ಪಾಟ್ನಾ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಜನ ಸೆಲೆಬ್ರಿಟಿಗಳ ವಿರುದ್ಧ ವಕೀಲ ಸುಧಿರ್ ಕುಮಾರ್ ಓಜಾ ದೂರು ದಾಖಲಿಸಿದ್ದಾರೆ.

ಇಲ್ಲಿಯ ಮುಜಾಫರ್ಪುರ್ ನ್ಯಾಯಾಲಯದಲ್ಲಿ ದೂರು ದಾಖಲಸಿದ್ದಾರೆ. ಏಳು ಸಿನಿಮಾಗಳಿಂದ ಸುಶಾಂತ್ ಅವರನ್ನು ಕೈ ಬಿಡಲಾಗಿತ್ತು. ಅಲ್ಲದೇ, ಅವರ ಹಲವು ಸಿನಿಮಾಗಳು ಬಿಡುಗಡೆ ಹೊಂದಿರಲಿಲ್ಲ. ಈ ಎಲ್ಲ ಘಟನೆಗಳು ಸುಶಾಂತ್ ಅವರಿಗೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದವು. ಹೀಗಾಗಿ ಅವರು ಇಂತಹ ನಿರ್ಧರ ಕೈಗೊಂಡಿದ್ದಾರೆ ಎಂದು ವಕೀಲ ಓಜಾ ಆರೋಪಿಸಿದ್ದಾರೆ.

ಬಾಲಿವುಡ್ ಸಿನಿಮಾ ನಿರ್ದೇಶಕರಾದ ಕರಣ್ ಜೋಹರ್, ಸಂಜಯ್ ಲೀಲಾ ಬನ್ಸಾಲಿ, ನಿರ್ಮಾಪಕಿ ಏಕ್ತಾ ಕಪೂರ್ ಮತ್ತು ನಟ ಸಲ್ಮಾನ್ ಖಾನ್ ಸೇರಿದಂತೆ ಎಂಟು ಜನರ ವಿರುದ್ಧ ಐಪಿಸಿ ಸೆಕ್ಸನ್ 306, 109, 504 ಮತ್ತು 506 ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ.

ಭಾನುವಾರ ಬೆಳಿಗ್ಗೆ 9.30ಕ್ಕೆ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆಗೆ ಶರಣಾಗಿದ್ದರು. ಮಾನಸಿಕ ಖಿನ್ನತೆಗೊಳಗಾಗಿದ್ದರಿಂದ ಸುಶಾಂತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಕೈ ಪೋ ಚೆ ಸಿನಿಮಾ ಮೂಲಕ ಬಾಲಿವುಡ್ ಗೆ ಎಂಟ್ರಿ ಕೊಟ್ಟಿದ್ದಸುಶಾಂತ್ ಗೆ ಧೋನಿ ಸಿನಿಮಾ ದೊಡ್ಡ ಬ್ರೇಕ್ ನೀಡಿತ್ತು. 10ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿರುವ ಸುಶಾಂತ್ ಅವರನ್ನು ಬಾಲಿವುಡ್ ತಾರತಮ್ಯದಿಂದ ನೋಡಲಾಗುತ್ತಿತ್ತು ಎಂಬ ಸುದ್ದಿ ಹರಿದಾಡಿತ್ತು. ಸದ್ಯ ಈ ಕುರಿತು ಹಲವರು ಹಲವು ವ್ಯಾಖ್ಯಾನಗಳನ್ನು ನೀಡುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ಡಿವೋರ್ಸ್ ನೀಡಿ, ಗೆಳತಿಯೊಂದಿಗೆ ಪತಿಯ ಮದುವೆ ಮಾಡಿದ ಪತ್ನಿ!

ಭೋಪಾಲ್ : ಪತಿಗೆ ಡಿವೋರ್ಸ್ ಕೊಟ್ಟು ಸ್ನೇಹಿತೆಯೊಂದಿಗೆ ಮದುವೆ ಮಾಡಿಸಿರುವ ಘಟನೆ ಮಧ್ಯ ಪ್ರದೇಶದ ಬೋಪಾಲ್ ನಲ್ಲಿ ನಡೆದಿದೆ.

ಹರ್ನಾಜ್ ಕೌರ್ ಸಂಧು 2021ರ ನೂತನ ವಿಶ್ವ ಸುಂದರಿ!

ಉತ್ತರಪ್ರಭ ದೆಹಲಿ: 2021ರ 70ನೇ ಆವೃತ್ತಿಯ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತದ ಹರ್ನಾಜ್ ಕೌರ್ ಸಂಧು…

ಶುಭ ಸುದ್ದಿ: ನಿಮ್ಮ ಮಗುವಿಗೆ ‘ಆಧಾರ್’ ಕಾರ್ಡ್ ಪಡೆಯಲು ಇಲ್ಲಿದೆ ಮಾಹಿತಿ

ದೇಶದಲ್ಲಿ ಜನಿಸಿದ ನವಜಾತ ಶಿಶುಗಳಿಗೆ ಆಧಾರ್ ಸೌಲಭ್ಯವನ್ನು ಒದಗಿಸಲಾಗಿದೆ.

50 ವರ್ಷ ಮೇಲ್ಪಟ್ಟವರಿಗೂ ಕೋವಿಡ್ ಲಸಿಕೆ: ಹರ್ಷವರ್ಧನ್

ಮಾರ್ಚ್ನಿಂದ 50 ವರ್ಷ ಮೇಲ್ಪಟ್ಟವರಿಗೂ ಕೋವಿಡ್-19 ಲಸಿಕೆ ನೀಡಲು ನಾವು ಸಮರ್ಥರಿದ್ದೇವೆ ಎಂದು ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ.