ಬೆಂಗಳೂರು: ಸ್ಮಾರ್ಟ್ ಫೋನ್ ಗಾಗಿ ಕಳ್ಳತನ ಮಾಡಲು ಪ್ರಾರಂಭಿಸಿದ ಅಪ್ರಾಪ್ತ ಬಾಲಕನೊಬ್ಬ ಬರೋಬ್ಬರಿ ರೂ. 4 ಲಕ್ಷಕ್ಕೂ ಅಧಿಕ ಹಣ ಕದ್ದು ಸಿಕ್ಕಿ ಬಿದ್ದ ಘಟನೆ ನಗರದಲ್ಲಿ ನಡೆದಿದೆ.

ಈ ಬಾಲಕನ ಸ್ನೇಹಿತರು ದುಬಾರಿ ಫೋನ್ ಬಳಸಿ ಸೋಷಿಯಲ್ ಮೀಡಿಯಾದಲ್ಲಿ ನಿರತರಾಗಿರುತ್ತಿದ್ದರು. ಅವರನ್ನು ನೋಡಿ ಬಾಲಕನಿಗೂ ಮೊಬೈಲ್ ತೆಗೆದುಕೊಳ್ಳುವ ಆಸೆಯಾಗಿದೆ. ಇದಕ್ಕಾಗಿ ಕಳ್ಳತನದ ಹಾದಿ ಹಿಡಿದಿದ್ದಾನೆ. ನಗರದ ಪ್ರತಿಷ್ಠಿತ ಏರಿಯಾದ ನಾಲ್ಕು ಅಂಗಡಿಯಲ್ಲಿ ಕಳ್ಳತನ ಮಾಡಿದ್ದಾನೆ.

ಬಾಲಕ ಜೂ. 9ರಂದು ಬೆಂಗಳೂರಿನ ವಿಠ್ಠಲ ಮಲ್ಯ ರಸ್ತೆ, ಲ್ಯಾವೆಲ್ಲೆ ರಸ್ತೆ, ಸೇಂಟ್ ಮಾರ್ಕ್ ರಸ್ತೆಯ ನಾಲ್ಕು ಅಂಗಡಿಗಳ ಶೆಟರ್ ಮುರಿದು ಕಳ್ಳತನ ಮಾಡಿದ್ದಾನೆ. ಒಂದು ಅಂಗಡಿಯಲ್ಲಿ ರೂ. 4 ಸಾವಿರ ಹಾಗೂ ಮತ್ತೊಂದು ಅಂಗಡಿಯಲ್ಲಿ ರೂ. 4 ಲಕ್ಷ ದೋಚಿದ್ದಾನೆ.

ಈ ಕುರಿತು ಅಂಗಡಿ ಮಾಲೀಕರು ಸಿಸಿಟಿವಿ ವಿಡಿಯೋ ಸಹಿತ ಕಬ್ಬನ್ ಪಾರ್ಕ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಅಪ್ರಾಪ್ತನನ್ನು ಪತ್ತೆ ಹಚ್ಚಿ ಬಾಲಮಂದಿರಕ್ಕೆ ಕಳುಹಿಸಿದ್ದಾರೆ.

Leave a Reply

Your email address will not be published.

You May Also Like

ಕೋವಿಡ್ ನಿಯಂತ್ರಣಕ್ಕಾಗಿ ನೂತನ ನಿಯಮಗಳು ಜಾರಿ

ನೆರೆ ರಾಜ್ಯಗಳಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಎರಡನೇ ಅಲೆ ಬರದಂತೆ ನಿಯಂತ್ರಿಸಲು ಕೆಲ ಜಿಲ್ಲೆಗಳಲ್ಲಿ ಕೋವಿಡ್ ಪರೀಕ್ಷೆಯ ಗುರಿಯನ್ನು ಹೆಚ್ಚಿಸಲಾಗಿದೆ.

ಸಾಲು ಮರದ ತಿಮ್ಮಕ್ಕ ಆಸ್ಪತ್ರೆಗೆ ದಾಖಲು!

ಹಾಸನ: ಶತಾಯುಷಿ ಸಾಲುಮರದ ತಿಮ್ಮಕ್ಕನವರಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ತೀವ್ರ ಹೊಟ್ಟೆ ನೋವು, ವಾಂತಿ,…

ಶೋಷಿತ ಸಮುದಾಯಗಳು ಮೀಸಲಾತಿ ನೀಡಲು ಸರ್ಕಾರ ಕ್ರಮ ಕೈಗೊಳ್ಳಿ

ರಾಜ್ಯದ ಹಲವು ಸಮುದಾಯಗಳು ಮೀಸಲಾತಿಗಾಗಿ ಹೋರಾಟದ ಹಾದಿ ಹಿಡಿದಿವೆ. ಇದಕ್ಕೆ ನಮ್ಮ ವಿರೋಧ ಖಂಡಿತಾ ಇಲ್ಲ. ಶೋಷಿತ ಸಮುದಾಯಗಳು ಮೀಸಲಾತಿ ಪಡೆಯುವುದು ಅವುಗಳ ಸಂವಿಧಾನಬದ್ಧ ಹಕ್ಕು ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.