ಒಂದೇ ದಿನ ದಾಖಲೆಯ ಸೋಂಕಿತರನ್ನು ಹೊಂದಿದ ಭಾರತ!

ಬೆಂಗಳೂರು: ವಿಶ್ವ ಸೇರಿದಂತೆ ದೇಶದಲ್ಲಿ ಕೊರೊನಾ ಮಹಾಮಾರಿಯ ಅಟ್ಟಹಾಸ ಹೆಚ್ಚಾಗುತ್ತಿದೆ.

ದೇಶದಲ್ಲಿ ಮಹಾಮಾರಿ ಸೋಂಕಿತರ ಸಂಖ್ಯೆ 3,67,264ಕ್ಕೆ ಏರಿಕೆ ಕಂಡಿದೆ. ಇಲ್ಲಿಯವರೆಗೂ 1,94,438 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಅಲ್ಲದೇ, 12,262 ಜನ ಬಲಿಯಾಗಿದ್ದಾರೆ. ವಿಶ್ವದಲ್ಲಿಯೇ ಸೋಂಕಿತರ ಸಂಖ್ಯೆಯ ಪಟ್ಟಿಯಲ್ಲಿ ಭಾರತ 4ನೇ ಸ್ಥಾನದಲ್ಲಿದೆ. ಬುಧವಾರ ಒಂದೇ ದಿನ 13,107 ದಾಖಲೆಯ ಪ್ರಕರಣಗಳು ದೇಶದಲ್ಲಿ ದಾಖಲಾಗಿವೆ.

ವಿಶ್ವದಾದ್ಯಂತ 4.51 ಲಕ್ಷಕ್ಕೂ ಹೆಚ್ಚು ಜನರು ಈ ಮಹಾಮಾರಿಗೆ ಬಲಿಯಾಗಿದ್ದಾರೆ. 84 ಲಕ್ಷಕ್ಕೂ ಹೆಚ್ಚು ಜನರಿಗೆ ಸೋಂಕು ತಗುಲಿದೆ. ಅಮೆರಿಕದಲ್ಲಿ ವೈರಸ್ ತನ್ನ ಅಟ್ಟಹಾಸ ಮುಂದುವರೆಸಿದೆ. ಇದು ಇಂದಿಗೂ ಮೊದಲ ಸ್ಥಾನದಲ್ಲಿಯೇ ಇದೆ. ಇಲ್ಲಿ 22.34 ಲಕ್ಷ ಜನರಿಗೆ ಸೋಂಕು ಕಾಣಿಸಿಕೊಂಡಿದೆ. 1.19 ಲಕ್ಷ ಜನರು ಸಾವನ್ನಪ್ಪಿದ್ದಾರೆ.

ಬ್ರೆಜಿಲ್ ಸೋಂಕಿತರ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದು, 9.6 ಲಕ್ಷ ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. 46,600ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ರಷ್ಯ ಸೋಂಕಿತರ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದ್ದು, 5.53 ಲಕ್ಷ ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇಲ್ಲಿ 7,400ಕ್ಕೂ ಅಧಿಕ ಜನ ಸಾವನ್ನಪ್ಪಿದ್ದಾರೆ. ಯುಕೆ ಸೋಂಕಿತರ ಪಟ್ಟಿಯಲ್ಲಿ 5ನೇ ಸ್ಥಾನಕ್ಕೆ ಇಳಿದಿದೆ. ಇಲ್ಲಿ ಸುಮಾರು 3 ಲಕ್ಷದಷ್ಟು ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. 42,100ಕ್ಕೂ ಹೆಚ್ಚು ಜನ ಬಲಿಯಾಗಿದ್ದಾರೆ.

Exit mobile version