ನವದೆಹಲಿ : ನಗರದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಭೀತಿ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಸಿಎಂ ಅರವಿಂದ್ ಕೇಜ್ರಿವಾಲ್ ಸಭೆ ನಡೆಸಿದ್ದಾರೆ.
ಕೊರೊನಾ ಅಬ್ಬರ ತಡೆಗಟ್ಟುವ ನಿಟ್ಟಿನಲ್ಲಿ ಚರ್ಚಿಸಿದ್ದಾರೆ. ಮಹಾರಾಷ್ಟ್ರ ಹಾಗೂ ತಮಿಳುನಾಡು ಬಳಿಕ ದೇಶದಲ್ಲಿ ಅತ್ಯಂತ ಹೆಚ್ಚು ಅಪಾಯಕಾರಿ ರಾಜ್ಯವಾಗಿ ದೆಹಲಿ ಹೊರ ಹೊಮ್ಮಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್, ದೆಹಲಿ ಲೆ.ಗವರ್ನರ್ ಅನಿಲ್ ಬೈಜ್, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಏಮ್ಸ್ ಡಾ. ರಣ್‌ದೀಪ್ ಗುಲೆರಿಯಾ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಸಭೆ ನಡೆಸಿ ಚರ್ಚೆ ನಡೆಸಿದರು.