ದೆಹಲಿ/ಬೆಂಗಳೂರು: ಜೂ. 25 ರಿಂದ ಜುಲೈ 4ರವರೆಗೆ ರಾಜ್ಯದಲ್ಲಿ SSLC ಪರೀಕ್ಷೆ ನಿಗದಿಯಂತೆ ನಡೆಯಲಿದೆ. ಕೊರೋನಾ ಪಿಡುಗಿನ ಕಾರಣ ಸಮಯದಲ್ಲಿ ಪರೀಕ್ಷೆ ನಡೆಸುವುದು ಬೇಡ ಎಂದು ಖಾಸಗಿ ಶಿಕ್ಷಣ ಸಂಸ್ಥೆ ಮುಖ್ಯಸ್ಥೆ ರಾಜಶ್ರೀ ನಾಗರಾಜ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.
ದೇಶಾದ್ಯಂತ ಕೊರೊನಾ ಹರಡುತ್ತಿರುವಂತೆಯೇ ರಾಜ್ಯದಲ್ಲಿ ಕೂಡಾ ವ್ಯಾಪಕವಾಗಿತ್ತು. ಈ ವಿಷಯವನ್ನು ಉಲ್ಲೇಖಿಸಿದ್ದ ಅವರು, ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸುವುದು ಬೇಡ ಎಂದು ವಾದಿಸಿದ್ದರು. ಆದರೆ, ಈ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿದೆ. ಈ ಮೂಲಕ ರಾಜ್ಯ ಹೈಕೋರ್ಟ್ ಈ ಹಿಂದೆ ನೀಡಿದ್ದ ಆದೇಶವನ್ನೇ ಎತ್ತಿ ಹಿಡಿದಿದ್ದು, ನಿಗದಿತ ದಿನಾಂಕಗಳಂದೇ ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ನಡೆಯಲಿವೆ.
ಶಿಕ್ಷಣ ಇಲಾಖೆ ಜೂನ್ 25 ರಿಂದ ಜುಲೈ 4ರವರೆಗೆ ರಾಜ್ಯದಲ್ಲಿ SSLC ಪರೀಕ್ಷೆ ನಡೆಸಲು ವೇಳಾಪಟ್ಟಿಯನ್ನು ನಿಗದಿಗೊಳಿಸಿದೆ. ನಿಗದಿತ ದಿನಾಂಕಗಳಂದು ಪರೀಕ್ಷೆ ನಡೆಸದಂತೆ ಖಾಸಗಿ ಶಿಕ್ಷಣ ಸಂಸ್ಥೆ ಮುಖ್ಯಸ್ಥೆ ರಾಜಶ್ರೀ ನಾಗರಾಜ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾ. ನಾಗೇಶ್ವರ್ ರಾವ್ ನೇತೃತ್ವದ ತ್ರಿಸದಸ್ಯ ಪೀಠ ಅರ್ಜಿಯನ್ನು ವಜಾಗೊಳಿಸಿತ್ತು.
ಹೈಕೋರ್ಟ್ನಲ್ಲಿ ಅರ್ಜಿ ವಜಾಗೊಂಡ ನಂತರ ಕೂಡ ಪಟ್ಟು ಬಿಡದ ರಾಜಶ್ರೀ ನಾಗರಾಜ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಕಡೆಗೆ ಸುಪ್ರೀಂ ಕೋರ್ಟ್ ಕೂಡ ಅವರ ಅರ್ಜಿ ವಜಾಗೊಳಿಸಿದೆ.

Leave a Reply

Your email address will not be published.

You May Also Like

ಪ್ಯಾಕೇಜ್ ಟೆಂಡರ್ ರದ್ದುಗೊಳಿಸುವಂತೆ ಒತ್ತಾಯ

ವರದಿ: ವಿಠಲ ಕೆಳೂತ್ಮಸ್ಕಿ: ಪ್ಯಾಕೇಜ್ ಟೆಂಂಡರ್ ರದ್ದುಗೊಳಿಸಿ ಭ್ರಷ್ಟವಾರ ತಡೆಯುವಂತೆ ಒತ್ತಾಯಿಸಿ ಇಲ್ಲಿನ ಗುತ್ತಿಗೆದಾರ ಸಂಘದ…

ಲಕ್ಷ್ಮೇಶ್ವರ: ಅಪರಾಧ ತಡೆ ಮಾಸಾಚರಣೆ

ತಾಲೂಕಿನ ಲಕ್ಷ್ಮೇಶ್ವರ ಪೊಲೀಸ್ ಠಾಣೆಯ ವ್ಯಾಪ್ತಿಯ ಹರದಗಟ್ಟಿ ಗ್ರಾಮದಲ್ಲಿ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮ ನಡೆಯಿತು.

ಹಾವೇರಿ ಜಿಲ್ಲೆಯ ಜನತೆಗೆ ಮೊದಲ ಸಿಹಿ ಸುದ್ದಿ.

40 ವರ್ಷದ ಕರೊನಾ ಸೋಂಕಿತ ವ್ಯಕ್ತಿ ಗುಣಮುಖವಾಗಿ ಮನೆಗೆ ಮರಳಿದ್ದಾರೆ. ಈ ಮೂಲಕ ಹಾವೆರಿ ಜಿಲ್ಲೆಯ ಜನತೆ ಸಿಹಿ ಸುದ್ದಿ ಸಿಕ್ಕಂತಾಗಿದೆ. ಪಿ-672 ಸೋಂಕಿತ ಗುಣಮುಖವಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.

ಶಿರಹಟ್ಟಿ ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘಕ್ಕೆ ಅವಿರೋಧ ಆಯ್ಕೆ

2020-21 ರಿಂದ ಮುಂದಿನ ಐದು ವರ್ಷಗಳ ಅವಧಿಗೆ ಶಿರಹಟ್ಟಿ ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಅವಿರೋಧ ಆಯ್ಕೆ ಮಾಡಲಾಯಿತು.