ಬೀಜಿಂಗ್‌ : ಕೊರೊನಾ ಹುಟ್ಟಿಗೆ ಕಾರಣವಾಗಿರುವ ಚೀನಾದಲ್ಲಿ ಎರಡನೇ ಅಲೆ ಶುರುವಾಗಿದೆ. ಏಪ್ರಿಲ್‌ ನಂತರ ಮೊದಲ ಬಾರಿಗೆ 24 ಗಂಟೆಯಲ್ಲಿ 57 ಪ್ರಕರಣಗಳು ವರದಿಯಾಗಿದೆ.
57 ಹೊಸ ಪ್ರಕರಣಗಳ ಪೈಕಿ 37 ಪ್ರಕರಣಗಳು ಚೀನಾದಲ್ಲೇ ವರದಿಯಾಗಿದ್ದು, 20 ಪ್ರಕರಣಗಳು ವಿದೇಶಗಳಿಂದ ಬಂದವರಿಗೆ ಆಗಿದೆ ಎಂದು ಚೀನಾ ಆರೋಗ್ಯ ಸಚಿವಾಲಯ ಹೇಳಿದೆ.
ಬೀಜಿಂಗ್‌ನಲ್ಲಿ 36 ಪ್ರಕರಣಗಳು ಬೆಳಕಿಗೆ ಬಂದಿವೆ. ಹೀಗಾಗಿ ಮೀನು ಮತ್ತು ತರಕಾರಿಗೆ ಹೆಸರಾಗಿರುವ ಬೀಜಿಂಗ್‌ನ ಜಿನ್ ಫಾದಿ ಹೋಲ್‌ ಸೇಲ್‌ ಮಾರುಕಟ್ಟೆಯನ್ನು ಸಂಪೂರ್ಣವಾಗಿ ಮುಚ್ಚಲಾಗಿದೆ. ಈ ಮಾರುಕಟ್ಟೆಯಲ್ಲಿ ಅತೀ ಹೆಚ್ಚು ಹೊಸ ಸೋಂಕು ಪ್ರಕರಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಸೀಲ್‌ಡೌನ್‌ ಮಾಡಲಾಗಿದೆ.
ಮಾರುಕಟ್ಟೆಗೆ ಭೇಟಿ ನೀಡಿದ್ದ ಇಬ್ಬರಲ್ಲಿ ಇತ್ತೀಚಿಗೆ ಸೋಂಕು ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ 517 ಮಂದಿಯನ್ನು ಪರೀಕ್ಷೆಗೆ ಒಳಪಡಿಸಿದ್ದು, ಇದರಲ್ಲಿ 45 ಮಂದಿಗೆ ಪಾಸಿಟಿವ್‌ ಬಂದಿದೆ. ಈ 45 ಮಂದಿಯಲ್ಲಿ ಯಾರಿಗೂ ಸೋಂಕಿನ ಲಕ್ಷಣಗಳು ಕಾಣಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಪ್ರದೇಶ ಸಮೀಪದಲ್ಲಿದ್ದ 9 ಶಿಶು ವಿಹಾರಗಳು ಹಾಗೂ ಶಾಲೆಗಳನ್ನು ಮುಚ್ಚಲಾಗಿದ್ದು, ಲಾಕ್‌ಡೌನ್ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚನೆ ನೀಡಲಾಗಿದೆ.

Leave a Reply

Your email address will not be published. Required fields are marked *

You May Also Like

ಯುವಕರ ಭವಿಷ್ಯಕ್ಕೆ ಮಾರಕವಾದ ಮೋದಿ ಆಡಳಿತ

ದೇಶದಲ್ಲಿ ಮೋದಿ ಆಡಳಿತದಿಂದ ಗರಿಷ್ಠ ಪ್ರಮಾಣದ ನಿರುದ್ಯೋಗ ಸೃಷ್ಠಿಯಾಗಿದ್ದು, ಮೋದಿ ಆಡಳಿತ ಆರ್ಥಿಕತೆ ಮತ್ತು ಯುವಕರ ಭವಿಷ್ಯಕ್ಕೆ ಮಾರಕವಾಗಿದೆ.

ನಗರ ಸಭೆ ಚುನಾವಣೆ: 30ನೇ ವಾರ್ಡ ಕಾಂಗ್ರೇಸ್ ಪಾಲಿಗೆ

ಗದಗ ಬೇಟಗೇರಿ:ನಗರ ಸಭೆ 30ನೇ ವಾರ್ಡನ ಮತ  ಎಣಿಕೆ ಮುಕ್ತಾಯ , 30ನೇ  ವಾರ್ಡನಲ್ಲಿ ಕಾಂಗ್ರೇಸಗೆ…

ರಾಜ್ಯಸಭೆಗೆ ಕಾಂಗ್ರೆಸ್ ನಿಂದ ಖರ್ಗೆ ಫಿಕ್ಸ್..!

ರಾಜ್ಯದಿಂದ ನಾಲ್ಕು ಕ್ಷೇತ್ರಗಳಿಗೆ ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ನಿಂದ ಮಲ್ಲಿಕಾರ್ಜುನ ಖರ್ಗೆ ಹೆಸರು ಬಹುತೇಕ ಅಂತಿಮವಾಗಿದೆ.

ಆರೋಗ್ಯ ಸೇತು ಮೊಬೈಲ್ ಆಪ್ ಸುರಕ್ಷಾ ಕವಚ: ಡಾ.ಕೆ.ಸುಧಾಕರ್

ಕೊರೋನ ವೈರಸ್ ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ’ಆರೋಗ್ಯ ಸೇತು’ ಆ್ಯಪ್ ಸಹಕಾರಿಯಾಗಿದೆ. ಇನ್ನೂ ಹೆಚ್ಚು ವ್ಯಾಪಕವಾಗಿ ಇದನ್ನು ಜನರು ಬಳಸುವಂತಾಗಬೇಕು