ಗದಗ: ಇಲ್ಲಿನ ರಾಜೀವ್ ಗಾಂಧಿ ನಗರದಲ್ಲಿರುವ ಬಾಗಲಕೋಟೆ ಜಿಲ್ಲೆಯ ನೀರು‌ ಸರಬರಾಜು ಮಂಡಳಿಯ ಎಇಇ ಹನುಮಂತ ಪ್ರಭಣ್ಣವರ್ ಮನೆ‌ ಮೇಲೆ ಬೆಳ್ಳಂಬೆಳಿಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಎಸಿಬಿ ಡಿವೈಎಸ್ಪಿ ವಾಸುದೇವರಾಮ್ ನೇತೃತ್ವದ ತಂಡ ದಾಳಿ ನಡೆಸಿದೆ. ಭ್ರಷ್ಟಾಚಾರ ದೂರಿನ‌ ಮೇರೆಗೆ ದಾಳಿಮಾಡಿದ ಅಧಿಕಾರಿಗಳು ಮಹತ್ವದ ದಾಖಲೆ ವಶಪಡಿಸಿ ಕೊಂಡು ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.
ಇನ್ನು ಎಇಇ ಹನುಮಂತ ಮನೆ‌ಮೇಲೆ ಮತ್ತು ಬಾಗಲಕೋಟೆಯ ಅವರ ಕಚೇರಿ ಮೇಲೆ ಏಕಕಾಲದಲ್ಲಿ ದಾಳಿ ನಡೆದಿದ್ದು ಹನಮಂತ ಅವರನ್ನು ಬಾಗಲಕೋಟೆಯಲ್ಲಿಯೆ ಎಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ದಾಳಿ ವೇಳೆ ಮಹತ್ವದ ದಾಖಲೆ ಸಂಗ್ರಹಿಸಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನು ಕಡತಗಳ ಪರಿಶೀಲನೆ ಮುಂದುವರೆದಿದ್ದು ಎಇಇ ಹನಮಂತ ಮತ್ತು ಮನೆಯವರನ್ನು ವಿಚಾರಣೆಗೊಳಪಡಿಸಲಾಗಿದೆ.

Leave a Reply

Your email address will not be published. Required fields are marked *

You May Also Like

ಭಗೀರಥ ಸಂಘ: ನೂತನ ಪದಾಧಿಕಾರಿಗಳ ಆಯ್ಕೆ

ಭಗೀರಥ ಸಂಘದ ತಾಲೂಕ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಪಟ್ಟಣದ ಭ್ರಮರಾಂಭ ಕಲ್ಯಾಣ ಮಂಟಪದಲ್ಲಿ ಭಾನುವಾರ ಸಮಾಜದ ಮುಖಂಡರು ಸಭೆ ಸೇರಿ ಪದಾಧಿಕಾರಿಗಳನ್ನು ನೇಮಕ ಮಾಡಿದರು.

ರಾಜ್ಯದಲ್ಲಿಂದು 453 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 453 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 9150…

ಆಗಸ್ಟ್ ನಿಂದ ಅಂತರರಾಷ್ಟ್ರೀಯ ವಿಮಾನಗಳ ಹಾರಾಟಕ್ಕೆ ಅನುಮತಿ

ಕೊರೊನಾ ತಡೆಯಲು ಲಾಕ್ ಡೌನ್ ಸಂದರ್ಭದಲ್ಲಿ ವಿಮಾನ ಸಂಚಾರವನ್ನು ಕೇಂದ್ರ ಸರ್ಕಾರ ಸ್ಥಗಿತಗೊಳಿಸಿತ್ತು. ಈ ನಡುವೆ ದೇಶೀಯ ವಿಮಾನ ಯಾನಕ್ಕೆ ಅವಕಾಶವನ್ನೂ ನೀಡಿದೆ. ಆದರೆ, ಆಗಸ್ಟ್ ತಿಂಗಳಿನಿಂದ ಅಂತರರಾಷ್ಟ್ರೀಯ ವಿಮಾನಗಳ ಹಾರಾಟಕ್ಕೆ ಅವಕಾಶವನ್ನು ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ.