ಬೆಂಗಳೂರು: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಒಪ್ಪಿಗೆಯ ಮೇರೆಗೆ ವಿಧಾನ ಪರಿತ್ತಿಗೆ ಕಾಂಗ್ರೆಸ್ ಪಕ್ಷ ಅಧಿಕೃತ ಅಭ್ಯರ್ಥಿಯನ್ನು ಆಯ್ಕೆ ಮಾಡಿ ಆದೇಶಿಸಿದೆ. ಕಾಂಗ್ರೆಸ್ ಪಕ್ಷದ ಮುಖಂಡ ಬಿ.ಕೆ.ಹರಿಪ್ರಸಾದ್ ಮತ್ತು ನಸೀರ ಅಹ್ಮದ್ ಅವರನ್ನು ಆಯ್ಕೆ ಮಾಡಲಾಗಿದೆ. ಈಗಾಗಲೇ ರಾಜ್ಯಸಭಾ ಸದಸ್ಯರಾಗಿ ಅವಧಿ ಪೂರ್ಣಗೊಳ್ಳುವ ಬೆನ್ನಲ್ಲೆ ಹರಿಪ್ರಸಾದ್, ನಸೀರ ಅಹ್ಮದ್ ಅವರಿಗೆ ಪರಿಷತ್ ಚುನಾವಣೆಗೆ ಅವಕಾಶ ನೀಡಿದಂತಾಗಿದೆ.
ಈ ಕುರಿತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮುಕುಲ್ ವಾಸ್ನಿಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ
