ಮೋದಿ ಸಭೆಗೆ ಹಾಜರಾಗದ ದೀದಿ!

ಕೋಲ್ಕತ್ತಾ: ಕೇಂದ್ರ ಸರ್ಕಾರದ ವಿರುದ್ಧ ಸದಾ ಕಾಲ ಗುಡುಗುತ್ತಿರುವ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಪ್ರಧಾನಿ ನರೇಂದ್ರ ಮೋದಿ ಅವರು ಕರೆದಿದ್ದ ಸಂವಾದದಿಂದ ದೂರ ಉಳಿದಿದ್ದಾರೆ.

ದೇಶದ 21 ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ಎರಡು ದಿನ ಸಭೆ ಕರೆದಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೊರೊನಾ ವೈರಸ್ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಸಲಹೆ ಸೂಚನೆಗಳನ್ನು ಸಂಗ್ರಹಿಸಲಿದ್ದಾರೆ.

ಮೊದಲ ಭಾಗವಾಗಿ ಜೂ. 16ರ ಮಂಗಳವಾರ ಪ್ರಧಾನಮಂತ್ರಿ ನರೇಂದ್ರ ಮೋದಿ ಪಂಜಾಬ್, ಜಾರ್ಖಂಡ್, ಛತ್ತೀಸ್ ಗಢ್, ತ್ರಿಪುರಾ, ಹಿಮಾಚಲ ಪ್ರದೇಶ, ಚಂಡೀಗರ್, ಗೋವಾ, ಅಸ್ಸಾಂ, ಕೇರಳ, ಉತ್ತರಾಖಂಡ್, ಮಣಿಪುರ, ಲಡಾಖ್, ಪುದುಚೇರಿ, ಅರುಣಾಚಲ ಪ್ರದೇಶ, ಮೇಘಾಲಯ, ಮೀಜೋರಾಂ, ದಾದರ್ ನಗರ್, ಹವೇಲಿ ದಿಯು ಮತ್ತು ದಮನ್, ಸಿಕ್ಕಿಂ, ಲಕ್ಷದ್ವೀಪ ರಾಜ್ಯಗಳ ಸಿಎಂ ಹಾಗೂ ಲೆಫ್ಟಿನೆಂಟ್ ಗವರ್ನರ್ ಜೊತೆಗೆ ಚರ್ಚೆ ನಡೆಸಿದ್ದಾರೆ.

ಭಾರತ ಲಾಕ್ ಡೌನ್ ನಂತರದಲ್ಲಿ ಆರನೇ ಬಾರಿ ಮುಖ್ಯಮಂತ್ರಿಗಳ ಜೊತೆಗೆ ಪ್ರಧಾನಿ ವಿಡಿಯೋ ಸಂವಾದ ನಡೆಸಿದ್ದಾರೆ. ಒಂದು ದಿನಕ್ಕೆ 13 ರಾಜ್ಯಗಳ ಸಿಎಂಗಳಿಗೆ ಮಾತ್ರ ಮಾತನಾಡುವುದಕ್ಕೆ ಅವಕಾಶ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಸಭೆಗೆ ಹಾಜರಾಗಲಿಲ್ಲ.

Exit mobile version