ಹೊಸದೆಹಲಿ: ಗಡಿಯಲ್ಲಿ ಚೀನಾ ಕಿರಿಕ್ ಮಾಡುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ವ ಪಕ್ಷಗಳ ಸಭೆ ಕರೆದಿದ್ದಾರೆ.

ಲಡಾಖ್ ಕೇಂದ್ರಾಡಳಿತ ಪ್ರದೇಶದ ಗಾಲ್ವಾನ್ ಕಣಿವೆಯಲ್ಲಿ ಸೋಮವಾರ ರಾತ್ರಿ ಭಾರತ ಮತ್ತು ಚೀನಾ ಸೈನಿಕರ ನಡುವೆ ಘರ್ಷಣೆ ನಡೆದಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಅವರು ಸರ್ವಪಕ್ಷಗಳ ಸಭೆ ಕರೆದಿದ್ದಾರೆ.

ಭಾರತ – ಚೀನಾ ಗಡಿ ಪ್ರದೇಶದಲ್ಲಿನ ಪರಿಸ್ಥಿತಿ ಕುರಿತು ಚರ್ಚಿಸಲು ಜೂ. 19ರ ಸಂಜೆ 5ಕ್ಕೆ ಪ್ರಧಾನಿ ಸರ್ವ ಪಕ್ಷಗಳ ಸಭೆ ಕರೆದಿದ್ದಾರೆಂದು ಪ್ರಧಾನ ಮಂತ್ರಿ ಕಾರ್ಯಾಲಯ ಟ್ವೀಟ್ ಮಾಡಿದೆ.

ಈ ಸಭೆಯಲ್ಲಿ ವಿವಿಧ ಪಕ್ಷಗಳ ಅಧ್ಯಕ್ಷರು ಭಾಗವಹಿಸಲಿದ್ದಾರೆ. ಈ ಸಭೆಯು ಆನ್‌ಲೈನ್‌ (ವರ್ಚುವಲ್‌) ಮೂಲಕ ನಡೆಯಲಿದೆ ಎಂದು ಕಾರ್ಯಾಲಯ ತಿಳಿಸಿದೆ.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿಂದು 24 ಕೊರೊನಾ ಪಾಸಿಟಿವ್!

ಗದಗ ಜಿಲ್ಲೆಯಲ್ಲಿಂದು ಮತ್ತೆ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಜನರನ್ನು ಮತ್ತಷ್ಟು ಆತಂಕಕ್ಕೀಡು ಮಾಡಿದೆ.

ಅನ್ಲಾಕ್-2 ಮಾರ್ಗಸೂಚಿ ಬಿಡುಗಡೆ!: ಏನಿರುತ್ತೆ, ಏನಿರಲ್ಲ

ನವದೆಹಲಿ : ಕೇಂದ್ರ ಸರ್ಕಾರ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ಜುಲೈ 31ರ ವರೆಗೆ ಶಾಲಾ, ಕಾಲೇಜು,…

ಕೊರೊನಾ ಸಂಕಷ್ಟದ ಕುರಿತು ತುರ್ತು ಸಭೆಯಲ್ಲಿ ಅಧಿಕಾರಿಗಳಿಗೆ ಸಿಎಂ ಹೇಳಿದ್ದೇನು..?

ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ನಿರಂತರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಇಂದು ತುರ್ತು ಸಭೆ ನಡೆಸಿದರು.