ಬೆಂಗಳೂರು: ವಿಕಾಸಸೌಧದಲ್ಲಿ ಕೊರೊನಾ ಆತಂಕ ಮನೆ ಮಾಡಿರುವುದರಿಂದಾಗಿ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿಗಳಿಗೆ ಶುಕ್ರವಾರ ಕಚೇರಿ ಕೆಲಸಕ್ಕೆ ರಜೆ ನೀಡಲಾಗಿದೆ.
ಇತ್ತೀಚೆಗೆ ಕೊರೊನಾ ಸೋಂಕಿತ ವ್ಯಕ್ತಿಯೊಬ್ಬರು ವ್ಯಕ್ತಿಯೊಬ್ಬರು ವಿಕಾಸ ಸೌಧದಲ್ಲಿ ಸುತ್ತಾಡಿದ ಹಿನ್ನೆಲೆಯಲ್ಲಿ ಆತಂಕ ಮನೆ ಮಾಡಿತ್ತು. ಹೀಗಾಗಿ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಮತ್ತು ವೈರಸ್ ಹರಡುವುದನ್ನು ತಪ್ಪಿಸಲು ಗುರುವಾರ ಸಂಜೆ ವಿಕಾಸಸೌಧ ಕಟ್ಟಡದ ಎಲ್ಲಾ ಕೊಠಡಿಗಳು ಮತ್ತು ಕಾರಿಡಾರ್ ಗಳಿಗೆ ಬಿ.ಬಿ.ಎಂ.ಪಿ. ವತಿಯಿಂದ ಕ್ರಿಮಿ ನಾಶಕವನ್ನು ಪೂರ್ಣ ಪ್ರಮಾಣದಲ್ಲಿ ಸಿಂಪಡಣೆ ಮಾಡಲಾಯಿತು.
ಈ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ ಸಿಬ್ಬಂದಿಗಳು ಕೆಲಸಕ್ಕೆ ಹಾಜರಾಗದೆ ಇಂದು ಮನೆಯಿಂದಲೇ ಕೆಲಸ ಮಾಡುವಂತೆ ಸೂಚಿಸಲಾಗಿದೆ.

Leave a Reply

Your email address will not be published. Required fields are marked *

You May Also Like

ಇಂದು ಸಾರಿಗೆ ಸಚಿವರ ಗದಗ ಜಿಲ್ಲಾ ಪ್ರವಾಸ

ಉತ್ತರಪ್ರಭಗದಗ: ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಾದ ಬಿ. ಶ್ರೀರಾಮುಲು ಅವರು ಗದಗ ಜಿಲ್ಲಾ…

ಲಿಂ.ತೋಂಟದ ಸಿದ್ದಲಿಂಗ ಶ್ರೀಗಳವರ “ಆಲಮಟ್ಟಿ ಪ್ರೇಮ ಕಾವ್ಯಭಾವ” ಅನನ್ಯ !!!

ಬರಹ : ಗುಲಾಬಚಂದ ಆರ್.ಜಾಧವ. ಆಲಮಟ್ಟಿಆಲಮಟ್ಟಿ (ವಿಜಯಪುರ ಜಿಲ್ಲೆ) : ಮನದಾಳದಿಂದ ಹೊರಡುವ ನಿಷ್ಕಲ್ಮಶ,ನಿಸ್ವಾರ್ಥವುಳ್ಳ ಪ್ರೀತಿ…

ಪರಿಸರ ಮಾಲಿನ್ಯ ನಿಯಂತ್ರಣ ಮಾಡುವ ಜವಾಬ್ದಾರಿ ಪ್ರತಿಯೊಬ್ಬ ನಾಗರಿಕ ಮೇಲಿದೆ: ಮಹೇಶ ಎಂ ಅವಟಿ

ಉತ್ತರಪ್ರಭಗದಗ: ತೋಂಟದಾರ್ಯ ತಾಂತ್ರಿಕ ಮಹಾವಿದ್ಯಾಲಯದ ಸಿವ್ಹಿಲ್ ಇಂಜಿನಿಯರಿಂಗ್ ವಿಭಾಗ ಮತ್ತು ಇಐಐಸಿ ಇವರುಗಳ ಸಹಯೋಗದೊಂದಿಗೆ ರಾಷ್ಟ್ರೀಯ…