ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲಿರುವ ಯಾವುದೇ ವಿದ್ಯಾರ್ಥಿ ಪೋಷಕ, ಪೋಷಕರು ಅಥವಾ ಜತೆಯಲ್ಲಿ ವಾಸಿಸುವ ಹತ್ತಿರದ ಸಂಬಂಧಿಕರು ಕೊರೊನಾ ಹಿನ್ನೆಲೆಯಲ್ಲಿ ಕ್ವಾರಂಟೈನ್‌ಗೆ ಒಳಗಾಗಿದ್ದಲ್ಲಿ, ಅಂತಹ ಪ್ರಕರಣಗಳನ್ನು  ಪೂರ್ವಭಾವಿಯಾಗಿ ಪತ್ತೆ ಹಚ್ಚಲಾಗುತ್ತಿದೆ ಎಂದು ಹೇಳಿದ್ದಾರೆ. ಅವರಿಗೆ ಮುಂದಿನ ದಿನಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗುತ್ತದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಜೂ. 25ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ನಡೆಯಲಿದ್ದು, ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಲ್ಲದೇ, ಪಿಯುಸಿ ಪರೀಕ್ಷೆ ಸಂದರ್ಭದಲ್ಲಿ ನಡೆದ ಅವಘಡಗಳು ನಡೆಯದಂತೆ ಎಚ್ಚರಿಕೆ ವಹಿಸಲಾಗುತ್ತಿದೆ. ಕಂಟೈನ್ಮೆಂಟ್‌ ವಲಯದಲ್ಲಿನ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ದಾಖಲೆಗಳೊಂದಿಗೆ ತಾಳೆ ಮಾಡಿ ಅಂತಹ ವಿದ್ಯಾರ್ಥಿಗಳಿಗೆ ಈ ಬಾರಿ ಪರೀಕ್ಷೆಗೆ ಹಾಜರಾಗಲು ವಿನಾಯ್ತಿ ನೀಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ನ್ಯಾಯಾಲಯದ ಸೂಚನೆಯಂತೆ ಪರೀಕ್ಷೆ ನಡೆಯಲಿದೆ. ಈಗಾಗಲೇ ಜಿಲ್ಲಾ ಉಪನಿರ್ದೇಶರು ಅನ್ಯ ಜಿಲ್ಲೆಗಳಿಗೆ ಪ್ರವಾಸ ಮಾಡಿ ಪರಿಶೀಲಿಸುವ ಕಾರ್ಯ ಆರಂಭವಾಗಿದೆ.

ಪ್ರತಿ ತಾಲೂಕಿನ ಕೇಂದ್ರ ಸ್ಥಾನ ಮತ್ತು ಜಿಲ್ಲಾ ಕೇಂದ್ರ ಸ್ಥಾನಗಳಲ್ಲಿ ಕನಿಷ್ಠ 2 ಹೆಚ್ಚುವರಿ ಪರೀಕ್ಷಾ ಕೇಂದ್ರ ಗುರುತಿಸಿ ಕಾಯ್ದಿರಿಸಿದ್ದೇವೆ. ರಾಜ್ಯದ ವಿವಿಧ ಇಲಾಖೆಗಳು ಸಂಪೂರ್ಣ ಸಮನ್ವಯದೊಂದಿಗೆ ಅತ್ಯಂತ ಸುರಕ್ಷಿತವಾಗಿ ಪರೀಕ್ಷೆ ನಡೆಯಲಿವೆ. ಅಲ್ಲದೇ, ಈ ಬಾರಿ ಪೂರಕ ಪರೀಕ್ಷೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಆಸ್ತಿ ತೆರಿಗೆ ಪರಿಷ್ಕರಣೆ ಮಸೂದೆ ; ವಿಧಾನ ಪರಿಷತ್ ಒಪ್ಪಿಗೆ

ರಾಜ್ಯದ ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪರಿಷ್ಕರಣೆಗೆ ಅವಕಾಶ ಕಲ್ಪಿಸುವ ತಿದ್ಧುಪಡಿ ಮಸೂದೆಗಳಿಗೆ ವಿಧಾನ ಪರಿಷತ್ ಸೋಮವಾರ ಒಪ್ಪಿಗೆ ನೀಡಿದೆ. ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪರಿಷ್ಕರಣೆಗೆ ಅವಕಾಶ ಕಲ್ಪಿಸುವ ಕರ್ನಾಟಕ ನಗರ ಪಾಲಿಕೆಗಳ ತಿದ್ದುಪಡಿ ಮಸೂದೆ 2021 ಅನ್ನು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ಮಂಡಿಸಿದರು.

ಕುರುಬರಿಗೆ ಮೀಸಲಾತಿ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು – ಈಶ್ವರಪ್ಪ!

ನೆಲಮಂಗಲ : ಕುರುಬ ಸಮುದಾಯಕ್ಕೆ ಎಸ್ಟಿ ಮೀಸಲಾತಿ ಸಿಗುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

ಸದ್ದು ಮಾಡುತ್ತಿದೆ ಶೀತಲ್ ಶೆಟ್ಟಿ ನಿರ್ದೇಶನದ ಚಿತ್ರ!

ಬೆಂಗಳೂರು : ವಿಂಡೋ ಸೀಟ್ ಗಾಗಿ ಶೀತಲ್ ಶೆಟ್ಟಿ ನಿರ್ದೇಶಕರ ಕ್ಯಾಪ್ ಹಾಕಿದ್ದು, ಸದ್ಯ ಅಧಿಕೃತ ಪ್ರಕಟಣೆ ಹೊರ ಬಂದಿದೆ.

ಸಿಬಿಎಸ್ಇ 12ನೇ ತರಗತಿ ಪರೀಕ್ಷೆ ರದ್ದು ಕೋರಿ ಅರ್ಜಿ: ವಿಚಾರಣೆ ಮುಂದೂಡಿದ ಸುಪ್ರೀಂ

ಇಂದು ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡ ನ್ಯಾಯಮೂರ್ತಿಗಳಾದ ಎ ಎಂ ಖನ್ವಿಲ್ಕರ್ ಮತ್ತು ದಿನೇಶ್ ಮಹೇಶ್ವರಿ ಅವರ ನೇತೃತ್ವದ ನ್ಯಾಯಪೀಠ ಅರ್ಜಿ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದೆ.