ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಬರುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣದ ವ್ಯವಸ್ಥೆಯನ್ನು ಸಾರಿಗೆ ಇಲಾಖೆ ಕಲ್ಪಿಸಿದೆ.

ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಾರಿಗೆ ಸಂಸ್ಥೆ ರಾಜ್ಯಾದ್ಯಂತ ಈ ನಿರ್ಧಾರ ಕೈಗೊಂಡಿದೆ. ಈ ಮೂಲಕ ವಿದ್ಯಾರ್ಥಿಗಳು ನಿಗಮದ ಸಾಮಾನ್ಯ ಹಾಗೂ ವೇಗದೂತ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಿ ಪರೀಕ್ಷಾ ಕೇಂದ್ರಕ್ಕೆ ತೆರಳಬಹುದು ಎಂದು ಸಾರಿಗೆ ಸಂಸ್ಥೆ ತಿಳಿಸಿದೆ.

ಜೂ.25ರಿಂದ ಜು. 4ರ ವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಜರುಗಲಿವೆ. ಕೊರೊನಾ ವೈರಸ್ ಹಾವಳಿಯ ಹಿನ್ನೆಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ಸದ್ಯ ಪರೀಕ್ಷೆ ನಡೆಸಲು ಸರ್ಕಾರ ತೀರ್ಮಾನ ಕೈಗೊಂಡಿದ್ದು, ಇದಕ್ಕೆ ಸಾರಿಗೆ ಸಂಸ್ಥೆ ಕೈ ಜೋಡಿಸಿದೆ.

ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಪತ್ರ (ಹಾಲ್ ಟಿಕೆಟ್)ಅನ್ನು ಬಸ್ ಸಿಬ್ಬಂದಿಗೆ ತೋರಿಸಿ ಉಚಿತವಾಗಿ ಪರೀಕ್ಷಾ ಕೇಂದ್ರಕ್ಕೆ ತೆರಳಬಹುದು.

Leave a Reply

Your email address will not be published. Required fields are marked *

You May Also Like

ಗದಗ-ಬೆಟಗೇರಿ ನಗರಸಭೆ: ಮಾರ್ಚ 2ಕ್ಕೆ ಅಧ್ಯಕ್ಷ ಸ್ಥಾನದ ತೀರ್ಪು ಸಾಧ್ಯತೆ, ಉಪಾಧ್ಯಕ್ಷ ಸ್ಥಾನಕ್ಕೆ ಹೈ ಕೋರ್ಟ ಗ್ರೀನ್ ಸಿಗ್ನಲ್

ಉತ್ತರಪ್ರಭ ಸುದ್ದಿಗದಗ: ಗದಗ ಬೆಟಗೇರಿ ನಗರ ಸಭೆಯ ಅಧ್ಯಕ್ಷರಾಗಿ ಬಿಜೇಪಿಯ ಉಷಾ ಮಹೇಶ ದಾಸರ ಆಯ್ಕೆಯಾಗಿದ್ದರು…

ಜೆಇಇ, ನೀಟ್ ಪರೀಕ್ಷೆ ವೇಳಾಪಟ್ಟಿ

ಜೆಇಇ ಹಾಗೂ ನೀಟ್ ಪರೀಕ್ಷೆಗಾಗಿ ಎದುರು ನೋಡುತ್ತಿದ್ದ ವಿದ್ಯಾರ್ಥಿಗಳಿಗೆ ಹೊಸ ವೇಳಾ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ.

ರಾಜ್ಯಸಭೆಗೆ ಕಾಂಗ್ರೆಸ್ ನಿಂದ ಖರ್ಗೆ ಫಿಕ್ಸ್..!

ರಾಜ್ಯದಿಂದ ನಾಲ್ಕು ಕ್ಷೇತ್ರಗಳಿಗೆ ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ನಿಂದ ಮಲ್ಲಿಕಾರ್ಜುನ ಖರ್ಗೆ ಹೆಸರು ಬಹುತೇಕ ಅಂತಿಮವಾಗಿದೆ.