ಅಹಮದಾಬಾದ್: ಗುಜರಾತ್ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯುತ್ತಿರುವ ದ್ವೈವಾರ್ಷಿಕ ಚುನಾವಣೆಯಲ್ಲಿ ಮತದಾನ ಮಾಡಲು ಬಿಜೆಪಿ ಶಾಸಕ ಕೇಸರಿಸಿನ್ಹ ಜಸಂಗ್ಭಾಯ್ ಸೋಲಂಕಿ ಆಂಬುಲೆನ್ಸ್ ನಲ್ಲಿ ಆಗಮಿಸಿದರು. ಅನಾರೋಗ್ಯದಿಂದಾಗಿ ಚಿಕಿತ್ಸೆ ಪಡೆಯಲು ಮತಾರ್ ಕ್ಷೇತ್ರದ ಶಾಸಕರಾಗಿರುವ ಇವರು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಇಂದು ಮತದಾನ ಪ್ರಯುಕ್ತ ಆಸ್ಪತ್ರೆಯಿಂದ ನೇರವಾಗಿ ವಿಧಾನಸಭೆಗೆ ಆಗಮಿಸಿದರು. ರಾಜ್ಯದಿಂದ 4 ರಾಜ್ಯಸಭೆ ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದ್ದು, ಇಂದು ಸಂಜೆ ಫಲಿತಾಂಶ ಪ್ರಕಟವಾಗಲಿದೆ.