ವಿಶ್ವ ಸಂಸ್ಥೆ ಭದ್ರತಾ ಸಮಿತಿಗೆ ಭಾರತ ತಾತ್ಕಾಲಿಕ‌ ಸದಸ್ಯ

ನ್ಯೂಯಾರ್ಕ್‌: ಚೀನಾದೊಂದಿಗೆ ಗಡಿಯಲ್ಲಿ ಸಂಘರ್ಷ ನಡೆಯುತ್ತಿರುವ ಬೆನ್ನಲ್ಲಿಯೇ ಭಾರತಕ್ಕೆ ವಿಶ್ವಸಂಸ್ಥೆಯ ಭದ್ರತಾ ಸಮಿತಿಯ ತಾತ್ಕಾಲಿಕ ಸದಸ್ಯತ್ವ ಸಿಕ್ಕಿದೆ.

ಈ ಕುರಿತು ವಿಶ್ವಸಂಸ್ಥೆಯಲ್ಲಿ ಭಾರತದ ಖಾಯಂ ಪ್ರತಿನಿಧಿಯಾಗಿರುವ ಟಿ.ಎಸ್‌. ತಿರುಮೂರ್ತಿ ತಿಳಿಸಿದ್ದಾರೆ. 192 ಮತಗಳ ಪೈಕಿ ಭಾರತಕ್ಕೆ 184 ಮತಗಳು ಸಿಕ್ಕಿವೆ. ಈ ನಿಟ್ಟಿನಲ್ಲಿ ಭಾರತ 2021ರಿಂದ 22ರ ವರೆಗೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ತಾತ್ಕಾಲಿಕ ಸದಸ್ಯತ್ವ ಹೊಂದಿರಲಿದೆ.
ವಿಶ್ವಂಸ್ಥೆಯ ವಿವಿಧ ಸದಸ್ಯ ರಾಷ್ಟ್ರಗಳೊಂದಿಗಿನ ಉತ್ತಮ ಸಂಬಂಧವು ಐತಿಹಾಸಿಕ ವಿಜಯಕ್ಕೆ ಕಾರಣವಾಗಿದೆ ಎಂದು ತಿರುಮೂರ್ತಿ ಅಭಿಪ್ರಾಯಪಟ್ಟಿದ್ದಾರೆ. ಇತ್ತೀಚೆಗೆ ವಿಶ್ವಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸದಸ್ಯತ್ವ ಪಡೆದಿರುವ ಫ್ರಾನ್ಸ್, ಭಾರತಕ್ಕೆ ಖಾಯಂ ಸದಸ್ವತ್ವ ನೀಡುವಂತೆ ಪ್ರತಿಪಾದಿಸಿತ್ತು. ಅಲ್ಲದೇ ಭಾರತಕ್ಕೆ ಶಾಶ್ವತ ಸದಸ್ಯತ್ವ ನೀಡುವ ಎಲ್ಲಾ ಅರ್ಹತೆ ಇದೆ ಎಂದು ಅದು ವಾದಿಸಿತ್ತು.

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಒಟ್ಟು 5 ಖಾಯಂ ಸದಸ್ಯರಿದ್ದು, 10 ತಾತ್ಕಾಲಿಕ ಸದಸ್ಯ ರಾಷ್ಟ್ರಗಳಿವೆ.

Exit mobile version