ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಅವರಿಗೆ ಕರ್ನಾಟಕ ರಾಜ್ಯ ಎಲೆಕ್ಟ್ರಾನಿಕ್ಸ್ ಅಭಿವೃದ್ಧಿ ನಿಗಮ ಲಿಮಿಟೆಡ್ (ಕಿಯೋನಿಕ್ಸ್) ಅಧ್ಯಕ್ಷ ಗಾದಿ ಒಲಿದಿದೆ. ಸರ್ಕಾರ ಈ ಕುರಿತು ಆದೇಶ ಹೊರಡಿಸಿದ್ದು, ಬಿಲ್ಲವ ಸಮುದಾಯಕ್ಕೆ ಕಿಯೋನಿಕ್ಸ್ ಗೆ ಅಧ್ಯಕ್ಷ ಪದವಿ ದಕ್ಕಿದೆ.
ಕಿಯೋನಿಕ್ಸ್ ರಾಜ್ಯ ಸರ್ಕಾರದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಒಂದಾಗಿದ್ದು, ಸರ್ಕಾರಿ ಇಲಾಖೆಗಳಿಗೆ ಮಾಹಿತಿ ತಂತ್ರಜ್ಞಾನ ಹಾಗೂ ಮಾನವ ಸಂಪನ್ಮೂಲ ಸೇವೆಯನ್ನು ಒದಗಿಸುತ್ತದೆ.
ಇನ್ನು ಹರಿಕೃಷ್ಣ ಅವರು, 2017ರಲ್ಲಿ ಸ್ಥಳೀಯ ಕಾಂಗ್ರೆಸ್ ಮುಖಂಡರ ವಿರುದ್ಧ ಕೆಲವು ಆರೋಪಗಳನ್ನು ಹೊರಿಸಿ, ಪಕ್ಷ ತೊರೆದು ಬಿಜೆಪಿ ಸೇರಿದ್ದರು. ಇದಾದ ಕೆಲವೇ ವರ್ಷಗಳಲ್ಲಿ ಅವರು ಬಿಜೆಪಿಯಲ್ಲಿ ಜಿಲ್ಲಾ ಉಪಾಧ್ಯಕ್ಷರಾಗಿ ನೇಮಕವಾಗಿದ್ದರು. ಜೊತೆಗೆ, ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ಕಾರ್ಯನಿರ್ವಾಹಕ ಸದಸ್ಯ, ವಕ್ತಾರ, ಮುಲ್ಕಿಯ ರಾಷ್ಟ್ರೀಯ ಬಿಲ್ಲವ ಮಹಾ ಮಂಡಲದ ವಕ್ತಾರರಾಗಿದ್ದಾರೆ.
ಈಗ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅವರಿಗೆ ಕಿಯೋನಿಕ್ಸ್ ಅಧ್ಯಕ್ಷ ಹುದ್ದೆಗೆ ನೇಮಿಸಿ, ಆದೇಶ ಹೊರಡಿಸಿದೆ.

Leave a Reply

Your email address will not be published. Required fields are marked *

You May Also Like

ರಾಜ್ಯ ವಿಧಾನಪರಿಷತ್ ಚುನಾವಣೆಗೆ ಮುಹೂರ್ತ ನಿಗದಿ

ದೆಹಲಿ/ಬೆಂಗಳೂರು: ಇದೇ ಜೂನ್ 30ರಂದು ಅವಧಿ ಮುಕ್ತಾಯವಾಗಲಿರುವ 7 ವಿಧಾನಪರಿಷತ್ ಸ್ಥಾನಗಳಿಗೆ ಜೂನ್ 29ರಂದು ಚುನಾವಣೆ ನಡೆಯಲಿದೆ. ಈ ವಿಷಯವನ್ನು ಚುನಾವಣಾ ಆಯೋಗ ಘೋಷಿಸಿದೆ.

ಕುಂದ್ರಳ್ಳಿ ವಿದ್ಯಾರ್ಥಿಗಳು ಶಾಲಿಗ್ಹೋಗಾಕ್ 3ಕಿಮಿ ನಡಿಬೇಕಂತ!

ಕೊರೊನಾದಿಂದಾಗಿ ಲಾಕ್‌ಡೌನ್ ಮಾಡಲಾಗಿತ್ತು. ಇದಾದ ನಂತರ ಇತ್ತಿಚೆಗಷ್ಟೆ ಶಾಲೆಗಳು ಆರಂಭಿಸಲಾಗಿದೆ. ಆದರೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಶಾಲೆಗೆ ಹೋಗಲು ಹರಸಾಹಸ ಪಡುವಂತಾಗಿದೆ. ಇದಕ್ಕೆ ಕಾರಣ ಬಸ್ ಸೌಲಭ್ಯ ಕೊರತೆ.

ಗಜೇಂದ್ರಗಡ: ರೋಜಗಾರ ಮಿತ್ರ ಹುದ್ದೆಗೆ ಅರ್ಜಿ ಆಹ್ವಾನ

ಸಮೀಪದ ಲಕ್ಕಲಕಟ್ಟಿ ಗ್ರಾಮ ಪಂಚಾಯತಿಯ ಲಕ್ಕಲಕಟ್ಟಿ ತಾಂಡಾಕ್ಕೆ ತಾಂಡಾ ರೋಜಗಾರ ಮಿತ್ರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಗದಗನಲ್ಲಿ ಇಂದು ನಾಲ್ಕು ಪಾಸಿಟಿವ್: ಸೋಂಕಿತರ ಸಂಖ್ಯೆ 41ಕ್ಕೆ ಏರಿಕೆ!

ಜಿಲ್ಲೆಯಲ್ಲಿ ಇಂದು 4 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈವರೆಗೆ ಒಟ್ಟು ಸೋಂಕಿತರ ಸಂಖ್ಯೆ 41ಕ್ಕೆ ಏರಿಕೆಯಾಗಿದೆ.