ಹರಪನಹಳ್ಳಿ: ನಿನ್ನೆಯಷ್ಟೆ ಮಾಜಿ ಸಚಿವ ಪಿ.ಟಿ.ಪರಮೇಶ್ವರ ನಾಯ್ಕ್ ಪುತ್ರನ ವಿವಾಹ ಬಳ್ಳಾರಿ ಜಿಲ್ಲೆ ಹರಪನಹಳ್ಳಿ ತಾಲೂಕಿನ ಲಕ್ಷ್ಮಿಪುರದಲ್ಲಿ ನಡೆದಿತ್ತು. ಮದುವೆ ಸಮಾರಂಭದಲ್ಲಿ ಕೋವಿಡ್ 19 ನಿಯಮಗಳು ಉಲ್ಲಂಘಿಸಲಾಗಿತ್ತು ಹೀಗಾಗಿ ಶಾಸಕ ಪಿ.ಟಿ.ಪರಮೇಶ್ವರ ನಾಯ್ಕ್ ವಿರುದ್ಧ ಕೋವಿಡ್19 ನಿಯಮ ಉಲ್ಲಂಘನೆ ಆರೋಪದ ಹಿನ್ನೆಲೆ ದೂರು ದಾಖಲಾಗಿದೆ. 50ಕ್ಕಿಂತ ಹೆಚ್ಚು ಜನರು ಮದುವೆಯಲ್ಲಿ ಪಾಲ್ಗೊಳ್ಳಬಾರದು ಎಂಬ ಎಸ್ಒಪಿ ನಿಯಮವನ್ನು ಅವರು ಉಲ್ಲಂಘಿಸಿದ್ದಾರೆ. ಅಲ್ಲದೆ ಯಾವುದೇ ಸಾಮಾಜಿಕ ಅಂತರ ಕಾಪಾಡಿಕೊಳ್ಳದೆ, ಮಾಸ್ಕ್ ಧರಿಸದೇ ಮದುವೆಗೆ ಸಾವಿರಾರು ಜನರು ಆಗಮಿಸಿದ್ದರು. ಈ ಬಗ್ಗೆ ಉತ್ತರಪ್ರಭ ವರದಿ ಮಾಡಿತ್ತು.
1 comment
Plz reinforce the case.