ಬೆಂಗಳೂರು: 2020-21ನೇ ಸಾಲಿನಲ್ಲಿ ಖಾಸಗಿ ಅನುದಾನ ರಹಿತ ಶಾಲೆಗಳು ಶಾಲಾ ಶುಲ್ಕಗಳನ್ನು ಪರಿಷ್ಕರಿಸದಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ದೇಶಾದ್ಯಂತ ಕೊರೊನಾ ಹಿನ್ನೆಲೆಯಲ್ಲಿ ಜನ ಜೀವನ ನಡೆಸುವುದು ದುಸ್ತರವಾಗಿದ್ದು, ಈ ಹಿನ್ನೆಲೆಯಲ್ಲಿ ಪೋಷಕರ ಹಿತ ಕಾಯಲು ರಾಜ್ಯ ಸರ್ಕಾರ ಮುಂದಾದಂತಾಗಿದೆ.
ಕರ್ನಾಟಕ ಶಿಕ್ಷಣ ಕಾಯ್ದೆ, 1983ರಡಿಯಲ್ಲಿ ರಚಿಸಿರುವ ನಿಯಮಗಳು, 1999ರ ನಿಯಮ 4ರಲ್ಲಿ ಉಪ ನಿಯಮ (4)ರಲ್ಲಿ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ವಿದ್ಯಾರ್ಥಿಗಳ ಬೋಧನಾ ಶುಲ್ಕಗಳನ್ನು ಸರ್ಕಾರ ನಿಗದಿ ಪಡಿಸಲು ಅವಕಾಶ ಕಲ್ಪಿಸಿದೆ ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.
ಅಲ್ಲದೇ, ಪ್ರಸ್ತುತ ಕೊರೊನಾ ವೈರಸ್ ಸಾಂಕ್ರಾಮಿಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ದೇಶದಾದ್ಯಂತ ದಿ. 24.03.2020ರಿಂದ ಲಾಕ್ಡೌನ್ ಘೋಷಣೆ ಮಾಡಿದ್ದು, ಇದರಿಂದಾಗಿ ಕೈಗಾರಿಕೆಗಳು ಹಾಗೂ ಆರ್ಥಿಕ ಚಟುವಟಿಕೆಗಳು ಸ್ಥಬ್ಧವಾಗಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರು ಸಾಕಷ್ಟು ಆರ್ಥಿಕ ಸಂಕಷ್ಟಕ್ಕೆ ಒಳಗಾಗುತ್ತಾರೆ. ಈ ಹಿನ್ನೆಲೆಯಲ್ಲಿ, ಖಾಸಗಿ ಅನುದಾನ ರಹಿತ ಶಾಲೆಗಳ ಪೋಷಕರು ಈ ಶೈಕ್ಷಣಿಕ ಸಾಲಿನಲ್ಲಿ ವಿದ್ಯಾರ್ಥಿಗಳಿಗೆ ಬೋಧನಾ ಶುಲ್ಕವನ್ನು ಹೆಚ್ಚಿಸದಂತೆ ಶಾಲಾ ಸಂಸ್ಥೆಗಳಿಗೆ ನಿರ್ದೇಶನ ನೀಡುವಂತೆ ಸಾಕಷ್ಟು ಮನವಿಗಳನ್ನು ಸರ್ಕಾರಕ್ಕೆ ಸಲ್ಲಿಸಿರುತ್ತಾರೆ ಎಂದು ಪೋಷಕರ ಮನವಿಯನ್ನು ಉಲ್ಲೇಖಿಸಲಾಗಿದೆ.
ಆದ್ದರಿಂದ, ಕರ್ನಾಟಕ ಶಿಕ್ಷಣ ನಿಯಮ 1999ರಲ್ಲಿ ಕಲ್ಪಿಸಿರುವ ಅವಕಾಶವನ್ನು ಸರ್ಕಾರ ಸಾರ್ವಜನಿಕರು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವುದನ್ನು ಪರಿಗಣಿಸಿ ಕರ್ನಾಟಕ ಶಿಕ್ಷಣ ಕಾಯ್ದೆ-1983, ಸೆಕ್ಷನ್-133, ಉಪ ನಿಯಮ-(2)ರ ಅಡಿಯಲ್ಲಿನ ಅಧಿಕಾರವನ್ನು ಚಲಾಯಿಸಿ ಎಲ್ಲಾ ಖಾಸಗಿ ಅನುದಾನ ರಹಿತ ಶಾಲೆಗಳು 2020-21ನೇ ಶೈಕ್ಷಣಿಕ ಸಾಲಿನಲ್ಲಿ ಯಾವುದೇ ಬೋಧನಾ ಶುಲ್ಕವನ್ನು ಹೆಚ್ಚಿಸಬಾರದೆಂದು ಸೂಚಿಸಿದೆ.

