ಬೆಂಗಳೂರು: ದೇಶದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಹಲವು ದೇಶಗಳಲ್ಲಂತೂ ಇದರ ನಾಗಾಲೋಟ ಮುಂದುವರೆದಿದೆ. ಜಗತ್ತಿನಲ್ಲಿ ಇಲ್ಲಿಯವರೆಗೂ ಈ ಮಹಾಮಾರಿಗೆ 4.62 ಲಕ್ಷ ಜನರು ಸಾವನ್ನಪ್ಪಿದ್ದಾರೆ. ದೇಶದಲ್ಲಿ 3,95,812 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇಲ್ಲಿಯವರೆಗೂ 2,14,206 ಜನ ಗುಣಮುಖರಾಗಿದ್ದು, 12,970 ಜನ ಸಾವನ್ನಪ್ಪಿದ್ದಾರೆ. ಸೋಂಕಿತ ಪ್ರಕರಣದ ದೇಶಗಳ ಪಟ್ಟಿಯಲ್ಲಿ ಭಾರತ 4ನೇ ಸ್ಥಾನದಲ್ಲಿದೆ. ಆದರೆ, ನಿನ್ನೆ ಒಂದೇ ದಿನ 14,721 ಪ್ರಕರಣ ದಾಖಲಾಗಿವೆ.

ವಿಶ್ವದಲ್ಲಿ 87.57 ಲಕ್ಷ ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಅಮೆರಿಕದಲ್ಲಿ ಅತೀ ಹೆಚ್ಚು ಜನರು ಸೋಂಕಿಗೆ ಒಳಗಾಗಿದ್ದಾರೆ. 22.97 ಲಕ್ಷ ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಇಲ್ಲಿ 1.21 ಲಕ್ಷ ಜನರು ಬಲಿಯಾಗಿದ್ದಾರೆ. ಬ್ರೆಜಿಲ್ ಸೋಂಕಿತರ ಪಟ್ಟಿಯಲ್ಲಿ 2ನೇ ಸ್ಥಾನಕ್ಕೆ ಏರಿದ್ದು, ಇಲ್ಲಿ 10.38 ಲಕ್ಷ ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. 49 ಸಾವಿರಕ್ಕೂ ಅಧಿಕ ಜನ ಸಾವನ್ನಪ್ಪಿದ್ದಾರೆ. ಮೃತಪಟ್ಟವರ ಪಟ್ಟಿಯಲ್ಲಿಯೂ ಬ್ರೆಜಿಲ್ 2ನೇ ಸ್ಥಾನದಲ್ಲಿದೆ.

ರಷ್ಯ ಸೋಂಕಿತರ ಪಟ್ಟಿಯಲ್ಲಿ 3ನೇ ಸ್ಥಾನಕ್ಕೆ ಏರಿಕೆ ಕಂಡಿದೆ. 5.69 ಲಕ್ಷ ಜನರಲ್ಲಿ ಸೋಂಕು ಹರಡಿದೆ. 7,800ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಯುಕೆ ಸೋಂಕಿತರ ಪಟ್ಟಿಯಲ್ಲಿ 5ನೇ ಸ್ಥಾನಕ್ಕೆ ಇಳಿಕೆ ಕಂಡಿದೆ. ಇಲ್ಲಿ 3.01 ಲಕ್ಷ ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. 42,400ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಮೃತಪಟ್ಟವರ ಪಟ್ಟಿಯಲ್ಲಿ 3ನೇ ಸ್ಥಾನಕ್ಕೆ ಏರಿಕೆ ಕಂಡಿದೆ.

Leave a Reply

Your email address will not be published. Required fields are marked *

You May Also Like

ರಾಜ್ಯಕ್ಕೆ ಬರುವ ಯಾತ್ರಿಗಳಿಗೆ ಮಾರ್ಗಸೂಚಿ ಜಾರಿ

ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಹೆಚ್ಚುತ್ತಿರುವ ಪ್ರಕರಣಗಳಿಂದಾಗಿ, ಈ ರಾಜ್ಯಗಳಿಂದ ಬರುವ ಜನರು ನೆಗೆಟಿವ್ ಆರ್ಟಿ-ಪಿಸಿಆರ್ ಪ್ರಮಾಣಪತ್ರವನ್ನು ಕರ್ನಾಟಕ ಕಡ್ಡಾಯಗೊಳಿಸಿದೆ.

ತಿರುಪತಿ ತಿಮ್ಮಪ್ಪನ ದರ್ಶನ ಯಾವಾಗ?

ಕೇಂದ್ರ ಸರ್ಕಾರ ಜೂ. 30ರ ವರೆಗೂ ಲಾಕ್ ಡೌನ್ ಘೋಷಣೆ ಮಾಡಿದೆ. ಅಲ್ಲದೇ, ಈ ಬಾರಿ ದೇವಸ್ಥಾನಗಳನ್ನು ತೆರೆಯಲು ಅನುಮತಿ ನೀಡಿದ್ದು, ಅದಕ್ಕಾಗಿ ಈ ವಾರವೇ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಲಿದೆ.

ಸರ್ಕಾರ ಕೊಟ್ರೆ ಮಾತ್ರ ಬಿಎಂಟಿಸಿ ನೌಕರರಿಗೆ ಸಂಬಳ..?

ಲಾಕ್ ಡೌನ್ ಹಿನ್ನೆಲೆ ಮಾ.23 ರಿಂದ ನಗರದಲ್ಲಿ ಬಿಎಂಟಿಸಿ ಬಸ್ ಸಂಚಾರ ಬಂದ್ ಆಗಿತ್ತು. ಈಗಾಗಲೇ ಮಾರ್ಚ್ ಹಾಗೂ ಏಪ್ರೀಲ್ ತಿಂಗಳ ಸಂಬಳ ನೀಡಲಾಗಿದೆ. ಆದರೆ ಮೇ ತಿಂಗಳ ಸಂಬಳವೇ ಸಿಬ್ಬಂಧಿಗಳಲ್ಲಿ ಆತಂಕ ಮೂಡಿಸಿದೆ.

ಅಲ್ವಿದಾ ನಿಸಾರ್ ಚಾಚಾ ಎನ್ನಲು ಮನಸಾಗುತ್ತಿಲ್ಲ..!

ಅಲ್ವಿದಾ ನಿಸಾರ್ ಅಹ್ಮದ್ ಚಾಚಾ. ನಿಮ್ಮ ಪದ್ಯಗಳ ಸಂತೆಯಲ್ಲಿ ನಾವು ನಿತ್ಯ ಕಳೆದುಹೋಗುತ್ತೇವೆ. ನರಸಿಂಹರಾಜ ಕಾಲೋನಿಯ ದ್ವಾರಕಾ ಹೋಟೆಲ್ ಮುಂದೆ ನೀವು ಅಂದು ನಿಂತಿದ್ದ ಜಾಗದಲ್ಲೇ ನಿಂತಿರುತ್ತೀರಿ ಎಂದು ಭಾವಿಸುತ್ತೇನೆ. ಹೋಗಿ ಬನ್ನಿ.