ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲಿರುವ ಯಾವುದೇ ವಿದ್ಯಾರ್ಥಿ ಪೋಷಕ, ಪೋಷಕರು ಅಥವಾ ಜತೆಯಲ್ಲಿ ವಾಸಿಸುವ ಹತ್ತಿರದ ಸಂಬಂಧಿಕರು ಕೊರೊನಾ ಹಿನ್ನೆಲೆಯಲ್ಲಿ ಕ್ವಾರಂಟೈನ್‌ಗೆ ಒಳಗಾಗಿದ್ದಲ್ಲಿ, ಅಂತಹ ಪ್ರಕರಣಗಳನ್ನು ಪೂರ್ವಭಾವಿಯಾಗಿ ಪತ್ತೆ ಹಚ್ಚಲಾಗುತ್ತಿದೆ ಎಂದು ಹೇಳಿದ್ದಾರೆ. ಅವರಿಗೆ ಮುಂದಿನ ದಿನಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗುತ್ತದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಜೂ. 25ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ನಡೆಯಲಿದ್ದು, ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಲ್ಲದೇ, ಪಿಯುಸಿ ಪರೀಕ್ಷೆ ಸಂದರ್ಭದಲ್ಲಿ ನಡೆದ ಅವಘಡಗಳು ನಡೆಯದಂತೆ ಎಚ್ಚರಿಕೆ ವಹಿಸಲಾಗುತ್ತಿದೆ. ಕಂಟೈನ್ಮೆಂಟ್ ವಲಯದಲ್ಲಿನ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ದಾಖಲೆಗಳೊಂದಿಗೆ ತಾಳೆ ಮಾಡಿ ಅಂತಹ ವಿದ್ಯಾರ್ಥಿಗಳಿಗೆ ಈ ಬಾರಿ ಪರೀಕ್ಷೆಗೆ ಹಾಜರಾಗಲು ವಿನಾಯ್ತಿ ನೀಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ನ್ಯಾಯಾಲಯದ ಸೂಚನೆಯಂತೆ ಪರೀಕ್ಷೆ ನಡೆಯಲಿದೆ. ಈಗಾಗಲೇ ಜಿಲ್ಲಾ ಉಪನಿರ್ದೇಶರು ಅನ್ಯ ಜಿಲ್ಲೆಗಳಿಗೆ ಪ್ರವಾಸ ಮಾಡಿ ಪರಿಶೀಲಿಸುವ ಕಾರ್ಯ ಆರಂಭವಾಗಿದೆ.
ಪ್ರತಿ ತಾಲೂಕಿನ ಕೇಂದ್ರ ಸ್ಥಾನ ಮತ್ತು ಜಿಲ್ಲಾ ಕೇಂದ್ರ ಸ್ಥಾನಗಳಲ್ಲಿ ಕನಿಷ್ಠ 2 ಹೆಚ್ಚುವರಿ ಪರೀಕ್ಷಾ ಕೇಂದ್ರ ಗುರುತಿಸಿ ಕಾಯ್ದಿರಿಸಿದ್ದೇವೆ. ರಾಜ್ಯದ ವಿವಿಧ ಇಲಾಖೆಗಳು ಸಂಪೂರ್ಣ ಸಮನ್ವಯದೊಂದಿಗೆ ಅತ್ಯಂತ ಸುರಕ್ಷಿತವಾಗಿ ಪರೀಕ್ಷೆ ನಡೆಯಲಿವೆ. ಅಲ್ಲದೇ, ಈ ಬಾರಿ ಪೂರಕ ಪರೀಕ್ಷೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.