ಸೋಂಕಿತನ ಮೊಬೈಲ್ ಕದ್ದು ಕ್ವಾರಂಟೈನ್ ಆದ ಕಳ್ಳ!

ಆಸ್ಸಾಂ: ಆಸ್ಪತ್ರೆಯ ಐಸೋಲೇಷನ್‍ ವಾರ್ಡ್ ನಲ್ಲಿದ್ದ ಸೋಂಕಿತ ವ್ಯಕ್ತಿಯ ಮೊಬೈಲ್ ನ್ನು ಕಳ್ಳ ಕದ್ದ ಪರಿಣಾಮ ಆತನನ್ನು ಕ್ವಾರಂಟೈನ್ ಮಾಡಿರುವ ಘಟನೆ ಅಸ್ಸಾಂನ ಚಿರಾಂಗ್ ಜಿಲ್ಲೆಯ ಕಾಜಲ್ಗಾಂ ವ್ ನ ಸಿವಿಲ್ ಆಸ್ಪತ್ರೆಯಲ್ಲಿ ನಡೆದಿದೆ.

ಸೋಂಕಿತನ ಮೊಬೈಲ್ ಕದ್ದು, ಕ್ವಾರಂಟೈನ್ ಆದ ಕಳ್ಳನನ್ನು ಪಪ್ಪು ಬರ್ಮನ್ (22) ಎಂದು ಗುರುತಿಸಲಾಗಿದೆ. ಈ ವ್ಯಕ್ತಿ ಆಸ್ಪತ್ರೆಯಲ್ಲಿ ಸೋಂಕಿತ ಮಲಗಿದ ನಂತರ ಐಸೋಲೇಷನ್ ವಾರ್ಡಿಗೆ ನುಗ್ಗಿ ಫೋನ್ ಕದ್ದು ಸಿಕ್ಕಿಬಿದ್ದಿದ್ದಾನೆ. ಈ ವೇಳೆ ಆತನನ್ನು ಅದೇ ಆಸ್ಪತ್ರೆಯಲ್ಲಿ ಕ್ವಾರಂಟೈನ್ ಮಾಡಲಾಗಿದೆ.

ಪಪ್ಪು ಬರ್ಮನ್ ಫೋನ್ ಕದ್ದು ಆಸ್ಪತ್ರೆಯಿಂದ 15 ಕಿಮೀ ದೂರದಲ್ಲಿರುವ ತನ್ನ ಮನೆಯಲ್ಲಿ ಇದ್ದ. ಆಸ್ಪತ್ರೆಯಲ್ಲಿ ಸಿಕ್ಕ ಸಿಸಿಟಿವಿ ದೃಶ್ಯವನ್ನು ಆಧರಿಸಿ ಪೊಲೀಸರು ಆತನನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ. ನಂತರ ವೈದ್ಯರ ಸಮೇತ ಆತನ ಮನೆಗೆ ಹೋಗಿ ಬಂಧಿಸಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಸದ್ಯ ಆತನ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಿದ್ದು, ವರದಿಗಾಗಿ ಕಾಯುತ್ತಿದ್ದಾರೆ.

ನಾವು ಆರೋಪಿಯನ್ನು ಹಿಡಿದು ಕ್ವಾರಂಟೈನ್ಗೆ ಒಪ್ಪಿಸಿದ್ದೇವೆ. ಈ ವಿಚಾರವನ್ನು ಜಿಲ್ಲಾ ಆರೋಗ್ಯ ಇಲಾಖೆಗೆ ನೀಡಿದ್ದೇವೆ. ಅವರು ಆತನ ಪ್ರಾಥಮಿಕ ಮತ್ತು ದ್ವೀತಿಯ ಹಂತದ ಸಂಪರ್ಕಿತರನ್ನು ಗುರುತಿಸಬೇಕು ಎಂದು ಎಸ್ಪಿ ಸುಧಾಕರ್ ಸಿಂಗ್ ತಿಳಿಸಿದ್ದಾರೆ.

Exit mobile version