ಆನ್ ಲೈನ್ ಶಿಕ್ಷಣ ರದ್ದುಗೊಳಿಸಿದ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರ, ಎಲ್.ಕೆ.ಜಿ, ಯು.ಕೆ.ಜಿ ಹಾಗೂ ಪ್ರಾಥಮಿಕ ಹಂತದ 7ನೇ ತರಗತಿವರೆಗಿನ ಆನ್ ಲೈನ್ ಶಿಕ್ಷಣವನ್ನು ಗುರುವಾರ ರದ್ದುಗೊಳಿಸಿದೆ.

ಇಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಸಚಿವ ಜೆಸಿ ಮಾಧುಸ್ವಾಮಿ ಅವರು, ಆನ್ ಲೈನ್ ಶಿಕ್ಷಣವನ್ನು 5ನೇ ತರಗತಿ ಬದಲು 7ನೇ ತರಗತಿವರೆಗೂ ರದ್ದುಗೊಳಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದರು.

ನಿನ್ನೆಯಷ್ಟೇ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಅಧಿಕಾರಿಗಳು ಹಾಗೂ ಶಿಕ್ಷಣ ತಜ್ಞರೊಂದಿಗೆ ಹಲವು ಸುತ್ತಿನ ಚರ್ಚೆ ನಡೆಸಿದ ನಂತರ 5ನೇ ತರಗತಿವರೆಗೆ ಆನ್ ಲೈನ್ ಶಿಕ್ಷಣ ರದ್ದುಗೊಳಿಸುವ ನಿರ್ಧಾರ ಪ್ರಕಟಿಸಿದ್ದರು. ಇಂದು ಅದನ್ನು 7ನೇ ತರಗತಿವರೆಗೂ ಸರ್ಕಾರ ವಿಸ್ತರಿಸಿದೆ.
ಅಲ್ಲದೇ, ಜುಲೈನಲ್ಲಿ ಶಾಲೆ ತೆರೆಯುವ ಮಾತೇ ಇಲ್ಲ. ಆಗಸ್ಟ್ 15ರವರೆಗೆ ಶಾಲೆಗಳನ್ನು ತೆರೆಯುವುದಿಲ್ಲ. ಆನಂತರ ಪರೀಸ್ಥಿತಿ ನೋಡಿಕೊಂಡು ನಿರ್ಧರಿಸಲಾಗುವುದು ಎಂದು ಕೇಂದ್ರ ಸರ್ಕಾರ ಹೇಳಿದೆ.

Exit mobile version