ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಹಾವಳಿ ಮುಂದುವರೆದಿದ್ದು, ಮತ್ತೊಮ್ಮೆ ಲಾಕ್ ಡೌನ್ ಆಗಬಹುದೇ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.

ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್ ಅವಶ್ಯಕತೆ ಒದಗಿ ಬಂದಿಲ್ಲ. ಹೀಗಾಗಿ ಲಾಕ್ ಡೌನ್ ಘೋಷಣೆ ಮಾಡುವುದಿಲ್ಲ. ನಾಳೆ ಪ್ರಧಾನಿ ಮೋದಿ ಅವರೊಂದಿಗೆ ವಿಡಿಯೊ ಕಾನ್ಫರೆನ್ಸ್‌ ಇದೆ. ಜನರು ಜೀವನ ನಡೆಸಲು ಅನುಕೂಲ ಮಾಡಿ ಕೊಡಲು ಹಾಗೂ ಆರ್ಥಿಕ ಸುಧಾರಣೆಗೆ ಅವಕಾಶ ಮಾಡಿಕೊಡುವಂತೆ ಪ್ರಧಾನಿಗಳಲ್ಲಿ ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.
ಕೊರೊನಾದಿಂದ ರಾಜ್ಯ ಮುಕ್ತವಾಗಬೇಕು. ಎಲ್ಲ ಸಂಗತಿಯಿಂದ ಜನರು ಮುಕ್ತವಾಗಿ ನೆಮ್ಮದಿಯ ಜೀವನ ನಡೆಸಬೇಕು. ರಾಜ್ಯದಲ್ಲಿ ಹಣಕಾಸಿನ ಪರಿಸ್ಥಿತಿ ಸರಿ ಇಲ್ಲ. ಆದರೂ ರೂ. 1000 ಕೋಟಿ ಬಿಡುಗಡೆ ಮಾಡಿದ್ದೇನೆ. ರೈತರಿಗೆ ರೂ. 2000 ಕೊಡುವ ಯೋಜನೆಗೆ ಹಣ ಬಿಡುಗಡೆ ಮಾಡಲಾಗಿದೆ. ಇದರಿಂದ ರಾಜ್ಯದ 50 ಲಕ್ಷ ರೈತರಿಗೆ ಅನುಕೂಲ ಆಗಲಿದೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ಕುರುಬರಿಗೆ ಮೀಸಲಾತಿ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು – ಈಶ್ವರಪ್ಪ!

ನೆಲಮಂಗಲ : ಕುರುಬ ಸಮುದಾಯಕ್ಕೆ ಎಸ್ಟಿ ಮೀಸಲಾತಿ ಸಿಗುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

ಸಂಸದೆ ಸುಮಲತಾಗೆ ಕೊರೊನಾ ಪಾಸಿಟಿವ್

ಬೆಂಗಳೂರು: ಸಂಸದೆ ಸುಮಲತಾ ಅಂಬರೀಶ್ ಗೂ ಕೊರೊನಾ ಕಾಟ ಶುರುವಾಗಿದೆ. ಈ ಬಗ್ಗೆ ಸ್ವತ: ಸುಮಲತಾ…

ಬಾರ್ ಅಂಗಡಿಗಳನ್ನು ಬಂದ್ ಮಾಡಿಸಿದ ಮಹಿಳೆಯರು

ಹೆಣ್ಮಕ್ಕಳೇ ಸ್ಟ್ರಾಂಗೂ ಗುರೂ..! ಅನ್ನೋದ್ರಿಲ್ಲ ಡೌಟೇ ಇಲ್ಲ. ಮದ್ಯ ಮಾರಾಟದ ದಿನವೇ ಕುಡುಕರ ಕಿಕ್ ಇಳಿಸುವ ಮೂಲಕ ವನಿತೆಯರು ಇದಕ್ಸಿಕೆ ಉದಾಹರಣೆಯಾಗಿದ್ದಾರೆ.