ನಿಗದಿತ ದಿನಾಂಕದಂದೇ ನಡೆಯಲಿದೆ ಎಸ್ಎಸ್ಎಲ್ಸಿ ಪರೀಕ್ಷೆ: ಸುಪ್ರೀಂ ಹಸಿರು ನಿಶಾನೆ

ದೆಹಲಿ/ಬೆಂಗಳೂರು: ಜೂ. 25 ರಿಂದ ಜುಲೈ 4ರವರೆಗೆ ರಾಜ್ಯದಲ್ಲಿ SSLC ಪರೀಕ್ಷೆ ನಿಗದಿಯಂತೆ ನಡೆಯಲಿದೆ. ಕೊರೋನಾ ಪಿಡುಗಿನ ಕಾರಣ ಸಮಯದಲ್ಲಿ ಪರೀಕ್ಷೆ ನಡೆಸುವುದು ಬೇಡ ಎಂದು ಖಾಸಗಿ ಶಿಕ್ಷಣ ಸಂಸ್ಥೆ ಮುಖ್ಯಸ್ಥೆ ರಾಜಶ್ರೀ ನಾಗರಾಜ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.
ದೇಶಾದ್ಯಂತ ಕೊರೊನಾ ಹರಡುತ್ತಿರುವಂತೆಯೇ ರಾಜ್ಯದಲ್ಲಿ ಕೂಡಾ ವ್ಯಾಪಕವಾಗಿತ್ತು. ಈ ವಿಷಯವನ್ನು ಉಲ್ಲೇಖಿಸಿದ್ದ ಅವರು, ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸುವುದು ಬೇಡ ಎಂದು ವಾದಿಸಿದ್ದರು. ಆದರೆ, ಈ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿದೆ. ಈ ಮೂಲಕ ರಾಜ್ಯ ಹೈಕೋರ್ಟ್ ಈ ಹಿಂದೆ ನೀಡಿದ್ದ ಆದೇಶವನ್ನೇ ಎತ್ತಿ ಹಿಡಿದಿದ್ದು, ನಿಗದಿತ ದಿನಾಂಕಗಳಂದೇ ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ನಡೆಯಲಿವೆ.
ಶಿಕ್ಷಣ ಇಲಾಖೆ ಜೂನ್ 25 ರಿಂದ ಜುಲೈ 4ರವರೆಗೆ ರಾಜ್ಯದಲ್ಲಿ SSLC ಪರೀಕ್ಷೆ ನಡೆಸಲು ವೇಳಾಪಟ್ಟಿಯನ್ನು ನಿಗದಿಗೊಳಿಸಿದೆ. ನಿಗದಿತ ದಿನಾಂಕಗಳಂದು ಪರೀಕ್ಷೆ ನಡೆಸದಂತೆ ಖಾಸಗಿ ಶಿಕ್ಷಣ ಸಂಸ್ಥೆ ಮುಖ್ಯಸ್ಥೆ ರಾಜಶ್ರೀ ನಾಗರಾಜ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾ. ನಾಗೇಶ್ವರ್ ರಾವ್ ನೇತೃತ್ವದ ತ್ರಿಸದಸ್ಯ ಪೀಠ ಅರ್ಜಿಯನ್ನು ವಜಾಗೊಳಿಸಿತ್ತು.
ಹೈಕೋರ್ಟ್ನಲ್ಲಿ ಅರ್ಜಿ ವಜಾಗೊಂಡ ನಂತರ ಕೂಡ ಪಟ್ಟು ಬಿಡದ ರಾಜಶ್ರೀ ನಾಗರಾಜ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಕಡೆಗೆ ಸುಪ್ರೀಂ ಕೋರ್ಟ್ ಕೂಡ ಅವರ ಅರ್ಜಿ ವಜಾಗೊಳಿಸಿದೆ.

Exit mobile version