ಸರ್ಕಾರದ ಆದೇಶದ ಪ್ರತಿ

ಒಂದು ವೇಳೆ ಶಾಲಾ ಆಡಳಿತ ಮಂಡಳಿಯವರು 2019-20ನೇ ಶೈಕ್ಷಣಿಕ ಸಾಲಿಗಿಂತ ಹೆಚ್ಚಿನ ಬೋಧನಾ ಶುಲ್ಕವನ್ನು ಮಕ್ಕಳು/ಪೋಷಕರಿಂದ ಸಂಗ್ರಹಿಸುವಲ್ಲಿ ಕರ್ನಾಟಕ ಶಿಕ್ಷಣ ಕಾಯ್ದೆ-124[ಎ]ರಡಿ ಕ್ರಮ ಜರುಗಿಸಲಾಗುವುದೆಂದು ಸುತ್ತೋಲೆಯಲ್ಲಿ ಸೂಚಿಸಲಾಗಿದೆ.

Leave a Reply

Your email address will not be published.

You May Also Like

ಸಾರಾಯಿ ಸೀಸೆಗಾಗಿ ಬಾರ್ ಮುಂದೆ ಕ್ಯೂ..!

ದೇಶಾದ್ಯಂತ ಹೇರಲಾಗಿದ್ದ ಲಾಕ್ ಡೌನ್ ನ್ನು ಸ್ವಲ್ಪ ಮಟ್ಟಿಗೆ ಸಡಿಲಿಕೆ ಮಾಡಲಾಗಿದ್ದು, ಮದ್ಯ ಮಾರಾಟಕ್ಕೆ ಅನುಮತಿ ನೀಡಲಾಗಿದೆ. ಆದರೆ, ಎಣ್ಣೆ ಹೈಕ್ಳು ಮಾತ್ರ ಬೆಳಿಗ್ಗೆಯಿಂದಲೇ ಅಂಗಡಿಗಳ ಮುಂದೆ ಕ್ಯೂ…!

ಬಾರ್ ಅಂಗಡಿಗಳನ್ನು ಬಂದ್ ಮಾಡಿಸಿದ ಮಹಿಳೆಯರು

ಹೆಣ್ಮಕ್ಕಳೇ ಸ್ಟ್ರಾಂಗೂ ಗುರೂ..! ಅನ್ನೋದ್ರಿಲ್ಲ ಡೌಟೇ ಇಲ್ಲ. ಮದ್ಯ ಮಾರಾಟದ ದಿನವೇ ಕುಡುಕರ ಕಿಕ್ ಇಳಿಸುವ ಮೂಲಕ ವನಿತೆಯರು ಇದಕ್ಸಿಕೆ ಉದಾಹರಣೆಯಾಗಿದ್ದಾರೆ.

ಗದಗ ಜಿಲ್ಲೆ : ನರೇಗಾದಲ್ಲಿ ಬಿಎಫ್‌ಟಿ ಹುದ್ದೆಗೆ ಅರ್ಜಿ

ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 5 ಬಿ.ಎಫ್.ಟಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.