿಟ್ಟು ವರದಿ ಬರುವ ಮುನ್ನವೇ ಮನೆಗೆ ಕಳುಹಿಸಲಾಗಿತ್ತು. ಸದ್ಯ ಇವರ ಫಲಿತಾಂಶ ಹೊರ ಬಿದ್ದಿದ್ದು, ಇದರಲ್ಲಿ ತಂದೆ ಮತ್ತು ಮಗಳಿಗೆ ಕೊರೊನಾ ಪಾಸಿಟಿವ್ ಧೃಡಪಟ್ಟಿದೆ.

Leave a Reply

Your email address will not be published. Required fields are marked *

You May Also Like

ರೋಣ: ತಾಲೂಕಿನ ಸಮಗ್ರ ಅಭಿವೃದ್ಧಿಗೆ ಒತ್ತಾಯಿಸಿ ಧರಣಿ; ಐಷಾರಾಮಿ ವಾಹನದಲ್ಲಿ ಓಡಾಡುವವರಿಗೆ ನಮ್ಮ ಕಷ್ಟ ಗೊತ್ತಾಗೋದು ಹೇಗೆ?

ಸಾರ್ವಜನಿಕರು ಪ್ರತಿನಿತ್ಯ ಪರದಾಡುತ್ತಿರುವಾಗ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ಐಷಾರಾಮಿ ವಾಹನದಲ್ಲಿ ಅಡ್ಡಾಡುತ್ತಿರುವಾಗ ನಮ್ಮಂತವರ ಕಷ್ಟ ನಿಮಗೆ ಹೇಗೆ ಗೊತ್ತಾಗುತ್ತದೆ ಎಂದು ತಾಲೂಕು ದಲಿತ ಸಂಘಟನೆಯ ಮುಖಂಡ ವೀರಪ್ಪ ತೆಗ್ಗಿನಮನಿ ಆಕ್ರೋಶ ವ್ಯಕ್ತಪಡಿಸಿದರು.

ಆಡಳಿತ ಅನುಮತಿ ನೀಡಲಿ, ಬಿಡಲಿ ನಾವು ಟಿಪ್ಪು ಜಯಂತಿ ಆಚರಣೆ ಸಿದ್ಧ: ಶರೀಫ ಬಿಳೆಯಲಿ

ಟಿಪ್ಪು ಜಯಂತಿ ಆಚರಿಸುವ ಮೂಲಕ ಅವರ ಸಾಧನೆ, ರಾಜಕೀಯ ನಿಲುವುಗಳು, ದೇಶಪ್ರೇಮವನ್ನು ಇಂದಿನ ಯುವ ಸಮುದಾಯಕ್ಕೆ ಸಾರಬೇಕು ಎಂದು ದಲಿತ ಅಲ್ಪಸಂಖ್ಯಾತ ಮತ್ತು ಹಿಂದುಳಿದ ವರ್ಗಗಳ ಹೋರಾಟ ಸಮಿತಿಯ ಮುಖಂಡ ಶರೀಫ್ ಬಿಳೆಯಲಿ ಹೇಳಿದರು.

ಡಾ.ಸಂಕನಗೌಡರ ಸಾಹಿತ್ಯದಿಂದ ಸಮಾಜ ಸುಧಾರಣೆ

ಸಾಮಾನ್ಯವಾಗಿ ವೈದ್ಯ, ವಕೀಲ, ಪೋಲೀಸ ಮೊದಲಾದ ಒತ್ತಡಭರಿತ ವೃತ್ತಿಯಲ್ಲಿ ಇರುವವರು ಕಥೆ, ಕಾದಂಬರಿ, ಕವಿತೆ, ನಾಟಕ, ಸಂಗೀತ, ಸಾಹಿತ್ಯ ಮೊದಲಾದವುಗಳಿಂದ ದೂರವಿರುತ್ತಾರೆ. ದೈನಂದಿನ ವೃತ್ತಿಯ ಒತ್ತಡ ಹಾಗೂ ಮತ್ತಿತರ ಕಾರಣಗಳಿಂದ ಸಾಹಿತ್ಯಾಭ್ಯಾಸದಿಂದ ದೂರವಿರುತ್ತಾರೆ ಅಥವಾ ಸಾಹಿತ್ಯವನ್ನು ಕಡೆಗಣಿಸಿರುತ್ತಾರೆ.

ಮಾಜಿ ಸಚಿವ ವಿನಯ್ ಗೆ ಮತ್ತೆ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ!

ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ಇವತ್ತು ಕೂಡ ರಿಲೀಫ್ ಸಿಗದಂತಾಗಿದೆ. ಇಂದು ನ್ಯಾಯಾಂಗ ಬಂಧನದ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ವಿಡಿಯೋ ಕಾನ್ಫರನ್ಸ್ ಮೂಲಕ ವಿನಯ್ ಅವರನ್ನು ಧಾರವಾಡದ ಜಿಲ್ಲಾ ನ್ಯಾಯಾಲಯದ ಎದುರು ಹಾಜರುಪಡಿಸಿದರು.