ಮುಂಬಯಿ : ನಗರದಲ್ಲಿ ಕೊರೊನಾ ಸಮುದಾಯಿಕ ಹಂತ ತಲುಪಿದಂತಾಗಿದೆ. ಹೀಗಾಗಿ ಅಲ್ಲಿನ ಜನ ಮಹಾಮಾರಿಗೆ ತತ್ತರಿಸಿ ಹೋಗಿದೆ. ನಿನ್ನೆ ಒಂದೇ ದಿನ ಸೋಂಕಿತರ ಸಂಖ್ಯೆ 3,427ರಷ್ಟಾಗಿದೆ.
ಈ ನಿಟ್ಟಿನಲ್ಲಿ ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ 1,04,568ಕ್ಕೇರಿದೆ. ಅಲ್ಲದೇ, ನಿನ್ನೆ ಒಂದೇ ದಿನ ಮಹಾರಾಷ್ಟ್ರದಲ್ಲಿ 113 ಜನ ಸಾವನ್ನಪ್ಪಿದ್ದಾರೆ. ಈ ಮೂಲಕ ಮಹಾರಾಷ್ಟ್ರದಲ್ಲಿ ಕೊರೊನಾಗೆ 3,830ರಷ್ಟು ಬಲಿಯಾದಂತಾಗಿದೆ.
ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರದಲ್ಲಿ 1,550 ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ರಾಜ್ಯದಲ್ಲಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದವರ ಸಂಖ್ಯೆ 49,346ಕ್ಕೆ ಏರಿಕೆಯಾಗಿದೆ. 51,392 ಸಕ್ರಿಯ ಪ್ರಕರಣಗಳಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ಮನೆಯವರ ಕಿರುಕುಳಕ್ಕೆ ನೊಂದ ಸೊಸೆ ಮಾಡಿದ್ದೇನು?

ಮಂಡ್ಯ : ಮನೆಯವರ ನಿರಂತರ ದೌರ್ಜನ್ಯಕ್ಕೆ ಬೇಸತ್ತ ಸೊಸೆಯೊಬ್ಬರು ಪತಿ, ಮಾವ ಹಾಗೂ ಅತ್ತೆಯನ್ನು ರಾಡ್ ನಿಂದ ಹೊಡೆದು ಕೊಲೆ ಮಾಡಿರುವ ಘಟನೆ ನಡೆದಿದೆ.

ಅಕ್ಟೋಬರ್ ನಲ್ಲಿ ಗ್ರಾಮ ಪಂಚಾಯತಿ ಚುನಾವಣೆ?

ಬೆಂಗಳೂರು: ಕೊರೊನಾ ಕಾರಣದಿಂದ ಗ್ರಾಮ ಪಂಚಾಯತಿ ಚುನಾವಣೆ ಮುಂದೂಡಲಾಗಿತ್ತು. ಇದಕ್ಕೆ ವಿರೋಧ ಪಕ್ಷದಿಂದ ವ್ಯಾಪಕ ವಿರೋಧವು…

ಸಾಮಾಜಿಕ, ಆರ್ಥಿಕ, ಶೈಕ್ಷಣಿಕೆ ಸಮೀಕ್ಷೆ ವರದಿ ಜಾರಿಗೊಳಿಸಿ: ಸಿದ್ದರಾಮಯ್ಯ

ಸಾಮಾಜಿಕ ನ್ಯಾಯದ ಪರವಾಗಿದ್ದೇವೆ ಎಂದು ಬಾಯಿಮಾತಿನಲ್ಲಿ ಹೇಳಿದರೆ ಸಾಲದು, ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಸಲ್ಲಿಸಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ತಕ್ಷಣ ಜಾರಿಗೊಳಿಸಬೇಕು ಎಂದು ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಮತ್ತು ಸಮಾಜ ಕಲ್ಯಾಣ ಇಲಾಖೆ ಸಚಿವ ಶ್ರೀರಾಮುಲು ಅವರನ್ನು ಒತ್ತಾಯಿಸುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.