ನವದೆಹಲಿ: ದೆಹಲಿಯಲ್ಲಿ ಕೊರೊನಾ ಆತಂಕ ಮೂಡಿಸಿದ್ದು, ಆಸ್ಪತ್ರೆಗಳಲ್ಲಿ ಬೆಡ್ ಗಳ ಕೊರತೆ ಸೃಷ್ಟಿಯಾಗಿದೆ. ಈ ನಿಟ್ಟಿನಲ್ಲಿ ಶಾಲೆಗಳನ್ನೇ ತೆರೆಯುವುದೇ ಬೇಡ ಎಂದು ಶಿಕ್ಷಕರು ಮತ್ತು ಪೋಷಕರು ದೆಹಲಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಶಾಲೆಗಿಂತ ಮಕ್ಕಳ ಆರೋಗ್ಯ ಮುಖ್ಯವಾಗಿದ್ದು, ಈ ವರ್ಷ ಪೂರ್ತಿ ಶಾಲೆಗಳನ್ನು ತೆರೆಯುವುದು ಬೇಡ. ಈ ವರ್ಷವನ್ನು ಝೀರೋ ಅಕಾಡೆಮಿಕ್ ಇಯರ್ ಎಂದು ಘೋಷಿಸುವಂತೆ ದೆಹಲಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಇಸ್ರೇಲ್ ನಲ್ಲಿ ಶಾಲೆಗಳನ್ನು ಆರಂಭಿಸಿದ ಕಾರಣಕ್ಕೆ ಕೊರೊನಾ ಸೋಂಕು ಮತ್ತಷ್ಟು ಹರಡಿ ಇಡೀ ದೇಶವನ್ನೇ ಕಷ್ಟಕ್ಕೆ ಸಿಲುಕಿಸಿತ್ತು. ಈಗ ದೆಹಲಿಯಲ್ಲಿ ಕೂಡ ಜುಲೈ ಅಂತ್ಯದ ವೇಳೆಗೆ 5.5 ಲಕ್ಷದಷ್ಟು ಜನರಿಗೆ ಸೋಂಕು ತಗುಲಲಿದೆ ಎಂದು ಅಂದಾಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಶಾಲೆಗಳನ್ನು ಓಪನ್ ಮಾಡುವುದು ಬೇಡ ಎಂದು ಪಾಲಕರು, ಶಿಕ್ಷಕರು ಒತ್ತಾಯಿಸುತ್ತಿದ್ದಾರೆ.