ಪರೀಕ್ಷೆ ಬರೆಯುವ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣದ ವ್ಯವಸ್ಥೆ!

ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಬರುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣದ ವ್ಯವಸ್ಥೆಯನ್ನು ಸಾರಿಗೆ ಇಲಾಖೆ ಕಲ್ಪಿಸಿದೆ.

ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಾರಿಗೆ ಸಂಸ್ಥೆ ರಾಜ್ಯಾದ್ಯಂತ ಈ ನಿರ್ಧಾರ ಕೈಗೊಂಡಿದೆ. ಈ ಮೂಲಕ ವಿದ್ಯಾರ್ಥಿಗಳು ನಿಗಮದ ಸಾಮಾನ್ಯ ಹಾಗೂ ವೇಗದೂತ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಿ ಪರೀಕ್ಷಾ ಕೇಂದ್ರಕ್ಕೆ ತೆರಳಬಹುದು ಎಂದು ಸಾರಿಗೆ ಸಂಸ್ಥೆ ತಿಳಿಸಿದೆ.

ಜೂ.25ರಿಂದ ಜು. 4ರ ವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಜರುಗಲಿವೆ. ಕೊರೊನಾ ವೈರಸ್ ಹಾವಳಿಯ ಹಿನ್ನೆಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ಸದ್ಯ ಪರೀಕ್ಷೆ ನಡೆಸಲು ಸರ್ಕಾರ ತೀರ್ಮಾನ ಕೈಗೊಂಡಿದ್ದು, ಇದಕ್ಕೆ ಸಾರಿಗೆ ಸಂಸ್ಥೆ ಕೈ ಜೋಡಿಸಿದೆ.

ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಪತ್ರ (ಹಾಲ್ ಟಿಕೆಟ್)ಅನ್ನು ಬಸ್ ಸಿಬ್ಬಂದಿಗೆ ತೋರಿಸಿ ಉಚಿತವಾಗಿ ಪರೀಕ್ಷಾ ಕೇಂದ್ರಕ್ಕೆ ತೆರಳಬಹುದು.

Exit mobile version