ನವದೆಹಲಿ: ಲಡಾಖ್ ಪ್ರದೇಶದ ಗಾಲ್ವಾನ್‌ ಕಣಿವೆಯಲ್ಲಿ ಪೂರ್ವ ನಿಯೋಜಿತರಾಗಿ ಚೀನಾ ಸೈನಿಕರು ನಮ್ಮ ಸೈನಿಕರ ಮೇಲೆ ದಾಳಿ ನಡೆಸಿದ್ದಾರೆ ಎಂದು ಭಾರತ ಚೀನಾಕ್ಕೆ ಖಡಕ್ ಆಗಿ ತಿಳಿಸಿದೆ.
ಸೋಮವಾರ ರಾತ್ರಿ ಗಡಿಯಲ್ಲಿ ಎರಡು ರಾಷ್ಟ್ರಗಳ ಸೈನಿಕರ ಮಧ್ಯೆ ಘರ್ಷಣೆ ನಡೆದ ಬಳಿಕ ಬುಧವಾರ ಭಾರತದ ವಿದೇಶಾಂಗ ಇಲಾಖೆ ಸಚಿವ ಜೈಶಂಕರ್‌ ಮತ್ತು ಚೀನಾದ ವಿದೇಶಾಂಗ ಸಚಿವ ವಾಂಗ್‌ ವೈ ಮಧ್ಯೆ ದೂರವಾಣಿ ಮಾತುಕತೆ ನಡೆದಿದೆ.
ಜೂ. 6 ರಂದು ನಡೆದ ಮಿಲಿಟರಿ ಕಮಾಂಡರ್‌ ಮಟ್ಟದ ಮಾತುಕತೆಯ ವೇಳೆ ಎಲ್‌ಎಸಿಯಿಂದ ಸೇನೆ ಹಿಂದಕ್ಕೆ ಬರುವ ಸಂಬಂಧ ಮಾತುಕತೆ ನಡೆದಿತ್ತು. ಆದರೆ ಚೀನಾ ಸೇನೆ ಭಾರತದ ಎಲ್‌ಎಸಿ ಬಳಿ ಟೆಂಟ್‌ ನಿರ್ಮಿಸಿತ್ತು. ಆದರೆ, ಚೀನಾ ಟೆಂಟ್ ತೆರೆಯದೆ, ಈ ವಿಚಾರದ ಮಾತುಕತೆ ನಡೆದ ಸಂದರ್ಭದಲ್ಲಿಯೇ ಪೂರ್ವ ನಿಯೋಜಿತವಾಗಿ ದಾಳಿ ನಡೆಸಿದೆ. ಇದರಿಂದಾಗಿ ಸಾವು ನೋವು ಸಂಭವಿಸಿದೆ. ಈ ಘಟನೆಗೆ ಚೀನಾವೇ ನೇರ ಕಾರಣ ಎಂದು ಭಾರತ ತಿರುಗೇಟು ನೀಡಿದೆ.
ಅಲ್ಲದೇ, ಈ ಘಟನೆಯಿಂದ ದ್ವಿಪಕ್ಷೀಯ ಮಾತುಕತೆಯ ಮೇಲೆ ಪರಿಣಾಮ ಬೀರಿದೆ. ಜೂನ್‌ 6 ರಂದು ಕಮಾಂಡರ್‌ ಮಟ್ಟ ಮಾತುಕತೆಯ ವೇಳೆ ಏನು ನಿರ್ಧಾರ ಮಾಡಲಾಗಿದೆಯೋ ಅದನ್ನು ಎರಡು ದೇಶಗಳು ಪಾಲಿಸಬೇಕು. ಎರಡು ಕಡೆಯ ಸೈನಿಕರು ದ್ವಿಪಕ್ಷೀಯ ಒಪ್ಪಂದವನ್ನು ಪಾಲಿಸಬೇಕು ಎಂದು ಭಾರತ ಹೇಳಿದೆ.
ಭಾರತದ ಸೇನೆ ಎಲ್‌ಎಸಿ ದಾಟಿ ನಮ್ಮ ಸೈನಿಕರ ಮೇಲೆ ದಾಳಿ ನಡೆಸಿದೆ. ಭಾರತವು ಎಲ್ಲ ಒಪ್ಪಂದಗಳನ್ನು ಉಲ್ಲಂಘಿಸಿ ಕೃತ್ಯ ನಡೆಸಿದೆ. ಚೀನಾ ಇದನ್ನು ಗಂಭೀರವಾಗಿ ಪರಿಗಣಿಸಿದೆ. ಚೀನಿ ಸೈನಿಕರ ಮೇಲೆ ಹಲ್ಲೆ ಎಸಗಿದವರ ವಿರುದ್ಧ ಭಾರತ ಕ್ರಮ ಕೈಗೊಳ್ಳಬೇಕು. ಇನ್ನು ಮುಂದೆ ಈ ರೀತಿಯ ಘಟನೆ ಮರುಕಳಿಸಬಾರದು ಎಂದು ಚೀನಾ ಹೇಳಿದೆ. ಸದ್ಯ ಎರಡು ದೇಶಗಳು ಯಾಥಾಸ್ಥಿತಿಯನ್ನು ಕಾಯ್ದುಕೊಳ್ಳಲು ಒಪ್ಪಿಕೊಂಡಿದ್ದು, ಸಮಸ್ಯೆಯನ್ನು ಮಾತುಕತೆಯಿಂದ ಬಗೆಹರಿಸಿಕೊಳ್ಳುವ ತೀರ್ಮಾನಕ್ಕೆ ಬರಲಾಗಿದೆ.

