ಚಿತ್ರದುರ್ಗ: ಭೋವಿ, ಲಂಬಾಣಿ, ಕೊರಮ, ಕೊರಚ ಜಾತಿಗಳನ್ನು ಪರಿಶಿಷ್ಟ ಜಾತಿ ಪಟ್ಟಿಯಿಂದ ಕೈಬಿಟ್ಟಿಲ್ಲ ಹಾಗೂ ಬಿಡುವುದಿಲ್ಲ ಎಂದು ಡಿಸಿಎಂ ಗೋವಿಂದ ಕಾರಜೊಳ ಹೇಳಿಕೆಯನ್ನು ಸ್ವಾಗತಿಸುತ್ತೇವೆ ಎಂದು ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಹೇಳಿದರು.
ಹೊಸದುರ್ಗ ನಗರದಲ್ಲಿ ಶನಿವಾರ ಪತ್ರ ಚಳುವಳಿ ಕುರಿತ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತಾನಾಡಿದ ಅವರು, ನಾಲ್ವಡಿ ಕೃಷ್ಣರಾಜೇಂದ್ರ ಒಡೆಯರ್ ಮೀಸಲಾತಿಯಲ್ಲಿ 1927ರಲ್ಲೇ ಗುರುತಿಸಿ, ಈ ಸಮುದಾಯಗಳ ಅಭ್ಯುದಯಕ್ಕೆ ಬುನಾದಿ ಹಾಕಿದ್ದಾರೆ. ಕಾಲಕ್ರಮೇಣ ಬದಲಾದ ಪ್ರಭುತ್ವ ವ್ಯವಸ್ಥೆಯಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ 1950ರಲ್ಲಿ ಆರು ಜಾತಿಗಳನ್ನು ಪರಿಶಿಷ್ಟ ಜಾತಿ ಪಟ್ಟಿಯಲ್ಲಿ ಗುರುತಿಸಿದ್ದು, ಮೂಲ ಪರಿಶಿಷ್ಟ ಜಾತಿಗಳಾಗಿ ಭೋವಿ, ಲಂಬಾಣಿ, ಕೊರಮ, ಕೊರಚ ಸಮುದಾಯಗಳನ್ನು ಗುರುತಿಸಿದ್ದಾರೆ ಎಂದರು.
ಈ ಸಮುದಾಯಗಳು ಅಲೆಮಾರಿ ಹಾಗೂ ಅರೆಅಲೆಮಾರಿ ಮತ್ತು ಶ್ರಮ ಸಂಸ್ಕೃತಿಯ ಸಮುದಾಯಗಳಾದ ಕಾರಣ, ಅಕ್ಷರ ಸಂಸ್ಕೃತಿಯಿಂದ ವಿಮುಖವಾಗಿವೆ. ವಿದ್ಯಾವಂತರ ಕೊರತೆಯಿಂದ ಸರ್ಕಾರಿ ಮೀಸಲಾತಿ ಪ್ರಯೋಜನ ಪಡೆಯುವಲ್ಲಿ ಹಿನ್ನಡೆ ಉಂಟಾಗಿದೆ. ಶೇ.95ರಷ್ಟು ಕುಟುಂಬಗಳಿಗೆ ಇಂದಿಗೂ ಮನೆ, ಆಸ್ತಿ, ಜಮೀನು ಇಲ್ಲ. ಹೊಟ್ಟೆ ಪಾಡಿಗಾಗಿ ಊರೂರು ಅಲೆದು ಜೀವನ ನಡೆಸುತ್ತಿದ್ದಾರೆ ಎಂದರು.
ಈ ಸಮುದಾಯಗಳಿಗೆ ಸೇರಿದವರು ಸರಿಯಾದ ನೆಲೆ ಸಿಗದೆ ಗುಳೆ ಹೋಗಿ ಬದುಕುತ್ತಿದ್ದಾರೆ. ಕಾರಣ ಈ ಸಮುದಾಯಗಳನ್ನು ಗುರುತಿಸಿ ಅಭಿವೃದ್ಧಿ ಪಥದ ಕಡೆಗೆ ತರಲು ವಿಶೇಷ ಯೋಚನೆಯಲ್ಲಿ ಅಭಿವೃದ್ಧಿ ನಿಗಮಕ್ಕೆ ಚಾಲನೆ ನೀಡಿದೆ. ಅನೇಕ ಕಾರಣಗಳಿಂದ ಮೀಸಲಾತಿ ಪ್ರಾರಂಭವಾದ ದಿನಗಳಿಂದ ಇಲ್ಲಿಯವರೆಗೆ ಶೇಕಡ 11% ರಷ್ಟು ಅಭಿವೃದ್ಧಿ ಆಗಬೇಕಿತ್ತು. ಆದರೆ ಅಭಿವೃದ್ಧಿ ಆಗಿರುವುದು ಶೇಕಡ 3% ಮಾತ್ರ. ಈ ವಿಚಾರ ಸರ್ಕಾರಿ ಅಂಕಿಅಂಶಗಳಲ್ಲಿ ಇರುವುದನ್ನು ಗಮನಿಸಿ ಸರ್ಕಾರ ಭೋವಿ ಲಂಬಾಣಿ ಕೊರಮ ಕೊರಚ ಸಮೂದಾಯಗಳನ್ನು ಸಂವಿಧಾನಿಕ ಪರಿಶಿಷ್ಟ ಜಾತಿಗಳಾಗಿ ಸಂರಕ್ಷಿಸಬೇಕೆಂದು ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಸಮಾಜದ ಮುಖಂಡರಾದ ಚಂದ್ರಪ್ಪ, ಮಂಜಣ್ಣ, ರಂಗಪ್ಪ, ಶೇಖರಪ್ಪ, ತಿಪ್ಪೇಸ್ವಾಮಿ, ಕುಮಾರ ಇನ್ನಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ಜನರು ಎಚ್ಚರ ತಪ್ಪಿದರೆ, ದೊಡ್ಡ ಅಪಾಯ ಸಂಭವಿಸಬಹುದು!!

