ಬೆಂಗಳೂರು: ಹುಚ್ಚ ವೆಂಕಟ್ ಮಾನಸಿಕ ಸಮತೋಲನ ಕಳೆದುಕೊಂಡ ಕಾರಣ ರಸ್ತೆಯಲ್ಲಿ ಬಾಯಿಗೆ ಬಂದಂತೆ ಮಾತನಾಡಿ ಓಡಾಡುತ್ತಿದ್ದಾರೆ. ಜನ ಇವರ ಸ್ಥಿತಿ ಕಂಡು ಲೇವಡಿ ಮಾಡುತ್ತಿದ್ದಾರೆ. ಅಲ್ಲದೇ, ಹಲವರು ಅವರ ಮೇಲೆ ಹಲ್ಲೆ ಮಾಡುತ್ತಿದ್ದಾರೆ. ಸದ್ಯ ಊಟ ಇಲ್ಲದೆ, ಹಲ್ಲೆಗೊಳಗಾಗಿರುವ ವೆಂಕಟ್ಗೆತ ನಟ ಕಿಚ್ಚ ಸುದೀಪ್ ಚಿಕಿತ್ಸೆಗೆ ನೆರವಾಗಲು ಮುಂದಾಗಿದ್ದಾರೆ.

ಕಿಚ್ಚ ಚಾರಿಟೇಬಲ್ ಸೊಸೈಟಿ ಈ ಬಗ್ಗೆ ಮಾಹಿತಿ ನೀಡಿದ್ದು, ಜನರು ಸ್ವಲ್ಪ ಸಂಯಮದಿಂದ ವರ್ತಿಸಬೇಕು ಎಂದು ಮನವಿ ಮಾಡಿದೆ. ಅವರ ಮನವಿ ಹೀಗಿದೆ…..

ಆತ್ಮೀಯರೆ, ಕಳೆದ ಕೆಲ ದಿನಗಳಿಂದ ಮಾನಸಿಕವಾಗಿ ಜರ್ಜಿರಿತರಾಗಿ ಓಡಾಡುತ್ತಿದ್ದ ಹುಚ್ಚ ವೆಂಕಟ್ ಅವರ ಮೇಲೆ ದೈಹಿಕವಾಗಿ ಹಲ್ಲೆಯಾಗುತ್ತಿದ್ದು, ಸಾರ್ವಜನಿಕರು ಸ್ವಲ್ಪ ಸಂಯಮ ಮತ್ತು ಕರುಣೆ ತೋರಿ. ಹುಚ್ಚ ವೆಂಕಟ್ ಅವರಿಗೆ ಚಿಕಿತ್ಸೆ ಮತ್ತು ಸ್ವಾಂತನ ನೀಡಲು ನಮ್ಮ ಕಿಚ್ಚ ಸುದೀಪ್ ಸರ್ ನಿರ್ಧರಿಸಿ, ಕಿಚ್ಚ ಸುದೀಪ ಚಾರಿಟೇಬರ್ ಸೊಸೈಟಿಗೆ ಅನುಮತಿ ನೀಡಿದ್ದಾರೆ. ಹೀಗಾಗಿ ಯಾವುದೇ ಸ್ಥಳದಲ್ಲಿ ಹುಚ್ಚ ವೆಂಕಟ್ ಅವರು ಕಂಡು ಬಂದಲ್ಲಿ ನಮಗೆ ಕರೆ ಮಾಡಿ ತಿಳಿಸಿ. ಮಾನವೀಯತೆ ಗೆಲ್ಲುವ ಹಾಗೆ ಮಾಡಿ ಎಂದು ಮೊಬೈಲ್ ನಂಬರ್ ನೀಡಿದ್ದಾರೆ.

Leave a Reply

Your email address will not be published. Required fields are marked *

You May Also Like

ವೇಶ್ಯಾವಾಟಿಕೆ ಸಂತ್ರಸ್ತೆಯರನ್ನು ಪಾಲಕರಿಗೆ ಹಸ್ತಾಂತರಿಸಿ ಪೊಲೀಸರು!

ಹೈಟೆಕ್ ವೇಶ್ಯಾವಾಟಿಕೆ ಮೇಲೆ ದಾಳಿ ಮಾಡಿದ್ದ ಸಂದರ್ಭದಲ್ಲಿ ರಕ್ಷಣೆಗೆ ಒಳಗಾಗಿದ್ದ ಇಬ್ಬರು ಯುವತಿಯರನ್ನು ಪೊಲೀಸರು ಕುಟುಂಬದ ಸದಸ್ಯರಿಗೆ ಹಸ್ತಾಂತರ ಮಾಡುವ ಮೂಲಕ ಕರ್ತವ್ಯ ನಿಷ್ಠೆ ಮೆರೆದಿದ್ದಾರೆ.

ಶಿರಹಟ್ಟಿ: ನೂತನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಚೇರಿ ಉದ್ಘಾಟನೆ

ಕಳೆದ ಹತ್ತು ತಿಂಗಳಿನಿಂದ ನೆನೆಗುದಿಗೆ ಬಿದಿದ್ದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲೂಕಾ ನೂತನ ಕೇಂದ್ರ ಕಚೇರಿಯನ್ನು ಮಂಗಳವಾರ ಶಾಸಕ ರಾಮಣ್ಣ ಲಮಾಣಿ ಉದ್ಘಾಟಿಸಿದರು.

ರಾಜ್ಯದಲ್ಲಿ ಇಂದು ಕೂಡ ನಾಲ್ಕು ಸಾವಿರ ಗಡಿ ದಾಟಿದ ಸೋಂಕು!

ಬೆಂಗಳೂರು : ರಾಜ್ಯದಲ್ಲಿ ಇಂದು 4,439 ಜನರು ಸೋಂಕಿಗೆ ಒಳಗಾಗಿದ್ದಾರೆ. ಅಲ್ಲದೇ, ಇಂದು ಆಸ್ಪತ್ರೆಯಿಂದ 10,106 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಅಲ್ಲದೇ, ಇಂದು 32 ಜನ ಮಹಾಮಾರಿಗೆ ಬಲಿಯಾಗಿದ್ದಾರೆ.

ಬಾಗೇವಾಡಿ ಅಪಘಾತ: ಓರ್ವ ಎಸ್.ಎಸ್.ಎಲ್.ಸಿ ವಿದ್ಯಾರ್ಥಿ ಸಾವು..!

ಮುಂಡರಗಿ: ಈಗಾಗಲೇ ವರ್ಷ ಪೂರ್ತಿ ಓದಿ ಪರೀಕ್ಷೆಗಾಗಿ ಕಾದಿದ್ದ ಆ ವಿದ್ಯಾರ್ಥಿ ಪರೀಕ್ಷೆ ಮುಗಿಸುವ ಮುನ್ನವೇ…