ದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಮತ್ತು ನಾಳೆ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಸಿಎಂಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ.
ದೇಶಾದ್ಯಂತ ಕೊರೊನಾ ತೀವ್ರವಾಗುತ್ತಿದ್ದು, ಸಾಂಕ್ರಮಿಕವಾಗುವ ಲಕ್ಷಣಗಳು ಗೋಚರಿಸುತ್ತಿವೆ. ಈ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ವಿಡಿಯೋ ಸಂವಾದದಲ್ಲಿ ಚರ್ಚಿಸುವ ಸಾಧ್ಯತೆ ಇದೆ.
ಇದರೊಂದಿಗೆ ದೇಶದ ವಿವಿಧ ರಾಜ್ಯಗಳ ಸಿಎಂಗಳು ಆರ್ಥಿಕ ನೆರವು ನೀಡುವಂತೆ ಮತ್ತು ಕೊರೊನಾ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಈಗಾಗಲೇ ಘೋಷಿಸಿರುವ 20 ಲಕ್ಷ ಕೋಟಿ ವಿಶೇಷ ಪ್ಯಾಕೇಜ್ ನ ಹಣವನ್ನು ತಕ್ಷಣ ಬಿಡುಗಡೆ ಮಾಡುವಂತೆ ಮನವಿ ಮಾಡಿಕೊಳ್ಳುವ ಸಾಧ್ಯೇತೆ ಇದೆ.
ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ, ಕೇರಳ ಸಿಎಂ ಪಿಣರಾಯಿ ವಿಜಯನ್, ಪಂಜಾಬ್ ಸಿಎಂ ಅಮರಿಂದರ್ ಸಿಂಗ್, ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್, ಪುದುಚೆರಿ ಸಿಎಂ ವಿ.ನಾರಾಯಣಸ್ವಾಮಿ, ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಮೊದಲಾದವರು ವಿಡಿಯೋ ಸಂವಾದಲ್ಲಿ ಭಾಗವಹಿಸುತ್ತಾರೋ ಅಥವಾ ಇಲ್ಲವೋ ಮತ್ತು ಭಾಗವಹಿಸಿದರೆ, ಅವರ ಬೇಡಿಕೆಗಳು ಮತ್ತು ಸಲಹೆಗಳೇನು ಎಂಬುದು ಕುತೂಹಲ ಕೆರಳಿಸಿದೆ.

Leave a Reply

Your email address will not be published. Required fields are marked *

You May Also Like

18 ಕೋಟಿ ಭಾರತೀಯರಿಗೆ ಕೋವಿಡ್ ನಿರೋಧಕ ಶಕ್ತಿ : ಥೈರೊಕೇರ್ ಸಮೀಕ್ಷೆ ಇವರಿಗೆ ಸೋಂಕು ತಗುಲಿದರೂ ಏನೂ ಆಗಂಗಿಲ್ಲ!

ಖಾಸಗಿ ಲ್ಯಾಬ್ ಒಂದು ದೇಶಾದ್ಯಂತ ವಿವಿಧ ಭಾಗಗಳಲ್ಲಿ ನಡೆಸಿದ ಪ್ರತಿಕಾಯ ಪರೀಕ್ಷೆ (ಆಂಟಿಬಾಡಿ ಟೆಸ್ಟ್)ಗಳ ಫಲಿತಾಂಶ ಬಿಡುಗಡೆ ಮಾಡಿದ್ದು, ದೇಶದ 18 ಕೋಟಿ ಜನರಲ್ಲಿ ಕೋವಿಡ್ ನಿರೋಧಕ

ಗಡಿಯಲ್ಲಿ ಕ್ಯಾತೆ ಆರಂಭಿಸಿದ ಚೀನಾ!

ನವದೆಹಲಿ: ಉತ್ತರ ಸಿಕ್ಕಿಂ ನಲ್ಲಿ ಚೀನಾದ ಸೈನಿಕರು ಭಾರತೀಯ ಸೈನಿಕರೊಂದಿಗೆ ಕ್ಯಾತಿ ತೆಗೆದಿದ್ದಾರೆ. ಪರಿಣಾಮವಾಗಿ ಭಾರತೀಯ…

ರಾಜ್ಯದಲ್ಲಿ ಲಾಕ್ ಡೌನ್ ಬಗ್ಗೆ ಯಡಿಯೂರಪ್ಪ ಹೇಳಿದ್ದೇನು?

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಹಾವಳಿ ಮುಂದುವರೆದಿದ್ದು, ಮತ್ತೊಮ್ಮೆ ಲಾಕ್ ಡೌನ್ ಆಗಬಹುದೇ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ…