ದೆಹಲಿ: ಭಾರತದಲ್ಲಿ ಕೊರೋನಾ ಸೋಂಕು ತೀವ್ರ ಗತಿಯಲ್ಲಿ ಏರಿಕೆಯಾಗುತ್ತಿದ್ದು, ಕಳೆದ ನಾಲ್ಕು ದಿನಗಳಿಂದ ಸತತವಾಗಿ 10 ಸಾವಿರ ಆಸುಪಾಸಿನಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ.
ಇಂದು ದೇಶದ ಒಟ್ಟು ಕೊರೊನಾ ಪೀಡಿತರ ಸಂಖ್ಯೆ 3 ಲಕ್ಷ ಗಡಿ ದಾಟಿದೆ. ಕಳೆದ 24 ಗಂಟೆಗಳಲ್ಲಿ 11,458 ಜನರಲ್ಲಿ ಕೊರೊನಾ ಸೋಂಕು ಹೊಸದಾಗಿ ಪತ್ತೆಯಾಗಿದೆ. ಕೊರೊನಾದಿಂದ ಸಾವಿಗೀಡಾದವರ ಸಂಖ್ಯೆ 8,884ಕ್ಕೆ ಏರಿಕೆಯಾಗಿದೆ. 24 ಗಂಟೆಯಲ್ಲಿ 386 ಜನ ಕೊರೊನಾಗೆ ಬಲಿಯಾಗಿದ್ದಾರೆ. ಈ ಮಾಹಿತಿಯನ್ನು ಕೇಂದ್ರ ಗೃಹ ಸಚಿವಾಲಯದ ಪ್ರಕಟಣೆಯಲ್ಲಿ ಹಂಚಿಕೊಳ್ಳಲಾಗಿದೆ.
ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 3,08,993ಕ್ಕೆ ಏರುವ ಮೂಲಕ ಜಾಗತಿಕ ಮಟ್ಟದಲ್ಲಿ ಭಾರತ 4ನೇ ಸ್ಥಾನಕ್ಕೆ ಏರಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 1,45,779 ಇದ್ದು, 1,54,329 ಜನ ಚಿಕಿತ್ಸೆಯಿಂದ ಗುಣವಾಗಿ ಮನೆಗೆ ತೆರಳಿದ್ದಾರೆ. ಇವರ ಪೈಕಿ ಒಬ್ಬರು ವಲಸೆ ಹೋಗಿದ್ದಾರೆ. ಇದುವರೆಗೆ ದೇಶದಲ್ಲಿ ಶೇ. 49.9ರಷ್ಟು ರೋಗಿಗಳು ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.


ಬಲಿಯಾದವರು ಎಲ್ಲಿಯವರು?

ದೆಹಲಿ 129
ಮಹಾರಾಷ್ಟ್ರ 127
ಗುಜರಾತ್ 30
ಉತ್ತರಪ್ರದೇಶ 20
ತಮಿಳುನಾಡು 18
ಪಶ್ಚಿಮ ಬಂಗಾಳ 9
ತೆಲಂಗಾಣ 9
ಮಧ್ಯಪ್ರದೇಶ 9
ಕರ್ನಾಟಕ 9
ರಾಜಸ್ಥಾನ 9
ಪಂಜಾಬ್ 4
ಅಸ್ಸಾಂ 2
ಕೇರಳ 1
ಕಾಶ್ಮೀರ 1
ಒಡಿಶಾ 1

ಮೇಲಿನ ಪಟ್ಟಿಯನ್ನು ಕೇಂದ್ರ ಗೃಹ ಸಚಿವಾಲಯ ಬಿಡುಗಡೆ ಮಾಡಿದೆ.

Leave a Reply

Your email address will not be published. Required fields are marked *

You May Also Like

ಹರ್ನಾಜ್ ಕೌರ್ ಸಂಧು 2021ರ ನೂತನ ವಿಶ್ವ ಸುಂದರಿ!

ಉತ್ತರಪ್ರಭ ದೆಹಲಿ: 2021ರ 70ನೇ ಆವೃತ್ತಿಯ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತದ ಹರ್ನಾಜ್ ಕೌರ್ ಸಂಧು…

ಬ್ರೇಕ್ ಫೇಲ್ಯೂರ್ : 26 ಮಂದಿ ಸಾವು..!

ಬ್ರೇಕ್ ವೈಫಲ್ಯವಾಗಿ ಪ್ರವಾಸಿ ಬಸ್ ಕಂದಕಕ್ಕೆ ಉರುಳಿ ಬಿದ್ದು 26 ಮಂದಿ ಪ್ರಯಾಣಿಕರು ಮೃತಪಟ್ಟು , 35ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಮುಂಜಾನೆ ಇಂಡೋನೇಷಿಯಾದಲ್ಲಿ ಸಂಭವಿಸಿದೆ.

ಸೋಶಿಯಲ್ ಮಿಡಿಯಾದಲ್ಲಿ ಟ್ರೆಂಡ್ ಕ್ರಿಯೇಟ್ ಮಾಡಿದ ಗುಲಾಬಿ ಬಣ್ಣದ ಚೂಡಿದಾರ ಧರಿಸಿದ ಯುವತಿ

ರೊಟ್ಟಿ ಮಾಡುತ್ತ ಕುಳುತಿರುವ ಯುವತಿಯೋರ್ವಳು ಈಗ ಸಾಮಾಜಿಕ ಜಾಲತಾಣದಲ್ಲಿ ಸೆಲೆಬ್ರಿಟಿಯಾಗಿ ಮಿಂಚುತ್ತಿದ್ದಾಳೆ.