ಜನರು ಎಚ್ಚರ ತಪ್ಪಿದರೆ, ದೊಡ್ಡ ಅಪಾಯ ಸಂಭವಿಸಬಹುದು!! ಬೆಂಗಳೂರು : ಕೊರೊನಾ ಲಾಕ್ ಡೌನ್ ನ್ನು…

ಇಂದಿನಿಂದಲೇ ನೈಟ್ ಕರ್ಪ್ಯೂ: ತಹಶೀಲ್ದಾರ್ ಆದೇಶ

ಕೊರೊನಾ ಸೋಂಕಿನ ಪ್ರಮಾಣ ದಿನದಿಂದ ದಿನಕ್ಕೆ ಸ್ಪೊಟವಾಗುತ್ತಿದ್ದು, ಸಾರ್ವಜನಿಕರು ಸರ್ಕಾರದ ನಿಯಮಗಳನ್ನು ಪಾಲಿಸದಿದ್ದರೆ ದಂಡ ವಸೂಲಿ ಮಾಡಲಾಗುತ್ತದೆ ಎಂದು ತಹಶೀಲ್ದಾರ ಜೆ.ಬಿ.ಮಜ್ಜಗಿ ಎಚ್ಚರಿಕೆ ನೀಡಿದರು.

ಹಾಲಮತ ಮಹಾಸಭಾ ರಾಜ್ಯಾಧ್ಯಕ್ಷ ರುದ್ರಣ್ಣ ಆಗ್ರಹ: ಕುರುಬ ಸಮಾಜವನ್ನು ಎಸ್ಟಿ ಮೀಸಲಾತಿಗೆ ಸೇರಿಸಲು ಒತ್ತಾಯ

ಕುರುಬರು ಮೂಲತ: ಬುಡಕಟ್ಟು ಜನಾಂಗದವರಾಗಿದ್ದು, ರಾಜ್ಯದಲ್ಲಿ ಈಗಾಗಲೇ ಜೇನು ಕುರುಬ, ಕಾಡು ಕುರುಬರು, ಗೊಂಡ, ರಾಜಗೊಂಡ, ಕುರುಬ, ಕುರುಮನ್ಸ್ ಜಾತಿಗಳು ಪರಿಶಿಷ್ಟ ಪಂಗಡದಲ್ಲಿವೆ. ಆದರೆ ಸರ್ಕಾರ ರಾಜ್ಯದಲ್ಲಿರುವ ಎಲ್ಲ ಕುರುಬರಿಗೂ ಎಸ್.ಟಿ.ಮೀಸಲಾತಿ ವಿಸ್ತರಿಸಬೇಕು ಎಂದು ಸರ್ಕಾರಕ್ಕೆ ಮನವಿ ಸಲ್ಲಿಸಲಾಗುತ್ತದೆ ಎಂದು ಎಸ್.ಟಿ ಮೀಸಲಾತಿ ಹೋರಾಟ ಸಮೀತಿ ರಾಜ್ಯ ಹಿರಿಯ ಉಪಾಧ್ಯಕ್ಷ ಹಾಗೂ ಹಾಲಮತ ಮಹಾಸಭಾ ರಾಜ್ಯಾಧ್ಯಕ್ಷ ರುದ್ರಣ್ಣ ಗುಳಗುಳಿ ತಿಳಿಸಿದರು.

ಚಿಕ್ಕಪ್ಪ, ಮಗ ಸೇರಿ ಗಾಂಜಾ ಸೇವಿಸಿದರು…ಮತ್ತಿನಲ್ಲಿ ಜಗಳವಾಡಿದರು…ಮುಂದೇನಾಯ್ತು?

ಕೋಲಾರ : ಗಾಂಜಾ ಅಮಲಿನಲ್ಲಿ ತಮ್ಮ ಚಿಕ್ಕಪ್ಪನನ್ನೇ ಬಾಲಕ ಕೊಲೆ ಮಾಡಿರುವ ಘಟನೆ ನಡೆದಿದೆ. ಈ ಘಟನೆ ಮಾಲೂರು ತಾಲೂಕಿನ ಬೆನ್ನಘಟ್ಟ ಗ್ರಾಮದಲ್ಲಿ ಘಟನೆ ನಡೆದಿದೆ.