ದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 10,956 ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಈ ಮೂಲಕ ಭಾರತ ಇದುವರೆಗಿನ ಕೊರಾನಾ ಪಾಸಿಟಿವ್ ದಾಖಲೆಗಳನ್ನೆಲ್ಲ ಮುರಿದು, ಜಗತ್ತಿನಲ್ಲೇ ನಂಬರ್ ಒನ್ ಸ್ಥಾನದತ್ತ ದಾಪುಗಾಲಿಡುತ್ತಿದೆ.
ದೇಶದಲ್ಲಿ ಇದುವರೆಗಿನ ಕೊರೊನಾ ಪೀಡಿತರ ಸಂಖ್ಯೆ 2,97,535. ಸಕ್ರಿಯ ಪ್ರಕರಣಗಳು 1,41,842. ಗುಣಮುಖರಾದವರು 1,47,195. ಮಡಿದವರ ಸಂಖ್ಯೆ 8,498 ಎಂದು ಕೇಂದ್ರ ಆರೋಗ್ಯ ಇಲಾಖೆ ಹೇಳಿದೆ.
ಈ ಎಲ್ಲ ಬೆಳವಣಿಗೆಗಳ ನಡುವೆ ಭಾರತ ಕೊರೊನಾ ಪೀಡಿತ ರಾಷ್ಟ್ರಗಳ ಪೈಕಿ 4ನೇ ಸ್ಥಾನಕ್ಕೆ ಏರಿಕೆ ಕಂಡಿದೆ. ಅಮೆರಿಕ, ಬ್ರೆಜಿಲ್ ಮತ್ತು ರಷ್ಯಾ ದೇಶಗಳು ಮೊದಲ ಮೂರು ಸ್ಥಾನಗಳಲ್ಲಿದ್ದು ನಂತರದ ಸ್ಥಾನವನ್ನು ಭಾರತ ಅಲಂಕರಿಸಿದೆ.
ದೇಶದಲ್ಲಿ ಅತ್ಯಂತ ವೇಗವಾಗಿ ಕೊರೊನಾ ಏರಿಕೆಯಾಗುತ್ತಿದ್ದರೂ, ದೇಶದಲ್ಲಿ ಕೊರೊನಾ ಸಮುದಾಯಕ್ಕೆ ಪಸರಿಸಿಲ್ಲ ಎಂದು ಕೇಂದ್ರ ಸರ್ಕಾರ ನಿನ್ನೆ ಹೇಳಿಕೆ ನೀಡಿದೆ.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿಂದು 397 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 397 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 10118…

ಕಪ್ಪತ್ತಗುಡ್ಡದ ಸಭೆ ಕಗ್ಗಂಟು: ಪ್ರಶ್ನೆಗಳು ನೂರೆಂಟು..!

ನಿನ್ನೆಯಷ್ಟೆ ನಿಮ್ಮ ಉತ್ತರಪ್ರಭ ಕಪ್ಪತ್ತಗುಡ್ಡದ ಬಗ್ಗೆ ಸದ್ಯದ ಬೆಳವಣಿಗೆ ಹಾಗೂ ಒಳಗೊಳಗೆ ಹುನ್ನಾರ ನಡೆಯುತ್ತಿದೆಯಾ? ಎನ್ನುವ ಕುರಿತು ವಿಶೇಷ ವರದಿಯನ್ನು ನೀಡಿತ್ತು. ಇದರ ಬೆನ್ನಲ್ಲೆ ನಿನ್ನೆ ವಿಧಾನಸೌಧದಲ್ಲಿ ಕಪ್ಪತ್ತಗುಡ್ಡ ವನ್ಯಧಾಮಕ್ಕೆ ಸಂಬಂಧ ಪಟ್ಟಂತೆ ಸಭೆ ಕೂಡ ನಡೆದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ

ಬೆಂಗಳೂರು: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಒಪ್ಪಿಗೆಯ ಮೇರೆಗೆ ವಿಧಾನ ಪರಿತ್ತಿಗೆ ಕಾಂಗ್ರೆಸ್ ಪಕ್ಷ…