ದೆಹಲಿ: ಕೊರೊನಾ ಪರೀಕ್ಷೆಗೆ ಸಮಂಜಸ ದರ ನಿಗದಿಮಾಡಬೇಕು ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಭೂಷಣ್ ಹೇಳಿದ್ದಾರೆ. ದೇಶಾದ್ಯಂತ ಕೊರೊನಾ ಪರೀಕ್ಷೆಗೆ ಏಕರೂಪತೆ ಇರಬೇಕು. ಜೊತೆಗೆ, ವಾರ್ಡ್ ಗಳಲ್ಲಿ ಸಿಸಿಟಿವಿ ಇರಿಸಬೇಕು ಎಂದು ಕೂಡ ಕೋರ್ಟ್ ಹೇಳಿದೆ.
ದೇಶಾದ್ಯಂತ ಕೊರೊನಾ ವ್ಯಾಪಕವಾಗಿ ಪಸರಿಸುತ್ತಿರುವ ಹಿನ್ನೆಲೆಯಲ್ಲಿ ನಾಗರಿಕರು ಪರದಾಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಸುಮೋಟೋ ಪ್ರಕರಣದಡಿ ಕೊರೊನಾ ರೋಗಿಗಳಿಗೆ ಮತ್ತು ಕೊರೊನಾ ಕಾರಣದಿಂದ ಮಡಿದವರ ಶವ ಸಂಸ್ಕಾರ ಮಾರ್ಗಸೂಚಿಗಳ ಕುರಿತು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತು.
ಈ ವೇಳೆ, ಪರಿಣತರ ತಂಡ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಪರಿಹಾರಾತ್ಮಕ ಕ್ರಮಗಳನ್ನು ಕೈಗೊಳ್ಳಬೇಕು ಎಂದಿತು. ಜೊತೆಗೆ, ರೋಗಿಗಳ ಚಿಕಿತ್ಸೆಗೆ ಇರುವ ಅಡೆತಡೆಗಳನ್ನು ನಿವಾರಿಸಬೇಕು ಮತ್ತು ಶವಸಂಸ್ಕಾರ ವಿಷಯದಲ್ಲಿ ಯಾವುದೇ ಅಡ್ಡಿಗಳಾಗದಂತೆ ನೋಡಿಕೊಳ್ಳಬೇಕು ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

Leave a Reply

Your email address will not be published. Required fields are marked *

You May Also Like

ಮಾರ್ಗಸೂಚಿಗಳು ಕೇಂದ್ರ ಸಚಿವರಿಗೆ ಅನ್ವಯವಾಗುವುದಿಲ್ಲವೇ?

ಮಾರ್ಗಸೂಚಿಗಳು ಎಲ್ಲರಿಗೂ ಅನ್ವಯವಾಗುತ್ತವೆ. ಆದರೆ, ಜವಾಬ್ದಾರಿಯುತ ಸ್ಥಾನದಲ್ಲಿರುವವರಿಗೆ ಕೆಲವು ವಿನಾಯಿತಿಗಳು ಇವೆ

ಬಿಹಾರದಲ್ಲಿ ಶುರುವಾದ ಎರಡನೇ ಹಂತದ ಮತ ಸಮರ!

ನವದೆಹಲಿ : ಬಿಹಾರದಲ್ಲಿ ಈಗಾಗಲೇ ಮೊದಲ ಹಂತದ ಚುನಾವಣೆ ಮುಕ್ತಾಯವಾಗಿದ್ದು, ಎರಡನೇ ಹಂತದ ಚುನಾವಣೆ ಪ್ರಾರಂಭವಾಗಿದೆ.

ಪರಿಸರ ಸ್ನೇಹಿ ರೈಲ್ವೆ ವ್ಯವಸ್ಥೆಯಾಗಿ ಮಾರ್ಪಾಡಲು ಭಾರತೀಯ ರೈಲ್ವೆಯ ಸಿದ್ಧತೆ

ಪರಿಸರ ಮತ್ತು ಪ್ರಯಾಣಿಕ ಸ್ನೇಹಿ, ಕಡಿಮೆ ವೆಚ್ಚದಾಯಕದಂತಹ ಹಲವು ಉಪ ಕ್ರಮಗಳಾದ ಬೃಹತ್ ವಿದ್ಯುದೀಕರಣ, ನೀರು ಮತ್ತು ಕಾಗದ ಸಂರಕ್ಷಣೆಯಿಂದ ಹಿಡಿದು ರೈಲ್ವೆ ಹಳಿಗಳಲ್ಲಿ ಪ್ರಾಣಿಗಳು ಗಾಯಗೊಳ್ಳದಂತೆ ಉಳಿಸುವ ಯೋಜನೆಗಳ ಮೂಲಕ ಹಲವು ಪ್ರಮುಖ ಕ್ರಮಗಳು ಪರಿಸರ ಸ್ನೇಹಿ ಕ್ರಮಗಳನ್ನು ಭಾರತೀಯ ರೈಲ್ವೆ ಕೈಗೊಳ್ಳುತ್ತಿದೆ.

ಆರೋಗ್ಯ ಸೇತು ಮೊಬೈಲ್ ಆಪ್ ಸುರಕ್ಷಾ ಕವಚ: ಡಾ.ಕೆ.ಸುಧಾಕರ್

ಕೊರೋನ ವೈರಸ್ ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ’ಆರೋಗ್ಯ ಸೇತು’ ಆ್ಯಪ್ ಸಹಕಾರಿಯಾಗಿದೆ. ಇನ್ನೂ ಹೆಚ್ಚು ವ್ಯಾಪಕವಾಗಿ ಇದನ್ನು ಜನರು ಬಳಸುವಂತಾಗಬೇಕು