ಮುಂಬೈ: ಗೃಹ ಸಚಿವ ಅಮಿತ್ ಶಾ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತಾಡುವ ವೇಳೆ ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರು ನೆರವು ನೀಡಿರುವ ಕುರಿತು ಉಲ್ಲೇಖಿಸುತ್ತಾರೆ. ಆಗ ಅವರು ಅಂಕಿಅಂಶಗಳನ್ನು ನೀಡುವಾಗ ತೊದಲಿದ್ದಾರೆ.
ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಬಹುಭಾಷಾ ನಟ ಪ್ರಕಾಶ್ ರೈ, ಎಂತಹ ಅವಮಾನ ಸುಳ್ಳಿಗೇ ಸುಳ್ಳು ಹೇಳಲಾಗುತ್ತಿಲ್ಲ ಎಂದು ಟ್ವೀಟ್ ಮಾಡಿದ್ದಾರೆ. #JustAsking ಎಂದಿನಂತೆ ಅವರು ಹ್ಯಾಷ್ ಟ್ಯಾಗ್ ನಡಿ ಟ್ವೀಟ್ ಮಾಡಿದ್ದು, ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.