ಬೆಂಗಳೂರು: ವಿಕಾಸಸೌಧದಲ್ಲಿ ಕೊರೊನಾ ಆತಂಕ ಮನೆ ಮಾಡಿರುವುದರಿಂದಾಗಿ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿಗಳಿಗೆ ಶುಕ್ರವಾರ ಕಚೇರಿ ಕೆಲಸಕ್ಕೆ ರಜೆ ನೀಡಲಾಗಿದೆ.
ಇತ್ತೀಚೆಗೆ ಕೊರೊನಾ ಸೋಂಕಿತ ವ್ಯಕ್ತಿಯೊಬ್ಬರು ವ್ಯಕ್ತಿಯೊಬ್ಬರು ವಿಕಾಸ ಸೌಧದಲ್ಲಿ ಸುತ್ತಾಡಿದ ಹಿನ್ನೆಲೆಯಲ್ಲಿ ಆತಂಕ ಮನೆ ಮಾಡಿತ್ತು. ಹೀಗಾಗಿ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಮತ್ತು ವೈರಸ್ ಹರಡುವುದನ್ನು ತಪ್ಪಿಸಲು ಗುರುವಾರ ಸಂಜೆ ವಿಕಾಸಸೌಧ ಕಟ್ಟಡದ ಎಲ್ಲಾ ಕೊಠಡಿಗಳು ಮತ್ತು ಕಾರಿಡಾರ್ ಗಳಿಗೆ ಬಿ.ಬಿ.ಎಂ.ಪಿ. ವತಿಯಿಂದ ಕ್ರಿಮಿ ನಾಶಕವನ್ನು ಪೂರ್ಣ ಪ್ರಮಾಣದಲ್ಲಿ ಸಿಂಪಡಣೆ ಮಾಡಲಾಯಿತು.
ಈ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ ಸಿಬ್ಬಂದಿಗಳು ಕೆಲಸಕ್ಕೆ ಹಾಜರಾಗದೆ ಇಂದು ಮನೆಯಿಂದಲೇ ಕೆಲಸ ಮಾಡುವಂತೆ ಸೂಚಿಸಲಾಗಿದೆ.

Leave a Reply

Your email address will not be published. Required fields are marked *

You May Also Like

ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ 22000 ಅತಿಥಿ ಶಿಕ್ಷಕರ ನೇಮಕಾತಿ

ಉತ್ತರಪ್ರಭ ಹುದ್ದೆ: 2022-23 ನೇ ಶೈಕ್ಷಣಿಕ ಸಾಲಿನ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ…

ಸಿದ್ದರಾಮಯ್ಯ, ಗುಂಡೂರಾವ್ ವಿರುದ್ಧ ಗುಡುಗಿದ ನಳೀನ್ ಕುಮಾರ್!

ಮಂಗಳೂರು : ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಅವರ ಪಾಡು ನಾಯಿಪಾಡಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವ್ಯಂಗ್ಯವಾಡಿದ್ದಾರೆ.

ಪ್ರವಾಸೋದ್ಯಮ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಉದ್ಯಮಿಗಳಿಗೆ ಕೆಟಿಟಿಎಫ್ ನೋಂದಣಿ ಕಡ್ಡಾಯ

ಉತ್ತರಪ್ರಭ ಗದಗ: ಪ್ರವಾಸೋದ್ಯಮ ಇಲಾಖೆಯಿಂದ ಕರ್ನಾಟಕ ಪ್ರವಾಸೋದ್ಯಮ ವ್ಯಾಪಾರ ಕಾಯ್ದೆ-2015 ಜಾರಿಯಲ್ಲಿದ್ದು ಪ್ರವಾಸೋದ್ಯಮ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ…

ಡೆಂಜರ್ ಝೋನ್ ನಲ್ಲಿ ಭಯಾನಕ ಘಟನೆ: ಕಿಟ್ ಗಾಗಿ ಮಗ್ಗರಿಸಿ ಬಿದ್ದ ಮಹಿಳೆಯರು

ಆಹಾರ ಕಿಟ್ ಪಡೆಯಲು ಹೋದ ಮಹಿಳೆಯರು ಮಗ್ಗರಿಸಿ ಬಿದ್ದಿದ್ದಾರೆ. ನಿಜಕ್ಕೂ ಇದು ಭಯಾನಕ ಘಟನೆ. ಕೊರೋನಾ ಕರಾಳ ಛಾಯೆಯ ಲಕ್ಷಣವೇ ಸರಿ.