ಬೆಂಗಳೂರು: ಇತ್ತಿಚಿಗಷ್ಟೆ ಗ್ರಾಮ ಪಂಚಾಯತಿ ಚುನಾಯಿತ ಪ್ರತಿನಿಧಿಗಳ ಅಧಿಕಾರ ಅವಧಿ ಮುಗಿದಿದ್ದು.ಕೊರೊನಾ ಕಾರಣದಿಂದ ಗ್ರಾಮ ಪಂಚಾಯತಿಗಳ ಸಾರ್ವತ್ರಿಕ ಚುನಾವಣೆಗಳು ನಡೆಯದ ಕಾರಣ, 5 ವರ್ಷ ಅವಧಿಯನ್ನು ಮುಗಿಸಿದ ನಂತರ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ,1993ರ ಪ್ರಕರಣ 8(1)ಬಿ(2)ರಡಿ ಕಲಂ 321ರ ಅಡಿಯಲ್ಲಿ ಆಡಳಿತಾಧಿಕಾರಿಗಳನ್ನು ನೇಮಿಸಲು ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ಉಮಾ ಮಹಾದೇವನ್ ಆದೇಶ ಹೊರಡಿಸಿದ್ದಾರೆ.
