ಬೆಂಗಳೂರು: ಜಗತ್ತಿನ ಆತಂಕಕ್ಕೆ ಕಾರಣವಾಗಿರುವ ಕೊರೊನಾ ದಿನದಿಂದ ದಿನಕ್ಕೆ ತನ್ನ ಅಟ್ಟಹಾಸ ಮುಂದುವರೆಸಿದೆ. ಸದ್ಯ ಕೊರೊನಾಗೆ 4.56 ಲಕ್ಷ ಜನರು ಬಲಿಯಾಗಿದ್ದಾರೆ.

ದೇಶದಲ್ಲಿ ಕೂಡ ಕೊರೊನಾ ಅಟ್ಟಹಾಸ ಮುಂದುವರೆದಿದೆ. ದೇಶದಲ್ಲಿ 3.81 ಲಕ್ಷ ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಪೈಕಿ 2,05,182 ಜನ ಗುಣಮುಖರಾಗಿದ್ದಾರೆ. 12,604 ಜನ ಸಾವನ್ನಪ್ಪಿದ್ದಾರೆ. ಗುರುವಾರ ಒಂದೇ ದಿನ 13,826 ಪ್ರಕರಣ ದಾಖಲಾಗಿದೆ.

ವಿಶ್ವದಾದ್ಯಂತ 4.56 ಲಕ್ಷ ಜನರನ್ನು ಈ ಮಹಾಮಾರಿ ಬಲಿ ಪಡೆದಿದೆ. 85.77 ಲಕ್ಷಕ್ಕೂ ಹೆಚ್ಚು ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಅಮೆರಿಕದಲ್ಲಿ ಅತೀ ಹೆಚ್ಚು ಜನ ಸೋಂಕಿಗೆ ಒಳಗಾಗಿದ್ದು, ಸೋಂಕಿತ ಪ್ರಕರಣಗಳಲ್ಲಿ ಮೊದಲ ಸ್ಥಾನದಲ್ಲಿದೆ. ಇಲ್ಲಿ 22.63 ಲಕ್ಷ ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. 1.20ಸಾವಿರಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ.

ಬ್ರೆಜಿಲ್ ಸೋಂಕಿತರ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದು, ಇಲ್ಲಿ 9.83 ಲಕ್ಷ ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. 47,800 ಕ್ಕೂ ಹೆಚ್ಚು ಮಂದಿ ಇಲ್ಲಿ ಸಾವನ್ನಪ್ಪಿದ್ದಾರೆ. ಮೃತಪಟ್ಟವರ ಸಂಖ್ಯೆಯಲ್ಲಿಯೂ 2ನೇ ಸ್ಥಾನದಲ್ಲಿದೆ.

ರಷ್ಯ ಸೋಂಕಿತರ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದೆ. 5.61 ಲಕ್ಷ ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಅಲ್ಲಿ 7,600ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಯುಕೆ ಸೋಂಕಿತರ ಪಟ್ಟಿಯಲ್ಲಿ 5ನೇ ಸ್ಥಾನಕ್ಕೆ ಇಳಿದಿದೆ. ಇಲ್ಲಿ 3. ಹೆಚ್ಚು ಮಂದಿಗೆ ಕೊರೊನಾ ಇರುವುದು ದೃಢಪಟ್ಟಿದೆ. 42,200ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಬಗ್ಗೆ ವರದಿ ತಿಳಿಸಿದೆ. ಮೃತಪಟ್ಟವರ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದೆ.

Leave a Reply

Your email address will not be published. Required fields are marked *

You May Also Like

ದೆಹಲಿಯಲ್ಲಿ ಸಮುದಾಯದ ಹಂತ ತಲುಪಿದ ಕೊರೊನಾ – ಘೋಷಣೆಗೆ ಕೇಂದ್ರದ ಮೀನಮೇಷ!

ರಾಷ್ಟ್ರ ರಾಜಧಾನಿಯಲ್ಲಿ ಕೊರೊನಾ ತನ್ನ ಅಟ್ಟಹಾಸ ಮುಂದುವರೆಸಿದ್ದು, ಸಮುದಾಯ ಹಂತ ತಲುಪಿದೆ. ಆದರೆ, ಕೇಂದ್ರ ಸರ್ಕಾರದ ಘೋಷಣೆಗಾಗಿ ಕಾಯುತ್ತಿದ್ದೇವೆ ಎಂದು ಆರೋಗ್ಯ ಸಚಿವ ಸತ್ಯೇಂದರ್ ಜೈನ್ ತಿಳಿಸಿದ್ದಾರೆ.

ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ

ರಾಮನಗರ: ಮೇಕೆದಾಟು ಯೋಜನೆಯನ್ನು ಕೂಡಲೇ ಕೈಗೆತ್ತಿಕೊಳ್ಳುವಂತೆ ಕರ್ನಾಟಕ ಸರ್ಕಾರವನ್ನು ಆಗ್ರಹಿಸಲು ಕಾಂಗ್ರೆಸ್ ಪಕ್ಷ ಜನವರಿ 9 ರಿಂದ…

ಕಲಬುರಗಿಗೂ ಲಾಕ್ ಡೌನ್ ಸಡಲಿಕೆಗೂ ಸಂಬಂಧವಿಲ್ಲ!!

ಕಲಬುರಗಿ ಜಿಲ್ಲೆಯಲ್ಲಿ ಕೊರೊನಾ ಕಾಟ ಇನ್ನೂ ತಪ್ಪುತ್ತಿಲ್ಲ. ಸದ್ಯ ಕೊರೊನಾ ಅರ್ಧ ಶತಕ ಮೀರಿ ಸಾಗುತ್ತಿದೆ. ಜಿಲ್ಲೆಯಾದ್ಯಂತ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ವಿಸ್ತರಿಸಲಾಗಿದೆ.

ಲಕ್ಷ್ಮೇಶ್ವರದಲ್ಲಿ ಹತ್ತಿ ಗಿರಣಿಗೆ ಬೆಂಕಿ: ಲಕ್ಷಾಂತರ ರೂ. ಹಾನಿ..!

ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹತ್ತಿ ಗಿರಣಿಗೆ ಬೆಂಕಿ ಬಿದ್ದ ಪರಿಣಾಮ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಹತ್ತಿ, ಬೆಂಕಿಗೆ ಆಹುತಿಯಾದ ಘಟನೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ.