ಪಾಟ್ನಾ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಜನ ಸೆಲೆಬ್ರಿಟಿಗಳ ವಿರುದ್ಧ ವಕೀಲ ಸುಧಿರ್ ಕುಮಾರ್ ಓಜಾ ದೂರು ದಾಖಲಿಸಿದ್ದಾರೆ.

ಇಲ್ಲಿಯ ಮುಜಾಫರ್ಪುರ್ ನ್ಯಾಯಾಲಯದಲ್ಲಿ ದೂರು ದಾಖಲಸಿದ್ದಾರೆ. ಏಳು ಸಿನಿಮಾಗಳಿಂದ ಸುಶಾಂತ್ ಅವರನ್ನು ಕೈ ಬಿಡಲಾಗಿತ್ತು. ಅಲ್ಲದೇ, ಅವರ ಹಲವು ಸಿನಿಮಾಗಳು ಬಿಡುಗಡೆ ಹೊಂದಿರಲಿಲ್ಲ. ಈ ಎಲ್ಲ ಘಟನೆಗಳು ಸುಶಾಂತ್ ಅವರಿಗೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದವು. ಹೀಗಾಗಿ ಅವರು ಇಂತಹ ನಿರ್ಧರ ಕೈಗೊಂಡಿದ್ದಾರೆ ಎಂದು ವಕೀಲ ಓಜಾ ಆರೋಪಿಸಿದ್ದಾರೆ.

ಬಾಲಿವುಡ್ ಸಿನಿಮಾ ನಿರ್ದೇಶಕರಾದ ಕರಣ್ ಜೋಹರ್, ಸಂಜಯ್ ಲೀಲಾ ಬನ್ಸಾಲಿ, ನಿರ್ಮಾಪಕಿ ಏಕ್ತಾ ಕಪೂರ್ ಮತ್ತು ನಟ ಸಲ್ಮಾನ್ ಖಾನ್ ಸೇರಿದಂತೆ ಎಂಟು ಜನರ ವಿರುದ್ಧ ಐಪಿಸಿ ಸೆಕ್ಸನ್ 306, 109, 504 ಮತ್ತು 506 ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ.

ಭಾನುವಾರ ಬೆಳಿಗ್ಗೆ 9.30ಕ್ಕೆ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆಗೆ ಶರಣಾಗಿದ್ದರು. ಮಾನಸಿಕ ಖಿನ್ನತೆಗೊಳಗಾಗಿದ್ದರಿಂದ ಸುಶಾಂತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಕೈ ಪೋ ಚೆ ಸಿನಿಮಾ ಮೂಲಕ ಬಾಲಿವುಡ್ ಗೆ ಎಂಟ್ರಿ ಕೊಟ್ಟಿದ್ದಸುಶಾಂತ್ ಗೆ ಧೋನಿ ಸಿನಿಮಾ ದೊಡ್ಡ ಬ್ರೇಕ್ ನೀಡಿತ್ತು. 10ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿರುವ ಸುಶಾಂತ್ ಅವರನ್ನು ಬಾಲಿವುಡ್ ತಾರತಮ್ಯದಿಂದ ನೋಡಲಾಗುತ್ತಿತ್ತು ಎಂಬ ಸುದ್ದಿ ಹರಿದಾಡಿತ್ತು. ಸದ್ಯ ಈ ಕುರಿತು ಹಲವರು ಹಲವು ವ್ಯಾಖ್ಯಾನಗಳನ್ನು ನೀಡುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ಕೋವಿಡ್ ಸೋಂಕಿನಿಂದ ಮೃತಪಟ್ಟ 22 ಶವಗಳನ್ನು ಒಂದೇ ಆಂಬುಲೆನ್ಸ್ ಸಾಗಾಟ

ಕೊರೊನಾ ಸೋಂಕಿನಿಂದ ಮೃತಪಟ್ಟ 22 ಶವಗಳನ್ನು ಒಂದೇ ಆಂಬುಲೆನ್ಸ್‍ನಲ್ಲಿ ಚಿತಾಗಾರಕ್ಕೆ ಸಾಗಿಸುವಂತಹ ಸನ್ನಿವೇಶ ಮಹಾರಾಷ್ಟ್ರದಲ್ಲಿ ಘಟನೆ ನಡೆದಿದೆ.

ಕೊರೊನಾದ ಮಧ್ಯೆಯೂ ಸಂಗ್ರಹವಾದ ಜಿಎಸ್ ಟಿ ಮೊತ್ತ ಎಷ್ಟು ಗೊತ್ತಾ?

ನವದೆಹಲಿ : ಹಣಕಾಸು ಇಲಾಖೆ ಜಿಎಸ್‌ಟಿ ಸಂಗ್ರಹದ ಮಾಹಿತಿ ಬಿಡುಗಡೆ ಮಾಡಿದ್ದು, ಜೂನ್ ತಿಂಗಳಲ್ಲಿ ಒಟ್ಟು…

3 ಲಕ್ಷ ರೂ. ಚಿನ್ನದ ಮಾಸ್ಕ್ ಧರಿಸುವ ಶಂಕರ್ ಕುರಾಡೆ

ಪುಣೆ: ಈ ಮನುಷ್ಯನಿಗೆ ಚಿನ್ನದ ಹುಚ್ಚು ಮತ್ತು ಪ್ರಚಾರದ ತೆವಲು ಎಷ್ಟಿದೆಯೆಂದರೆ, ಕೊರೋನಾ ಬಿಕ್ಕಟ್ಟಿನಲ್ಲಿ ಚಿನ್ನದ…

ಕೊರೊನಾ ದುಷ್ಪರಿಣಾಮ: ನಗರಗಳ 14 ಕೋಟಿ ಜನರ ಬದುಕು ದುಸ್ತರ

ದೆಹಲಿ: ದೇಶಾದ್ಯಂತ ಕೊರೊನಾ ಕಾರಣದಿಂದಾಗಿ ಲಾಕ್ಡೌನ್ ದುಷ್ಪರಿಣಾಮ ನಗರ ಪ್ರದೇಶಗಳಲ್ಲಿ ವಾಸವಾಗಿರುವ ನಾಗರಿಕರ ಮೇಲೆ ಹೆಚ್ಚಾಗಿದೆ.…