ಗದಗ: ಜಿಲ್ಲಾ ಪಂಚಾಯತಿಯ ಅಧ್ಯಕ್ಷರಾಗಿ ರಾಜೂಗೌಡ ಕೆಂಚನಗೌಡ್ರ (ಪಾಟೀಲ) ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಜಿ.ಪಂ. ಅಧ್ಯಕ್ಷ/ಉಪಾಧ್ಯಕ್ಷರ ಚುನಾವಣೆಗಳ ಅಧ್ಯಕ್ಷಾಧಿಕಾರಿಗಳು ಹಾಗೂ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಆಮ್ಲನ್ ಆದಿತ್ಯ ಬಿಸ್ವಾಸ್ ಘೋಷಿಸಿದರು.
ಸಾಮಾನ್ಯ ಪುರುಷ ವರ್ಗಕ್ಕೆ ಮೀಸಲಿಡಲಾಗಿದ್ದ ಜಿ.ಪಂ. ಅಧ್ಯಕ್ಷರ ಸ್ಥಾನಕ್ಕೆ ರಾಜೂಗೌಡ ಕೆಂಚನಗೌಡ್ರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇವರು ನರಗುಂದ ತಾಲೂಕಿನ ಕೊಣ್ಣೂರು ಜಿಲ್ಲಾ ಪಂಚಾಯತ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಆನಂದ್.ಕೆ, ಅಪರ ಜಿಲ್ಲಾಧಿಕಾರಿ ಸತೀಶ್ಕುಣಮಾರ್ ಎಂ, ಉಪವಿಭಾಗಾಧಿಕಾರಿ ರಾಯಪ್ಪ ಹುಣಸಗಿ, ಜಿಪಂ ಉಪಕಾರ್ಯದರ್ಶಿ ಕಲ್ಲೇಶ, ಜಿ.ಪಂ. ಸದಸ್ಯರುಗಳು ಉಪಸ್ಥಿತರಿದ್ದರು.