Leave a Reply

Your email address will not be published. Required fields are marked *

You May Also Like

ಮಾಜಿ ಭೂಗತ ದೊರೆ ಮುತ್ತಪ್ಪ ರೈ ನಿಧನ

ಭೂಗತ ಲೋಕದ ಮಾಜಿ ಡಾನ್ ಮುತ್ತಪ್ಪ ರೈ(68) ಇಂದು (ಶುಕ್ರವಾರ) ಬೆಳಿಗ್ಗೆ ನಿಧನರಾಗಿದ್ದಾರೆ. ಇಂದು ಸಂಜೆ 4 ಗಂಟೆಗೆ ರಾಮನಗರ ತಾಲೂಕಿನ ಬಿಡದಿಯಲ್ಲಿರುವ ಫಾರ್ಮ ಹೌಸ್ ನಲ್ಲಿ ಮುತ್ತಪ್ಪ ರೈ ಅವರ ಅಂತ್ಯಕ್ರಿಯೇ ನಡೆಯಲಿದೆ.

ಉಗ್ರರಿಗೆ ಚಿಕಿತ್ಸೆ ನೀಡಲು, ಶಸ್ತ್ರಾಸ್ತ್ರ ಪೂರೈಸುವುದಕ್ಕಾಗಿಯೇ ಈತ ಮಾಡಿದ್ದೇನು?

ಐಸಿಸ್ ನ ಉಗ್ರರಿಗೆ ವೈದ್ಯಕೀಯ ಸೇವೆ ಒದಗಿಸುವುದಕ್ಕಾಗಿ ಹಾಗೂ ಶಸ್ತ್ರಾಸ್ತ್ರ ಪೂರೈಕೆ ಮಾಡಲು ರಹಸ್ಯವಾಗಿ ಸಂವಹನ ನಡೆಸುವುದಕ್ಕಾಗಿ ಪ್ರತ್ಯೇಕ ಆಪ್ ಗಳನ್ನು ನಗರ ಮೂಲದ ನೇತ್ರ ವೈದ್ಯನೊಬ್ಬ ಅಭಿವೃದ್ಧಿ ಪಡಿಸುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದೆ.

ಈ ನಟಿಗೆ ಸಹಾಯ ಮಾಡಿದ ಮೇಕಪ್ ಮ್ಯಾನ್!

ಕಿರುತೆರೆ ನಟಿಯೊಬ್ಬರು ಆರ್ಥಿಕ ಕಷ್ಟಕ್ಕೆ ಸಿಲುಕಿದ್ದಾಗ ಮೇಕಪ್ ಮ್ಯಾನ್ ಸಹಾಯ ಮಾಡುವುದಾಗಿ ಹೇಳುವ ಮೂಲಕ ಮಾನವೀಯತೆ ಮೆರೆದಿದ್ದಾರೆ.